ಬಿಸಿ ಬಿಸಿ ಸುದ್ದಿ

ರೈತರು ಕೃಷಿ ಕಾಯ್ದೆ ಅರ್ಥ ಮಾಡಿಕೊಂಡಗ ಆದಾಯ ಹೆಚ್ಚಳ: ಶೋಭಾ ಕರಂದ್ಲಾಜೆ

ಕಲಬುರಗಿ: ರೈತರು ಕೃಷಿ ಕಾಯ್ದೆಯನ್ನು ಅರ್ಥಮಾಡಿಕೊಂಡು ಮಿಶ್ರ ಬೆಳೆಗಳೆಯುವ ಮೂಲಕ ಆದಾಯ ದ್ವೀಗುಣ ಮಾಡಿಕೊಂಡಿಗ ಮಾತ್ರ ರೈತರ ಆತ್ಮಹತ್ಯೆ ಕಡಿಮೆಯಾಗುತ್ತದೆ ಎಂದು ಕೇಂದ್ರ ಕೃಷಿ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಅವರು ಇಂದು ನಗರದ ಬಿಜೆಪಿ ಕಚೇರಿಯಲ್ಲಿ ಕರೆದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ರೈತರ ಆತ್ಮಹತ್ಯೆ ಕಡಿಮೆ ಆಗಬೇಕು ಅಂದ್ರೆ ರೈತನಿಗೆ ಆದಾಯ ಹೆಚ್ಚಾಗ ಬೇಕು. ರೈತರು ಹಲವಾರು ವರ್ಷಗಳಿಂದ ಕಷ್ಟದಲ್ಲಿದ್ದಾರೆ. ಎಷ್ಟೇ ಕೃಷಿ ಮಾಡಿದ್ರು ನೆಮ್ಮದಿ ಅನಿಸಿಲ್ಲ. ಕೃಷಿ ಲಾಭದಾಯಕ ಅಲ್ಲ ಎನಿಸಿದೆ, ಹೀಗಾಗಿ ಕೃಷಿಕರ ಮಕ್ಕಳು ಕೆಲಸಕ್ಕಾಗಿ ವಲಸೆ ಹೋಗ್ತಿದ್ದಾರೆ. ಕೃಷಿಕ, ಕೃಷಿಯಲ್ಲಿರುವ ಹಾಗೆ ಮಾಡೋದು ಸವಾಲಿನ ಕೆಲಸ. ಕೇಂದ್ರ ಸರ್ಕಾರದ ಕೃಷಿ ಸವಲತ್ತುಗಳನ್ನು ರೈತರು ಪಡೆದುಕೊಳ್ಳಬೇಕು ಎಂದರು.

ಇಂದು ಸಮಾಜ ಮತ್ತೆ ಕೃಷಿ ಕಡೆ ಮುಖ ಮಾಡ್ತಿದ್ದಾರೆ‌. 2014ರ ಚುನಾವಣೆಯಲ್ಲಿ ಯುಪಿಎ ಸರ್ಕಾರದ ಬಜೇಟ್ ೨೩ ಸಾವಿರ ಕೋಟಿ ಮಾತ್ರ. 2021 ರಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ಬಜೇಟ್ 1,23,000 ಕೋಟಿ. ನಮ್ಮ ದೇಶದ ಕೃಷಿಯನ್ನ ವೈಜ್ಞಾನಿಕ ಗೊಳಿಸೊದು. ಕೃಷಿ ರೈತರಿಗೆ ಲಾಭದಾಯಕ ಗೊಳಿಸೋದು ನಮಗೆ ಸವಾಲಿನ ಕೆಲಸ. ಕೃಷಿ ಉತ್ಪನ್ನ ರಫ್ತು ಮಾಡುವಲ್ಲಿ ನಾವು 9ನೇ ಸ್ಥಾನಕ್ಕೆ ಬಂದಿದ್ದೇವೆ 70% ನಷ್ಟು ಎಣ್ಣೆ ಕಾಳುಗಳನ್ನು ಬೇರೆ ದೇಶದಿಂದ ತರಿಸಿಕೊಳ್ಳುತ್ತಿದ್ದೇವೆ. ಎಣ್ಣೆ ಕಾಳಿನಲ್ಲಿ ನಾವು ಸ್ವಾವಲಂಬಿ ಆಗಬೇಕು. ಅದಕ್ಕಾಗಿ ಎಣ್ಣೆ ಕಾಳು ಬಿತ್ತನೆ ಬೀಜಗಳನ್ನು ನಾವು ರೈತರಿಗೆ ಉಚಿತವಾಗಿ ಕೊಡುತ್ತಿದ್ದೇವೆ.

