ಕಲಬುರಗಿ: ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸುವುದು ರಾಜ್ಯದ ಸ್ಲಂ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ ವಸತಿ ಯೋಜನೆಯಲ್ಲಿ ಸಬ್ಸಿಡಿ ಹೆಚ್ಚಳ ಹಾಗೂ ೨೦೧೬ ರ ಕರ್ನಾಟಕ ಕೊಳಗೇರಿಗಳ ಅಭಿವೃದ್ಧಿ ಸಮಗ್ರ ನೀತಿ ಅನ್ವಯ ಜಿಲ್ಲಾ ಮಟ್ಟದ ಸಮಿತಿ ರಚಿಸಲು ಆಗ್ರಹಿಸಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸ್ಲಂ ಜನಾಂದೋಲನ ಸಂಘಟನೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದರು. ಸಂಘಟನಾ ಸಂಚಾಲಕಿ ರೇಣುಕಾ ಸರಡಗಿ ಹಾಗೂ ಪದಾಧಿಕಾರಿಗಳು ಇದ್ದರು.