ಕಲಬುರಗಿ: ಚುನಾವಣೆ ಕಾರ್ಯ ಚಟುವಟಿಕೆಯಲ್ಲಿ ಭಾಗವಹಿಸಿದ ಆಶಾ ಕಾರ್ಯಕರ್ತೆಯರ ಖರ್ಚು, ವೆಚ್ಚ ಹಾಗೂ ಭತ್ಯೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಇಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಆಗ್ರಹಿಸಿದೆ.
ಈ ಮೊದಲು ಕೆಲವು ದಿನಗಳ ಹಿಂದೆ ನಡೆದ ಗ್ರಾಮ ಪಂಚಾಯತಿ ಚುನಾವಣೆ ಹಾಗೂ ಇನ್ನಿತರ ಚುನಾವಣೆಗಳಲ್ಲಿಯೂ ಹಾಗೂ ಶಾಲಾ ಕಾಲೇಜುಗಳ ಪರೀಕ್ಷೆಗಳಲ್ಲಿ ಕೆಲಸಕ್ಕೆ ನಿಯೋಜಿಸಿದಾಗಲೂ ಸಹ ಇದೆ ಪರಿಸ್ಥಿತಿಯನ್ನು ಅನುಭವಿಸಿದ್ದಾರೆ. ಆದ್ದರಿಂದ ಇಲಾಖೇತರ ಕಾರ್ಯಚಟುವಟಿಕೆಯಲ್ಲಿ ಭಾಗವಹಿಸಿದ ಆಶಾ ಕಾರ್ಯಕರ್ತೆಯರಿಗೆ ಸೂಕ್ತವಾಗಿ ಖರ್ಚು-ವೆಚ್ಚಗಳ ಭತ್ಯೆಯನ್ನು ನೀಡಿಲ್ಲ.
ಆಶಾಗಳ ಇತರ ಬೇಡಿಕೆಗಳ ಬಗ್ಗೆ ಹಲವಾರು ಬಾರಿ ಜಿಲ್ಲಾ ಆರೋಗ್ಯ ಅಧಿಕಾರಿಗಳ ಗಮನಕ್ಕೆ ತಂದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ. ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆ ಕಾರ್ಯದಲ್ಲಿ ಜಿಲ್ಲೆಯ ಎಲ್ಲಾ ತಾಲೂಕಿನಿಂದಲೂ ನೂರಾರು ಜನ ಆಶಾ ಕಾರ್ಯಕರ್ತೆಯರು ಮಾನ್ಯ ಜಿಲ್ಲಾ ಆರೋಗ್ಯ ಅಧಿಕಾರಿಗಳ ನಿರ್ದೇಶನದಂದೆ ಕಾರ್ಯ ನಿರ್ವಹಿಸಿದ್ದಾರೆ.
ಇವರು ದೂರದ ಹಳ್ಳಿಗಳಿಂದ ತಮ್ಮ ಸ್ವಂತ ಹಣದಲ್ಲಿ ಸಾರಿಗೆ ವೆಚ್ಚ ಭರಿಸಿದ್ದಾರೆ. ನಗರಕ್ಕೆ ಬಂದ ನಂತರ ಆಟೋ ಚಾರ್ಜ, ಉಪಹಾರ, ಊಟದ ಸಲುವಾಗಿ ನೂರಾರು ರೂಪಾಯಿ ಖರ್ಚು ಮಾಡಿದ್ದಾರೆ. ಬಹುಪಾಲು ಆಶಾ ಕಾರ್ಯಕರ್ತೆಯರು ಒಂದು ದಿನ ಮುಂಚೆ ರಾತ್ರಿಯೇ ಕಲಬುರಗಿ ನಗರದಲ್ಲಿ ಬಂದು ತಂಗಿದ್ದಾರೆ. ಆದರೆ ಅವರಿಗೆ ಇಲಾಖೆಯಿಂದಾಗಲಿ ಅಥವಾ ಚುನಾವಣಾಧಿಕಾರಿಗಳಿಂದಾಗಲಿ ಸೌಲಭ್ಯ ಸಹಕಾರ ಸಿಗಲಿಲ್ಲ ಎಂದು ತಿಳಿಸಿ, ಖರ್ಚು ಮಾಡಿದ ಆಶಾ ಕಾರ್ಯಾಕರ್ತೆಯರ ಖರ್ಚು, ವೆಚ್ಚ ಹಾಗೂ ಭತ್ಯೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ವಿ.ಜಿ ದೇಸಾಯಿ, ಜಯಶ್ರೀ ಸೇರಿದಂತೆ ಹಲವರು ಇದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…