ಕಲಬುರಗಿ: ಪಡಿತರ ಚೀಟಿದಾರರು ಇ-ಕೆವೈಸಿ ಮಾಡಿಕೊಳ್ಳಲು ಸೂಚನೆ

0
13

ಕಲಬುರಗಿ: ಸರ್ಕಾರದ ನಿರ್ದೇಶನದಂತೆ ಎಲ್ಲಾ ಪಡಿತರ ಚೀಟಿದಾರರು ತಮಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ, ಬಯೋಮೆಟ್ರಿಕ್ ನೀಡಿ ಇ-ಕೆವೈಸಿ (ಜೀವ ಮಾಪಕ/ಹೆಬ್ಬಟ್ಟು ಗುರುತಿನ ದೃಢೀಕರಣ) ಮಾಡಿಕೊಳ್ಳಬೇಕಾಗಿದೆ.

ಆದ್ದರಿಂದ ಜಿಲ್ಲೆಯ ಇನ್ನುಳಿದ ಪಡಿತರ ಚೀಟಿದಾರರು 2021ರ ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 10 ರೊಳಗಾಗಿ ಇ-ಕೆವೈಸಿ ಮಾಡಿಕೊಳ್ಳಬೇಕೆಂದು ಕಲಬುರಗಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Contact Your\'s Advertisement; 9902492681

ಕಲಬುರಗಿ ಜಿಲ್ಲೆಯ 983 ನ್ಯಾಯಬೆಲೆ ಅಂಗಡಿಗಳಲ್ಲಿನ ಪಿಒಎಸ್ ವ್ಯವಸ್ಥೆಯ ಮೂಲಕ ಉಚಿತವಾಗಿ ಇ-ಕೆವೈಸಿ ಮಾಡುವ ಕಾರ್ಯವು ಪ್ರಗತಿಯಲ್ಲಿದೆ. ಪಡಿತರ ಚೀಟಿಯಲ್ಲಿನ ಪ್ರತಿಯೊಬ್ಬ ಸದಸ್ಯರು ಇ-ಕೆವೈಸಿ ಮಾಡಿಸಿಕೊಳ್ಳುವುದು ಅತೀ ಅವಶ್ಯವಾಗಿದೆ. ಜಿಲ್ಲೆಯಲ್ಲಿ ಈವರೆಗೆ ಪ್ರತಿಶತ 65 ರಷ್ಟು ಆದ್ಯತಾ (ಬಿ.ಪಿ.ಎಲ್.) ಪಡಿತರ ಚೀಟಿದಾರರ ಇ-ಕೆವೈಸಿ ಆಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here