ಬಿಸಿ ಬಿಸಿ ಸುದ್ದಿ

ಶಾಂತಿ ಸ್ಥಾಪನೆಯಲ್ಲಿ ಮಾಧ್ಯಮ ಪಾತ್ರ:  ಎರಡು ದಿನಗಳ ವಿಚಾರ ಸಂಕಿರಣ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯ ಹಾಗೂ ’ಮೆನ್ ಸೆನ್ ಮೆಟ್ ಈನ್ ಮಿಸ್ಸಿ’ ಮತ್ತು ’ವಿದ್ಯಾ ಲಿಬರೇಶನ್ ಥ್ರೂ ಕಲ್ಚರಲ್ ಆಕ್ಷನ್’ (ವಿಎಲ್‌ಟಿಸಿಎ) ಸಹಯೋಗದೊಂದಿಗೆ ಶಾಂತಿ ಸ್ಥಾಪನೆಯಲ್ಲಿ ಮಾಧ್ಯಮ ಪಾತ್ರ ಕುರಿತು ಎರಡು ದಿನಗಳ ರಾಜ್ಯ ಮಟ್ಟದ ವಿಚಾರ ಸಂಕಿರಣವನ್ನು ಗುರುವಾರ ಸೆಪ್ಟೆಂಬರ್ ೨ ಮತ್ತು ೩ ರಂದು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಅನುಭವ ಮಂಟಪದಲ್ಲಿ ಏರ್ಪಡಿಸಲಾಗಿದೆ.

ವಿಎಲ್‌ಟಿಸಿಎ ನಿರ್ದೇಶಕರಾದ ಜಿ.ಎನ್.ರಾಜಶೇಖರ್ ನಾಯ್ಡು ಮತ್ತು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಟಿ.ವಿ.ಶಿವಾನಂದನ್ ಅವರು ಬುಧವಾರ ಜಂಟಿ ಹೇಳಿಕೆಯಲ್ಲಿ, ಉದಯೋನ್ಮುಖ ಪತ್ರಕರ್ತರು ಮತ್ತು ಕಾರ್ಯನಿರತ ಪತ್ರಕರ್ತರಲ್ಲಿ ಜಾಗೃತಿ ಮೂಡಿಸಲು ಈ ವಿಚಾರ ಸಂಕಿರಣ ನಡೆಸಲಾಗುತ್ತಿದೆ ಎಂದು ಹೇಳಿದರು. ಸಮಾಜದಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಘಟನೆಗಳನ್ನು ವರದಿ ಮಾಡುವಾಗ ಮತ್ತು ಪ್ರಚೋದನಕಾರಿ ಸುದ್ದಿಗಳನ್ನು ವರದಿ ಮಾಡುವಾಗ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯವಾಗುತ್ತದೆ ಎಂದರು.

ಧಾರವಾಡದ ಡಾ.ಹ?ವರ್ಧನ ಶೀಲವಂತ ಹಾಗೂ ಪ್ರಜಾವಾಣಿ ದಿನಪತ್ರಿಕೆಯ ಹುಬ್ಬಳ್ಳಿ ಆವೃತ್ತಿಯ ಮುಖ್ಯಸ್ಥರಾದ ರಶ್ಮಿ.ಎಸ್. ಮತ್ತು ಚೆನೈನ ಹಿರಿಯ ಅಭಿವೃದ್ಧಿ ಸಮಾಲೋಚಕರಾದ ಆಂಬ್ರೋಸ್ ಕ್ರಿಸ್ಟಿ ಅವರು, ಹಿರಿಯ ಪತ್ರಕರ್ತರು ವರದಿ ಮಾಡುವಿಕೆಯ ವಿವಿಧ ಅಂಶಗಳ ಕುರಿತು ಮತ್ತು ಹೇಗೆ ಜವಾಬ್ದಾರಿಯುತ ವರದಿ ಮಾಡುವಿಕೆಯ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ನಾಯ್ಡು ಹೇಳಿದರು. ಇದರಿಂದ ಸಮಾಜದಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಎಂದು ತಿಳಿಸಿದರು.

ವಿಚಾರ ಸಂಕಿರಣವನ್ನು ವಿಶ್ವವಿದ್ಯಾಲಯದ ಕುಲಸಚಿವ ಡಾ.ಅನಿಲಕುಮಾರ ಬಿಡವೆ ಉದ್ಘಾಟಿಸಲಿದ್ದು, ಸಮಕುಲಪತಿ ಪ್ರೊ. ವಿ ಡಿ ಮೈತ್ರಿ ಅಧ್ಯಕ್ಷತೆ ವಹಿಸಲಿದ್ದಾರೆ.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

7 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

18 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

18 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

20 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

20 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

20 hours ago