ಕಲಬುರಗಿ: ಮಾನವ ಹಕ್ಕುಗಳ ಹೋರಾಟಗಾರ್ತಿ, ಖ್ಯಾತ ಸಂಶೋಧಕಿ ಗೇಲ್ ಒಂವೆಡ್ತ್ ನಿಧನ ಪ್ರಯುಕ್ತ ನಗರದ ಕನ್ನಡ ಭವನದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಡಿಯಲ್ಲಿ ಈಚೆಗೆ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿತ್ತು.
ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಕಾಸೆಗಾಂವ್ ಗ್ರಾಮದಲ್ಲಿ ವಾಸಿಸುತ್ತಿದ್ದ ಅಮೆರಿಕ ಮೂಲದ ಡಾ. ಗೇಲ್ ಒಂವೆಡ್ತ್ ಅವರು ಪಿಎಚ್.ಡಿ. ಅಧ್ಯಯನಕ್ಕಾಗಿ ಭಾರತಕ್ಕೆ ಬಂದು ಹಲವು ಸಾಮಾಜಿಕ ಚಳವಳಿಗಳ ಮೇಲೆ ಅಧ್ಯಯನ ನಡೆಸಿದರು ಎಂದು ಪ್ರಗತಿಪರ ಚಿಂತಕ ಪ್ರೊ. ಆರ್.ಕೆ. ಹುಡಗಿ ತಿಳಿಸಿದರು.
ಮಹಿಳಾ ಹೋರಾಟಗಾರ್ತಿ ಕೆ. ನೀಲಾ ಮಾತನಾಡಿ, ಮಹಾತ್ಮ ಜ್ಯೋತಿಬಾ ಫುಲೆ ಹಾಗೂ ಸಾವಿತ್ರಿಬಾ ಫುಲೆ ಕುರಿತು ಆಳವಾದ ಅಧ್ಯಯನ ನಡೆಸಿದರು ಮಾತ್ರವಲ್ಲ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಾಂವಿಧಾನಿಕ ವಿಚಾರ ಹಾಗೂ ಆಶಯಗಳನ್ನು ಸಮಾಜದಲ್ಲಿ ಬಿತ್ತಿದರು ಎಂದು ತಿಳಿಸಿದರು.
ಶ್ರಮಿಕ್ ಮುಕ್ತಿ ದಳದ ಸಹ ಸಂಸ್ಥಾಪಕಿಯಾಗಿದ್ದ ಡಾ. ಗೇಲ್ ತಮ್ಮ ಪತಿ ಭರತ್ ಪಟ್ನಾಗರ್ ಜೊತೆಗೂಡಿ ದಮನಿತ ಸಮುದಾಯಗಳ ಪರ ಹೋರಾಟಗಳಿಗೆ, ದಮನಿತ ಸಮುದಾಯಗಳ ಅಧ್ಯಯನಕ್ಕೆ ತಮ್ಮ ಜೀವನವನ್ನು ಮೀಸಲಿಟ್ಟಿದ್ದರು ಎಂದು ಸಭೆಯಲ್ಲಿ ಭಾಗವಹಿಸಿದ್ದ ಮರೆಪ್ಪ ಹಳ್ಳಿ, ಅರ್ಜುನ ಭದ್ರೆಯವರು ಅವರ ಹೋರಾಟದ ಸ್ವರೂಪವನ್ನು ಸ್ಮರಿಸಿಕೊಂಡರು.
ಡಾ. ಪ್ರಭು ಖಾನಾಪುರೆ, ಬಸಣ್ಣ ಸಿಂಗೆ, ದತ್ತಾತ್ರೇಯ ಇಕ್ಕಳಕಿ, ಶ್ರೀಶೈಲ ಘೂಳಿ, ಶಿವಶರಣಪ್ಪ ಮೂಳೆಗಾಂವ, ಎಸ್.ಪಿ. ಸುಳ್ಳದ, ಸೂರ್ಯಕಾಂತ ಸೊನ್ನದ ಸೇರಿದಂತೆ ಅನೇಕರು ಸಭೆಯಲ್ಲಿ ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…