ಬಿಸಿ ಬಿಸಿ ಸುದ್ದಿ

ಮೊರಾರ್ಜಿ ದೇಸಾಯಿ ವಸತಿ ಶಾಲೆ: ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕಲಬುರಗಿ: ಪ್ರಸಕ್ತ 2021-22ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ ಆಂಗ್ಲ ಮಾಧ್ಯಮ ಮಾದರಿ ಶಾಲೆಗÀಳಲ್ಲಿ ಹಾಗೂ ಮೋರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ 6 ರಿಂದ 10ನೇ ತರಗತಿಗಳಿಗೆ ಆಂಗ್ಲ ಮಾಧ್ಯಮದಲ್ಲಿ ಬೋಧನೆ ಮಾಡಲು ಖಾಲಿಯಿರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಕನ್ನಡ ವಿಷಯದ 1 ಹುದ್ದೆ, ಇಂಗ್ಲೀಷ ವಿಷಯದ 7 ಹುದ್ದೆ ಹಾಗೂ ಸಮಾಜ ವಿಜ್ಞಾನ ವಿಷಯದ 4 ಹುದ್ದೆಗಳಿಗೆ ಅಭ್ಯರ್ಥಿಗಳು ಬಿ.ಎ. ಬಿ.ಇಡಿ ಪಾಸಾಗಿರಬೇಕು. ವಿಜ್ಞಾನ ವಿಷಯದ 4 ಹುದ್ದೆಗಳಿಗೆ ಬಿ.ಎಸ್ಸಿ. ಬಿ.ಇಡಿ. (ಸಿ.ಬಿ.ಝಡ್.) ಹಾಗೂ ಗಣಿತ ವಿಷಯದ 3 ಹುದ್ದೆಗಳಿಗೆ ಅಭ್ಯರ್ಥಿಗಳು ಬಿ.ಎಸ್ಸಿ. ಬಿ.ಇಡಿ (ಪಿ.ಸಿ.ಎಂ.) ಪಾಸಾಗಿರಬೇಕು.

ಅಭ್ಯರ್ಥಿಗಳು ಟಿ.ಇ.ಟಿ. ಉತ್ತೀರ್ಣರಾಗಿರಬೇಕು. ಕನಿಷ್ಠ ಎರಡು ವರ್ಷದ ಅನುಭವ ಹೊಂದಿರುವ ಹಾಗೂ ಸ್ಥಳೀಯ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಇದೇ ಸೆಪ್ಟೆಂಬರ್ 9 ರೊಳಗಾಗಿ ಸಂಬಂಧಪಟ್ಟ ಅಗತ್ಯ ದಾಖಲೆಗಳೊಂದಿಗೆ ಕಲಬುರಗಿ, ಚಿತ್ತಾಪೂರ, ಆಳಂದ, ಸೇಡಂ, ಹಾಗೂ ಜೇವರ್ಗಿ ತಾಲೂಕುಗಳಲ್ಲಿನ ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ಅವಶ್ಯಕ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ಕಲಬುರಗಿ ಹಾಗೂ ಅಫಜಲಪೂರ-(ಮೊಬೈಲ್ ಸಂಖ್ಯೆ 7899755427), ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ಜೇವರ್ಗಿ-(9535775141), ತಾಲ್ಲೂಕಾ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ಆಳಂದ-(8147775722), ತಾಲ್ಲೂಕಾ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ಸೇಡಂ- (7892369798), ತಾಲ್ಲೂಕಾ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ಚಿತ್ತಾಪೂರ-(9741168681) ಹಾಗೂ ಕಲಬುರಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿ ದೂರವಾಣಿ ಸಂಖ್ಯೆ 08472-247260ಗೆ ಸಂಪರ್ಕಿಸಲು ಕೋರಲಾಗಿದೆ.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

5 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

16 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

16 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

18 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

18 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

18 hours ago