ಕಲಬುರಗಿ: ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಅತ್ಯಂತ ಬಲಿಷ್ಠವಾಗಿ ಬೆಳೆಯುತ್ತಿದೆ. ಮುಂದಿನ ಎಲ್ಲ ಚುನಾವಣೆಗಳಲ್ಲಿಯೂ ಸಹ ವಿರೋಧ ಪಕ್ಷಗಳ ಅಭ್ಯರ್ಥಿಗಳು ಸ್ಪರ್ಧಿಸಲೂ ಸಹ ಹಿಂದೇಟು ಹಾಕಬೇಕು. ಆ ರೀತಿಯಲ್ಲಿ ಒಂದು ಲಕ್ಷ ಸದಸ್ಯತ್ವವನ್ನು ನೊಂದಣಿ ಮಾಡಿಸಲು ಕಾರ್ಯಕರ್ತರು ಮುಂದಾಗಬೇಕು ಎಂದು ಬಿಜೆಪಿ ರಾಜ್ಯ ಕಾರ‍್ಯಕಾರಣಿ ಸದಸ್ಯ ಸುಭಾಷ್ ಬಿರಾದಾರ್ ಕಮಲಾಪೂರ್ ಅವರು ಇಲ್ಲಿ ಹೇಳಿದರು.
ಜಿಲ್ಲೆಯ ನೂತನ ತಾಲ್ಲೂಕು ಕೇಂದ್ರವಾದ ಕಮಲಾಪೂರದಲ್ಲಿ ಬಿಜೆಪಿ ಸಂಘಟನಾ ಪರ್ವ ಸದಸ್ಯತ್ವ ಅಭಿಯಾನಾ ಚಾಲನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಲಬುರ್ಗಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ್ ಮತ್ತಿಮೂಡ್ ಅವರು ಸುಮಾರು ೧೨,೦೦೦ಕ್ಕೂ ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾದರು. ಇತ್ತೀಚೆಗೆ ಜರುಗಿದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ ಅವರು ಗ್ರಾಮೀಣ ಕ್ಷೇತ್ರದಲ್ಲಿ ೨೦ ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾದರು. ಇದೇ ರೀತಿಯ ಫಲಿತಾಂಶಗಳು ಮುಂಬರುವ ಚುನಾವಣೆಯಲ್ಲಿ ಬರಬೇಕು. ಅದಕ್ಕಾಗಿ ಗುರಿ ಹೊಂದಿರುವ ಸದಸ್ಯತ್ವವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಹೇಳಿದರು.
ಕ್ಷೇತ್ರದ ಎಲ್ಲ ಸಮಸ್ಯೆಗಳಿಗೆ ಸ್ಪಂದಿಸುವೆ ಎಂದು ಭರವಸೆ ನೀಡಿದ ಅವರು, ಗುರಿ ಹೊಂದಿದ ಸದಸ್ಯತ್ವ ಯಶಸ್ವಿಯಾಗಿ ನೊಂದಣಿ ಮಾಡಲು ಅವರು ಕೋರಿದರು. ಅಧ್ಯಕ್ಷತೆಯನ್ನು ಶರಣು ಸಲಗರ್ ಅವರು ವಹಿಸಿದ್ದರು. ವೇದಿಕೆಯ ಮೇಲೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಸುವರ್ಣ ಹಣಮಂತರಾವ್ ಮಲಾಜಿ, ರಾಜು ಕೋಟೆ, ರವಿ ಬಿರಾದಾರ್, ಶಹಾಬಾದ್ ಮಂಡಲ ಅಧ್ಯಕ್ಷ ಸುಭಾಷ್ ಜಾಪೂರ್, ಸಿದ್ಧರಾಮ್ ಬಿರಾದಾರ್, ಸಿದ್ದನಗೌಡ ಪಾಟೀಲ್ ದಮ್ಮೂರ್ ಮುಂತಾದವರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…