ಬಿಸಿ ಬಿಸಿ ಸುದ್ದಿ

ಕಠಿಣ ಪರಿಶ್ರಮ ವಿದ್ಯಾರ್ಥಿ ಜೀವನದ ಸಾಧನೆಗೆ ಮೆಟ್ಟಲು: ಕುಲಸಚಿವ ನಂದಪ್ಪ

ಆಳಂದ: ಸಾಧಕ ವಿದ್ಯಾರ್ಥಿಯು ತನ್ನ ನಿರಂತರ ಹಾಗೂ ಕಠಿಣ ಪರಿಶ್ರಮದಿಂದಲೇ ಜೀವನದ ಸಾಧನೆ ಮಾಡಲು ಸಾಧ್ಯವಿದೆ. ಕಲಿತ ಶಿಕ್ಷಣ ಸಮಾಜಕ್ಕೆ ಸದ್ಬಳಕೆ ಆಗುವ ನಿಟ್ಟಿನಲ್ಲಿ ಶ್ರಮಿಸಿದರೆ ಮಾತ್ರ ಸಾರ್ಥಕ ಬದುಕಾಗುತ್ತದೆ, ಅದುವೆ ನಿಮ್ಮ ಜೀವನದ ಸಾಧನೆಗೆ ಮೊದಲು ಮೆಟ್ಟಲಾಗುತ್ತದೆ ಎಂದು ಕಲಬುರಗಿ ವಿಶ್ವ ವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಸೋನಾರ ನಂದಪ್ಪ ಅವರು ಹೇಳಿದರು.

ಪಟ್ಟಣದ ಪ್ರತಿಷ್ಠಿತ ಜೀವನಜ್ಯೋತಿ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಪೂಜ್ಯ ರಾಜಶೇಖರ ಮಹಾಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪ್ರಥಮ ಸೆಮಿಸ್ಟರ್ ಬಿ.ಎಡ್ ವಿದ್ಯಾರ್ಥಿಗಳ ಸ್ವಾಗತ ಹಾಗೂ ನಾಲ್ಕನೇ ಸೆಮಿಸ್ಟರ್ ವಿದ್ಯಾರ್ಥಿಗಳ ಬಿಳ್ಕೋಡುಗೆ ಸಮಾರಂ ಉದ್ಘಾಟಿಸಿ ಅವರು ಮಾತನಾಡಿದರು.

ಕಲಿಕೆ ಎನ್ನುವುದು ಜೀವನ ಪರ್ಯಂತದ ನಿರಂತರ ಕ್ರಿಯಾಶೀಲವಾದ ಕಾರ್ಯವಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಮಯವನ್ನು ಹಾಳು ಮಾಡದೇ ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಸಮಾರಂಭದ ಸಾನ್ನಿಧ್ಯ ವಹಿಸಿದ್ದ ನಂದಗಾಂವ ವಿರಕ್ತ ಮಠದ ಶ್ರೀ ರಾಜಶೇಖರ ಮಹಾಸ್ವಾಮೀಜಿ ಅವರು ಮಾತನಾಡಿ, ಸಮಾಜದಲ್ಲಿನ ಎಲ್ಲ ವೃತ್ತಿಗಳಂತೆ ಶಿಕ್ಷಕ ವೃತ್ತಿಯಲ್ಲ, ಅದು ಅತ್ಯಂತ ಪಾವಿತ್ರ್ಯವುಳ್ಳ ವೃತ್ತಿಯಾಗಿದೆ. ಇಲ್ಲಿ ಸೇವೆ ಸಲ್ಲಿಸುವವರು ಸಮರ್ಪಣಾಭಾವದಿಂದ ಸೇವೆ ಸಲ್ಲಿಸಿದರೆ ಉತ್ತಮ ಸಮಾಜವನ್ನು ನಿರ್ಮಿಸಬಹುದು ಎಂದು ಶಿಕ್ಷಣದ ವ್ಯಾಪಕತೆ ದಿನೇ ದಿನೇ ವಿಸ್ತಾರವಾಗುತ್ತಿದೆ ಇಲ್ಲಿ ಕಲಿಕೆ ಮತ್ತು ಕಲಿಸುವಿಕೆಯಲ್ಲಿ ನಾವಿನ್ಯ ಪ್ರಯೋಗಗಳಾಗುತ್ತಿವೆ ಇದರ ಫಲವನ್ನು ಬಿ. ಎಡ್ ಪ್ರಶಿಕ್ಷಾಣಾರ್ಥಿಗಳು ಪಡೆದುಕೊಳ್ಳಬೇಕು. ಅಲ್ಲದೇ ಅವುಗಳನ್ನು ದಿನನಿತ್ಯದ ಪಾಠ ಪ್ರವಚನ ಚಟುವಟಿಕೆಗಳಲ್ಲಿ ಬಳಸಿಕೊಂಡು ಮುಂದಿನ ದಿನಗಳಲ್ಲಿ ಪರಿಣಾಮಕಾರಿಯಾಗಿ ಬೋಧನೆ ಮಾಡಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷರು ಮತ್ತು ಶಾಸಕರಾದ ಸುಭಾಷ್ ಗುತ್ತೇದಾರ ಅವರು, ನಮ್ಮ ಶಿಕ್ಷಣ ಮಹಾವಿದ್ಯಾಲಯವು ಜಿಲ್ಲೆಯಲ್ಲಿಯೇ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಇಲ್ಲಿನ ಪಾಠ ಪ್ರವಚನಗಳು ವಿದ್ಯಾರ್ಥಿಗಳ ಮನಸೊರೆಗೊಂಡಿವೆ ಎಂದು ಹೇಳಿದರು.

ಮಾದನಹಿಪ್ಪರ್ಗಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಬಸವರಾಜ ಶೆಟ್ಟಿ ವ್ಯಕ್ತಿತ್ವ ವಿಕಸನದ ಕುರಿತು ಉಪನ್ಯಾಸ ನೀಡಿದರು. ವೇದಿಕೆಯ ಮೇಲೆ ಸಂಸ್ಥೆಯ ಆಡಳಿತಾಧಿಕಾರಿ ಡಾ. ರಾಘವೆಂದ್ರ ಚಿಂಚನಸೂರ, ಪದವಿ ಪ್ರಾಚಾರ್ಯ ಕಲ್ಯಾಣಿ ಸಾವಳಗಿ, ಪಿಯು ಪ್ರಾಚಾರ್ಯ ಡಾ. ಅಪ್ಪಾಸಾಬ ಬಿರಾದಾರ, ಆಂಗ್ಲ ಶಾಲೆಯ ಮುಖ್ಯ ಶಿಕ್ಷಕಿ ಜ್ಯೋತಿ ವಿಶಾಖ ಇದ್ದರು.
ಪ್ರಾಚಾರ್ಯ ಅಶೋಕರೆಡ್ಡಿ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ವಿದ್ಯಾರ್ಥಿ ರೈಜಾ ಮತ್ತು ಲಕ್ಷ್ಮೀಕಾಂತ ನಿರೂಪಿಸಿದರೆ, ಮಾಲಾಶ್ರೀ ವಂದಿಸಿದರು.

ಶಿಕ್ಷಕರು ದೇಶದ ಸಂಪತ್ತು ಹೀಗಾಗಿ ಶಿಕ್ಷಕರು ಯಾವತ್ತೂ ಪ್ರಾಮಾಣಿಕತೆಯನ್ನು ಮೈಗೂಡಿಸಿಕೊಳ್ಳಬೇಕು ಇದು ಇತರರ ಮೇಲೂ ಪ್ರಭಾವ ಬೀರುವ ಸಾಧ್ಯತೆ ಇರುತ್ತದೆ. ಹೀಗಾಗಿ ಶಿಕ್ಷಕರು ಮಾದರಿಯಾಗಿರಬೇಕು. -ಸುಭಾಷ್ ಗುತ್ತೇದಾರ ಶಾಸಕರು ಆಳಂದ.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

6 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

17 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

17 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

19 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

19 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

19 hours ago