ಬಿಸಿ ಬಿಸಿ ಸುದ್ದಿ

ಬ್ರಾಹ್ಮಣ ಸಮಾಜಕ್ಕೆ ವಿಜಯಕುಮಾರ ಕೋಥಳಿಕರ ಅಧ್ಯಕ್ಷ

ಆಳಂದ: ಸಮಾಜದಲ್ಲಿ ಮೇಲ್ವರ್ಗ ಎನಿಸಿಕೊಂಡಿರುವ ಬ್ರಾಹ್ಮಣ ಸಮಾಜ ಇಂದು ಆರ್ಥಿಕ ಮತ್ತು ಸಮಾಜಿಕವಾಗಿ ತೀರಾ ಹಿಂದುಳಿದುಕೊಂಡಿದ್ದು, ಸಮಾಜದ ಕೆಲವೇ ಕುಟುಂಬಗಳು ಹೊರತು ಪಡಿಸಿದರೆ ಸಾಕಷ್ಟು ಜನರು ಇಂದಿಗೂ ಬಡತನದಲೇ ಜೀವಿಸುತ್ತಿದ್ದಾರೆ. ಇಂಥವರ ಅಭಿವೃದ್ಧಿಗಾಗಿ ಸಮಾಜ ಕಾರ್ಯಕ್ಕೆ ಎಲ್ಲರನ್ನೂ ಒಗ್ಗೂಡಿಸಿ ಕಾರ್ಯಪ್ರರ್ವತರಾಗುವಂತೆ ಮಾಡುವುದೇ ನನ್ನ ಧೇಯೋದ್ದೇಶವಾಗಿದೆ ಎಂದು ಬ್ರಾಹ್ಮಣ ಸಮಾಜದ ತಾಲೂಕು ನೂತನ ಅಧ್ಯಕ್ಷ ವಿಜಯಕುಮಾರ ಕೋಥಳಿಕರ್ ