ಯಾದಗಿರಿ ಜಿಲ್ಲೆಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್ ರಚಿಸಿ: ಸುರೇಶ ಸಜ್ಜನ್

0
22

ಸುರಪುರ: ಸದ್ಯ ಕಲಬುರಗಿ ಡಿ.ಸಿ.ಸಿ. ಬ್ಯಾಂಕ್ ವ್ಯಾಪ್ತಿಯಲ್ಲಿರುವ ಯಾದಗಿರಿ ಜಿಲ್ಲೆಯನ್ನು ಬೇರ್ಪಡೆಗೊಳಿಸುವ ಮೂಲಕ ಯಾದಗಿರಿ ಜಿಲ್ಲೆಗೆ ಪ್ರತ್ಯೇಕವಾಗಿ ಡಿಸಿಸಿ ಬ್ಯಾಂಕ್ ಮಂಜೂರಗೊಳಿಸಬೇಕು ಎಂದು ಕೆವೈಡಿ.ಸಿ.ಸಿ. ಬ್ಯಾಂಕ್ ಉಪಾಧ್ಯಕ್ಷ ಸುರೇಶ ಸಜ್ಜನ್ ಹಾಗೂ ಬ್ಯಾಂಕಿನ ನಿರ್ದೇಶಕ ಹಾಗೂ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ(ಟಿಎಪಿಸಿಎಂಎಸ್) ಅಧ್ಯಕ್ಷ ಬಾಪುಗೌಡ.ಡಿ.ಪಾಟೀಲ,ನಿರ್ದೇಶಕರಾದ ಗುರುನಾಥರೆಡ್ಡಿ ಪಾಟೀಲ ಶಹಾಪುರ ಹಾಗೂ ಸಿದ್ರಾಮರೆಡ್ಡಿ ಪಾಟೀಲ ಕೌಳೂರು ಯಾದಗಿರಿ ಅವರು ಸಹಕಾರ ಸಚಿವ ಎಸ್.ಟಿ.ಸೋಮಶೇಖರ ಅವರನ್ನು ಒತ್ತಾಯಪೂರ್ವಕವಾಗಿ ಮನವಿ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು ಯಾದಗಿರಿ ಜಿಲ್ಲೆಯಲ್ಲಿ ೧ಸಾವಿರ ವಿವಿಧ ಸಹಕಾರಿ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿದ್ದು ಕಲ್ಯಾಣ ಕರ್ನಾಟಕದ ಹಿಂದುಳಿದ ಜಿಲ್ಲೆಯಾಗಿರುವ ಯಾದಗಿರಿ ಜಿಲ್ಲೆಗೆ ಪ್ರತ್ಯೇಕ ಡಿ.ಸಿ.ಸಿ. ಬ್ಯಾಂಕ್ ರಚಿಸಿದಲ್ಲಿ ಈ ಭಾಗದ ರೈತರಿಗೆ ಹಾಗೂ ಸಹಕಾರಿ ಸಂಸ್ಥೆಗಳಿಗೆ ತುಂಬಾ ಅನುಕೂಲವಾಗುತ್ತದೆ ಹಾಗೂ ಸಹಕಾರ ಕ್ಷೇತ್ರದಲ್ಲಿ ಜಿಲ್ಲೆ ಅಭಿವೃದ್ಧಿಗೊಳ್ಳಲು ಅನುಕೂಲವಾಗಲಿದೆ ಎಂದು ಅವರು ತಿಳಿಸಿದ್ದಾರೆ.

Contact Your\'s Advertisement; 9902492681

ಯಾದಗಿರಿ ಜಿಲ್ಲೆ ಅಸ್ತಿತ್ವಕ್ಕೆ ಬಂದು ದಶಕ ವರ್ಷಗಳು ಕಳೆದರೂ ಜಿಲ್ಲಾ ಮಟ್ಟದಲ್ಲಿ ಇಲ್ಲಿಯವರೆಗೂ ಯಾವುದೇ ಸಹಕಾರ ಸಂಸ್ಥೆಗಳು ನೊಂದಣಿಯಾಗಿರುವದಿಲ್ಲ ಈ ಕುರಿತು ಅನೇಕ ಬಾರಿ ಸರಕಾರದ ಗಮನ ಸೆಳೆದರೂ ಕೂಡಾ ಆಸಕ್ತಿ ವಹಿಸುತ್ತಿಲ್ಲ ಮುಂದಿನ ದಿನಗಳಲ್ಲಿ ಜಿಲ್ಲೆಯ ನಾಲ್ಕು ಜನ ಶಾಸಕರು ಸರಕಾರದ ಮೇಲೆ ಒತ್ತಡ ತರುವ ಮೂಲಕ ಜಿಲ್ಲಾ ಮಟ್ಟದಲ್ಲಿ ವಿವಿಧ ಸಹಕಾರ ಸಂಸ್ಥೆಗಳನ್ನು ಪ್ರಾರಂಭಿಸಬೇಕು ಎಂದು ಅವರು ವಿನಂತಿಸಿದ್ದಾರೆ.

ಅಲ್ಲದೆ ಕಲಬುರಗಿ,ಬೀದರ ಹಾಗೂ ಯಾದಗಿರಿ ಜಿಲ್ಲೆಗಳ ವ್ಯಾಪ್ತಿಯನ್ನೊಳಗೊಂಡ ಕಲಬುರಗಿ ಹಾಲು ಒಕ್ಕೂಟ ಆಡಳಿತ ಮಂಡಳಿಯವರು ಯಾದಗಿರಿ ಜಿಲ್ಲೆಯನ್ನು ಕಡೆಗಣಿಸುತ್ತಾ ಬಂದಿದ್ದು ಈ ಕುರಿತು ಅನೇಕ ಬಾರಿ ಒಕ್ಕೂಟದ ಆಡಳಿತ ಮಂಡಳಿಯವರಿಗೆ ಯಾದಗಿರಿ ಜಿಲ್ಲೆಯಲ್ಲಿ ಸಹಕಾರ ಸಂಘಗಳನ್ನು ಪುನಶ್ಚೇತನಗೊಳಿಸಿ ಹಾಲು ಶೇಖರಣಾ ಮಾರ್ಗಗಳನ್ನು ಪ್ರಾರಂಭಿಸುವಂತೆ ಒತ್ತಾಯಿಸುತ್ತಾ ಬರಲಾಗುತ್ತಿದ್ದರೂ ಕೂಡಾ ಯಾದಗಿರಿ ಜಿಲ್ಲೆಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗುತ್ತಿದೆ ಈ ಕುರಿತು ಯಾದಗಿರಿ ಜಿಲ್ಲೆಗೆ ಭೇಟಿ ನೀಡುತ್ತಿರುವ ಸಹಕಾರ ಸಚಿವರದ ಎಸ್.ಟಿ.ಸೋಮಶೇಖರ ಅವರು ಜಿಲ್ಲೆಗೆ ಹಾಲು ಒಕ್ಕೂಟ ಪ್ರಾರಂಭಿಸುವ ಮೂಲಕ ನ್ಯಾಯ ಒದಗಿಸಿಕೊಡಬೇಕು ಎಂದು ಅವರು ವಿನಂತಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here