ಎಣ್ಣೆ ಕಾಳಿನಲ್ಲಿ ನಾವು ಸ್ವಾವಲಂಬಿ ಆಗಬೇಕು. ಅದಕ್ಕಾಗಿ ಎಣ್ಣೆ ಕಾಳು ಬಿತ್ತನೆ ಬೀಜಗಳನ್ನು ನಾವು ರೈತರಿಗೆ ಉಚಿತವಾಗಿ ಕೊಡುತ್ತಿದ್ದೇವೆ. ದೇಶದ ಜಿಡಿಪಿಯಲ್ಲಿ ಕೃಷಿಯ ಪಾಲು 20.22 ಪರ್ಸೆಂಟ್. ಸಣ್ಣ ರೈತರನ್ನು ಒಟ್ಟುಗೂಡಿಸಿ ಸಂಘಗಳನ್ನು ಮಾಡುವ ಕೆಲಸ ಮಾಡಬೇಕಾಗುತ್ತದೆ. ಸಣ್ಣ ರೈತರಿಗೆ ಕೃಷಿ ಸಾಧನಗಳನ್ನು ಬಾಡಿಗೆಗೆ ಕೋಡುವ ಕೆಲಸ ಮಾಡಬೇಕಿದೆ‌. ಕೃಷಿ ಉತ್ಪನ್ನ ಉತ್ಪಾದನೆ, ಪ್ರೋಸೆಷಸ್, ಮಾರ್ಕೆಟಿಂಗ್ ಗೆ ಕೇಂದ್ರ ಸರ್ಕಾರ ಒತ್ತು ಕೊಡುತ್ತಿದೆ. ಇಥೇನಾಲ್ ಬೇಸ್ ಸಕ್ಕರೆ ಕಾರ್ಖಾನೆ ಆಗಬೇಕು. ಸಕ್ಕರೆ ಕಾರ್ಖಾನೆಗಳಿಗೆ ಈಗಾಗಲೆ ಕೇಂದ್ರ ಸರ್ಕಾರ ಸೂಚನೆ ಕೊಟ್ಟಿದೆ. ತೊಗರಿ ಕಾಳಿಗೆ 6300, ಹೆಸರು ಕಾಳಿಗೆ 7200 ರೂ. ಎಂಎಸ್ ಪಿ ನಿಗದಿ ಮಾಡಲಾಗಿದೆ  ಎಂದು ತಿಳಿಸಿದ್ದಾರೆ.

ಇನ್ನು ಇದೆ ಮಾತನಾಡಿದ ಅವರು, ದೆಹಲಿ ರೈತರ ಹೋರಾಟಗಳು ಪ್ರಕ್ರಿಯೆ ನೀಡಿದರು. ಹೀಗಾಗಲೆ ರೈತರಿಂದಿಗೆ 11 ರೌಂಡ್ಸ್ ಹೋರಾಟ ನಿರತ ರೈತರ ಜೊತೆ ಮಾತುಕತೆ ಆಗಿದೆ, ರೈತರ ಜೊತೆ ಮಾತಮಾಡದಲು ನಾವು ಸದಾ ಸಿದ್ದರಿದ್ದೇವೆ. ಆದ್ರೆ ಕೃಷಿ ಕಾಯ್ದೆ ಬಿಲ್ ಯಾಕೆ ಮಾಡಿದ್ದೇವೆ ಅನ್ನೋದು ಕುರಿತು ಹೋರಾಟ ರೈತರು ಅರ್ಥ ಮಾಡಿಕೊಳ್ಳಬೇಕು ಎಂದರು.

emedialine

Recent Posts

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

7 mins ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

2 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

2 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

2 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

3 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

4 hours ago