ತಾಲೂಕ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ

ಚಿತ್ತಾಪುರ: ಕಲ್ಯಾಣ ಕರ್ನಾಟಕ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟದ ವತಿಯಿಂದ ತಾಲೂಕ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪಟ್ಟಣದ ಶ್ರೀಮತಿ ಅಣ್ಣೇಮ್ಮಾ ಗೊಬ್ಬುರ ಪ್ರೌಢ  ಶಾಲೆಯ ಮುಖ್ಯಶಿಕ್ಷಕಿ ಶ್ರೀಮತಿ ಕಸ್ತೂರಿಬಾಯಿ. ಎಸ್ ಪಾಟೀಲ್ ಹಾಗೂ ಜ್ಞಾನಗಂಗಾ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಪ್ರಕಾಶ ಅರಸಿಕೆರೆ ಅವರು ಆಯ್ಕೆಯಾಗಿದ್ದಾರೆ ಎಂದು ಒಕ್ಕೂಟದ ಅಧ್ಯಕ್ಷ ಶಿವಕುಮಾರ ಘಾವಾರಿಯಾ ತಿಳಿಸಿದ್ದಾರೆ.

ಶುಕ್ರವಾರ ಪಟ್ಟಣದ ಶ್ರೀಮತಿ ಸೀಮಾ ಘಾವಾರಿಯಾ ಪ್ರೌಢ ಶಾಲೆಯಲ್ಲಿ ಆಯ್ಕೆ ಪ್ರಕ್ರಿಯೆಯನ್ನು ಹಮ್ಮಿಕೊಂಡಿಳ್ಳಲಾಗಿತ್ತು. ಸುಮಾರು 5 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿರುವ ಉತ್ತಮ ಶಿಕ್ಷಕರ ಹೆಸರುಗಳನ್ನು ಆಯಾ ಶಾಲೆಗಳ ಆಡಳಿತ ಮಂಡಳಿಯವರು ನೀಡಿದ್ದರು,ಅದರ ಅನುಗುಣವಾಗಿ

ತಾಲೂಕಿನ ಪ್ರತಿ ಶಾಲೆಯ ಒಬ್ಬ ಶಿಕ್ಷಕರ ಹೆಸರನ್ನು ಚೀಟಿಯಲ್ಲಿ ಬರೆದು ಲಾಟರಿಯ ಮೂಲಕ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳಾದ ಪ್ರದೀಪ ಕುಲಕರ್ಣಿ,ರವಿ ಕುಲಕರ್ಣಿ, ಜಗದೇವ ದಿಗ್ಗಾಂವಕರ್, ಶಿಕ್ಷಕರಾದ ಬಸವರಾಜ ಬೊಮ್ಮನಹಳ್ಳಿ ಸೇರಿದಂತೆ ಇನ್ನಿತರರು ಇದ್ದರು.

emedialine

Recent Posts

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

4 mins ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

11 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

14 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

14 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

14 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

14 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420