ಶಹಾಬಾದ: ಕೊರೊನಾದಿಂದ ಜೀವ ಉಳಿಸಿಕೊಳ್ಳಲು ತಪ್ಪದೇ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಿ ಎಂದು ಬಿಜೆಪಿ ಮಹಿಳಾ ಮೋರ್ಚಾ ಕಾರ್ಯದರ್ಶಿ ಸುಖಲತಾ.ಡಿ ಹೇಳಿದರು.
ಅವರು ಬುಧವಾರ ನಗರದ ಜೆಪಿ ಕಾಲೋನಿಯಲ್ಲಿ ಸಾರ್ವಜನಿಕರಿಗೆ ಆಯೋಜಿಸಲಾದ ಲಸಿಕೆ ಅಭಿಯಾ£ಕ್ಕೆ ಸಾರ್ವಜನಿಕರನ್ನು ಕರೆತಂದು ಲಸಿಕಾ ಕಾರ್ಯಕ್ರಮದ ಕುರಿತು ಮಾತನಾಡಿದರು.
ಕೋವಿಡ್ ಲಸಿಕೆ ಕುರಿತು ನಿರ್ಲಕ್ಷ ಸಲ್ಲ. ವದಂತಿಗಳಿಗೆ ಕಿವಿಗೊಡದೆ ಎಲ್ಲರೂ ಲಸಿಕೆ ಹಾಕಿಸಿಕೊಂಡು ರೋಗ ನಿರೋಧಕ ಶಕ್ತಿ ಪಡೆಯಬೇಕು. ಸಾರ್ವಜನಿಕರು ಮೊದಲು ಆರೋಗ್ಯದ ಕುರಿತು ಕಾಳಜಿ ವಹಿಸಬೇಕು. ಸದ್ಯ ಸರ್ಕಾರ sಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅವರ ಪ್ರದೇಶದಲ್ಲಿಯೇ ಕೋವಿಡ್ ಲಸಿಕೆ ಹಾಕಲು ಮುಂದಾಗಿದ್ದು , ಎಲ್ಲರೂ ಲಸಿಕೆ ತಪ್ಪದೇ ಹಾಕಿಸಿಕೊಳ್ಳಬೇಕು.
ಅಲ್ಲದೇ ಇತರರಿಗೂ ತಿಳಿಸಬೇಕು.ಇದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗಿ ಕೊರೊನಾ ವಿರುದ್ಧ ಹೋರಾಡುತ್ತದೆ. ಮಹಿಳೆಯರು ಮನೆಯಿಂದ ಹೊರಗಡೆ ಬಾರದಿರುವುದರಿಂದ ಸರ್ಕಾರ ನಿಮ್ಮ ನೆರವಿಗೆ ಬಂದು ನಿಮ್ಮ ಮನೆಯ ಹತ್ತಿರದಲ್ಲಿಯೇ ಲಸಿಕಾ ಕೇಂದ್ರವನ್ನು ತೆಗೆಯುತ್ತಿದೆ.
ಅದರ ಉಪಯೋಗ ತೆಗೆದುಕೊಳ್ಳಬೇಕು. ಲಸಿಕೆ ತೆಗೆದುಕೊಂಡವರು ನಿಮ್ಮ ಮನೆಯ ಸುತ್ತಮುತ್ತಲಿನಲ್ಲಿರುವವರಿಗೆ ಲಸಿಕೆ ಹಾಕಿಸಿಕೊಳ್ಳಲು ಅರಿವು ಮೂಡಿಸಿ.ಅಲ್ಲದೇ ಅವರನ್ನು ಲಸಿಕೆ ಹಾಕಿಸಲು ಕರೆತನ್ನಿ. ಕೊರೊನಾ ಎಲ್ಲರಿಗೂ ಸಂಕಷ್ಟ ತಂದೊಡ್ಡಿದೆ. ಸರ್ಕಾರ ಅದನ್ನು ಸಮರ್ಥವಾಗಿ ಎದುರಿಸುತ್ತಿದೆ. ಯಾರು ಭಯಪಡುವ ಅಗತ್ಯವಿಲ್ಲ. ಮಾರ್ಗಸೂಚಿ ಪಾಲಿಸುವ ಕೆಲಸ ಮಾಡಿದರೆ ಸಾಕು ಎಂದು ಅವರು ಹೇಳಿದರು. ಸೇರಿದಂತೆ ಅನೇಕರು ಇದ್ದರು.
ಶಿಲ್ಪಾ ಗಂಗಾಧರ, ನರಸುಬಾಯಿ ಸಿದ್ರಾಮ, ಶಾಂತಾ, ಸರಸ್ವತಿ ನಾಗಪ್ಪ , ರೇಣುಕಾ ಸಂತೋಷ ಹುಲಿ, ಶ್ರೀದೇವಿ ಮಲ್ಲಿಕಾರ್ಜುನ, ಅಂಗನಾಡಿ ಕಾರ್ಯಕರ್ತೆ ಅನ್ನಪೂರ್ಣ, ಶಕುಂತಲಾ ಸುನೀಲ, ವಿಶಾಲ ಪವಾರ, ರಾಜೇಶ. ಎಸ್,ಮೋನಿಕಾ.ಎಮ್ ಇತರರು ಇದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…