ಶಹಾಬಾದ:£ ಹರಿಯಾಣ ರಾಜ್ಯದ ಕರ್ನಾಲ್ ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಅಮಾನುಷವಾಗಿ ಲಾಠಿಛಾರ್ಜ್ ನಡೆಸಿರುವ ಹರಿಯಾಣ ರಾಜ್ಯದ ಬಿ.ಜೆ.ಪಿ. ಸರ್ಕಾರದ ನಡೆಯ ಬಗ್ಗೆ ಈ ಸರ್ಕಾರಗಳು ರೈತವಿರೋಧಿಯಾಗಿದ್ದು ಬಂಡವಾಳಶಾಹಿಗಳ ಏಜೆಂಟರಂತೆ ನಡೆದುಕೊಳ್ಳುತ್ತಿದೆ ಎಂದು ರೈತ-ಕೃಷಿಕಾರ್ಮಿಕರ ಸಂಘಟನೆ (ಆರ್.ಕೆ.ಎಸ್.) ನ ಕಲಬುರಗಿ ಜಿಲ್ಲಾ ಅಧ್ಯಕ್ಷ ಕಾಮ್ರೇಡ್ ಗಣಪತ್‍ರಾವ್.ಕೆ. ಮಾನೆ ಉಗ್ರವಾಗಿ ಖಂಡಿಸಿದರು.
ಅವರು ಬುಧವಾರ ತಾಲೂಕಿನ ಹೊನಗುಂಟಾ ಗ್ರಾಮದಲ್ಲಿ ಆರ್.ಕೆ.ಎಸ್ ತಾಲೂಕ ಸಮಿತಿಯಿಂದ ನಡೆದ ಪ್ರತಿಭಟನೆಯಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು.
ಕೇಂದ್ರ ಸರ್ಕಾರ ತಂದಿರುವ ಮೂರು ರೈತ ವಿರೋಧಿ ಮಸೂದೆಗಳು ಹಾಗೂ ವಿದ್ಯುತ್‍ಶಕ್ತಿ ಮಸೂದೆಯನ್ನು ಹಿಂತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಲು ಹೋದಾಗ ರೈತರ ಮೇಲೆ ಸರ್ಕಾರ ತನ್ನ ದೌರ್ಜನ್ಯವೆಸಗಿದೆ. ಇದು ಬಿಜೆಪಿ ಸರ್ಕಾರದ ಫ್ಯಾಸಿಸ್ಟ್ ದಾಳಿಯಾಗಿದ್ದು ಅತ್ಯಂತ ಅಮಾನವೀಯವಾಗಿ ರೈತರೊಂದಿಗೆ ನಡೆದುಕೊಂಡಿದೆ.
ಕರೋನಾ ಮಹಾಮಾರಿಯ ಈ ಕರಾಳ ಸಂದರ್ಭದಲ್ಲಿ ಜನರು ಕೆಲಸ ಕಳೆದುಕೊಂಡು ಆರ್ಥಿಕವಾಗಿ ಜರ್ಜರಿತರಾಗಿದ್ದಾರೆ. ಇದೇ ಸಮಯದಲ್ಲಿ ಆಳುವ ಎಲ್ಲಾ ಸರ್ಕಾರಗಳು ಅಗತ್ಯ ವಸ್ತುಗಳ ಬೆಲೆಗಳನ್ನು ಹೆಚ್ಚಿಸಿ ಬಂಡವಾಳಿಗರ ಜೇಬು ತುಂಬುತ್ತಿದೆ. ಹೀಗೆ ಪೆಟ್ರೋಲ್, ಡಿಸೇಲ್, ಅಡುಗೆ ಅನೀಲಗಳು ಬಡಜನರ ಜೀವನದಿಂದ ದೂರವಾಗುತ್ತಿದೆ.
ಪರಿಸ್ಥಿತಿಯ ತೀವ್ರತೆಯನ್ನು ಅರಿತು ಸರ್ಕಾರವು ಈ ಕೂಡಲೇ ಈ ಘಟನೆಯಲ್ಲಿ ನೊಂದ ಗಾಯಾಳುಗಳಿಗೆ ಸೂಕ್ತ ಪರಿಹಾರ ನೀಡಬೇಕು. ಘಟನೆಯಲ್ಲಿ ನೊಂದ ರೈತರಿಗೆ ಕೂಡಲೇ ಉಚಿತ ಔಷಧೋಪಚಾರಗಳನ್ನು ಒದಗಿಸಬೇಕು. ಇಡೀ ಘಟನೆಯ ಬಗ್ಗೆ ಮ್ಯಾಜಿಸ್ಟ್ರೇಟ್ ಮಟ್ಟದ ಅಧಿಕಾರಿಗಳು ತನಿಖೆ ನಡೆಸಿ ಘಟನೆಗೆ ಕಾರಣರಾದವರ ಮೇಲೆ ಸೂಕ್ತ ಕ್ರಮಗಳನ್ನು ಕೈಗೊಂಡು ಶಿಕ್ಷೆ ವಿಧಿಸಬೇಕೆಂದು ಹಾಗೂ ಕೇಂದ್ರ ಬಿಜೆಪಿ ಸರ್ಕಾರವು ರೈತರ ಪ್ರತಿಭಟನೆಯನ್ನು ಮನಗಂಡು ಎಚ್ಚೆತ್ತುಕೊಂಡು ತನ್ನ ಕಾರ್ಪೋರೇಟ್ ಪರ ನೀತಿಗಳನ್ನು ಹಿಂತೆಗೆದುಕೊಳ್ಳಬೇಕೆಂದು ಅಲ್ಲಿಯವರೆಗೆ ರೈತರು ತಮ್ಮ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಬೇಕೆಂದು ಕರೆ ನೀಡಿದರು.
ಆರ್.ಕೆ.ಎಸ್ ತಾಲೂಕ ಕಾರ್ಯದರ್ಶಿಗಳಾದ ಕಾಮ್ರೇಡ್ ರಾಜೇಂದ್ರ ಅತನೂರ ಅಧ್ಯಕ್ಷತೆ ವಹಿಸಿದ್ದರು. ಶಾಂತಮಲ್ಲಪ್ಪ, ಮರೆಪ್ಪಾ, ದತ್ತು, ಶ್ರೀಶೈಲ್, ನಿಂಗಪ್ಪ ಪೂಜಾರಿ ಇತರರು ಉಪಸ್ಥಿತರಿದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…