ಬೆಂಗಳೂರು: ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಕಲಬುರಗಿ ನಗರದ 181 ಮಂದಿ ಕಾರ್ಯಕರ್ತರು ಕೊಡಮಾಡಿರುವ 10 ಲಕ್ಷ ರುಪಾಯಿ ದೇಣಿಗೆಯ ಚೆಕ್ ಗಳನ್ನು ಜಿಲ್ಲಾಧ್ಯಕ್ಷ ಜಗದೇವ್ ಗುತ್ತೇದಾರ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಹಸ್ತಾಂತರಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ಅವರು ಬೀದರ್, ಕಲ್ಬುರ್ಗಿ ಮತ್ತು ಯಾದಗಿರಿ ಜಿಲ್ಲೆ ಕಾಂಗ್ರೆಸ್ ಮುಖಂಡರ ಜತೆ ರಾಜಕೀಯ ವಿದ್ಯಮಾನ, ಪಕ್ಷ ಸಂಘಟನೆ ಬಲವರ್ಧನೆ, ಮುಂಬರುವ ಚುನಾವಣೆಗಳ ಸಂಬಂಧ ಭಾನುವಾರ ಸಮಾಲೋಚನೆ ನಡೆಸಿದರು.
ಸಲೀಂ ಅಹಮದ್, ವಿಧಾನಸಭೆಯಲ್ಲಿ ಪಕ್ಷದ ಮುಖ್ಯಸಚೇತಕ ಡಾ. ಅಜಯ್ ಸಿಂಗ್, ಮಾಜಿ ಸಚಿವರಾದ ಪ್ರಿಯಾಂಕ್ ಖರ್ಗೆ, ಬಾಬುರಾವ್ ಚೌಹಾಣ್, ಮುಖಂಡರಾದ ನರಸಿಂಗರಾವ್ ಸೂರ್ಯವಂಶಿ, ಅಶೋಕ್ ಖೇಣಿ, ವಿಜಯ್ ಸಿಂಗ್, ಮಾಲಾ ಬಿ. ರಾವ್, ಬಸವರಾಜ್, ಮಾಜಿ ಎಂಎಲ್ಸಿ ಅಲ್ಲಮಪ್ರಭು ಪಾಟೀಲ್ ಮತ್ತಿತರರು ಭಾಗವಹಿಸಿದ್ದರು.