ಬಿಸಿ ಬಿಸಿ ಸುದ್ದಿ

ಕಲಬುರಗಿಯಲ್ಲಿ ನಕಲಿ ಮತದಾನ ಆರೋಪ: ಸ್ವತಂತ್ರ ಅಭ್ಯರ್ಥಿ ಮಗನ ಮೇಲೆ ಹಲ್ಲೆ

ಕಲಬುರಗಿ: ರಾಜ್ಯದ ಮೂರು ಮಹಾನಗರ ಪಾಲಿಕೆ ಚುನಾವಣೆಗೆ ಇಂದು ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ನಕಲಿ ಮತದಾನ ಮಾಡಲು ಯತ್ನಿಸಿರುವ ಹಿನ್ನೆಲೆಯಲ್ಲಿ ಎರಡು ಪಕ್ಷಗಳ ಕಾರ್ಯಾಕರ್ತರ ನಡುವೆ ಗಲಾಟಿ ನಡೆದಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಪಾಲಿಕೆ ವಾರ್ಡ್ ಸಂಖ್ಯೆ 13ರಿನ ಮತಗಟ್ಟೆ ಸಂಖ್ಯೆ 106 ಮತ್ತು 106/1  ಗುಲಡನ್ ಬರ್ಡ್ಸ್ ಶಾಲೆಯಲ್ಲಿ ಮಹಿಳೆ ಓರ್ವಳು ನಕಲಿ ಮತದಾನಕ್ಕೆ ನಡೆಸುತ್ತಿದ್ದಾರೆಂದು ಆರೋಪಿಸಿ ಸ್ವತಂತ್ರ ಅಭ್ಯರ್ಥಿ ನಾದೇರಾ ನಫೀಸ್ ಮಹಿಳೆಯ ಮತದಾನ ತಡೆಹಿಡಿದರು. ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿರುವ ಆಮಿರ್ ಅಹ್ಮದ್ ಮತ್ತು ಖೂಸ್ರೊ ಅಹ್ಮದ್ ಮತ್ತು ಸ್ವಾತಂತ್ರ ಅಭ್ಯರ್ಥಿಯೊಂದಿಗೆ ಗಲಾಟೆ ನಡೆಸಿದರು.

ಘಟನೆಯನ್ನು ತಡೆಯಲು ಬಂದಿದ ಸ್ವತಂತ್ರ ಅಭ್ಯರ್ಥಿಯ ಮಗ ಶೋಹೆಬ್ ಅಹ್ಮದ್ ಅವರ ಮೇಲೆ ಮರಕಾಸ್ತ್ರದಿಂದ ಹಲ್ಲೆ ನಡೆದಿತ್ತು. ಇದರಿಂದ ಕೆಲಹೊತ್ತು ಮತಗಟ್ಟೆಯಲ್ಲಿ ಗೊಂದಲದ ವಾತಾವರಣೆ ನಿರ್ಮಾಣವಾಯಿತು.

ಘಟನೆಯಲ್ಲಿ ಗಾಯಗೊಂಡ ಶೋಹೆಬ್ ಗೆ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಕುರಿತು ರೋಜಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸ್ವಾತಂತ್ರ ಅಭ್ಯರ್ಥಿ ತಂದೆಯಾದ ಎಕ್ಬಾಲ್ ಅಹ್ಮದ್ ಸಿನ್ನಿಫರೋಶ್ ತಿಳಿಸಿದ್ದಾರೆ.

ಮತಗಟ್ಟೆಯಲ್ಲಿ ಇಂತಹ ಘಟನೆ ನಡೆಸಿದವರ ಮೇಲೆ ಕ್ರಮ ಕೈಗೊಂಡು ನಮಗೆ ನ್ಯಾಯ ಒದಗಿಸಿಕೊಡಬೇಕೆಂದು ಜಿಲ್ಲಾಡಳಿತಕ್ಕೆ ಸಿನ್ನಿಫರೋಶ್ ಮನವಿ ಮಾಡಿದ್ದಾರೆ.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

4 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

14 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

14 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

17 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

17 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

17 hours ago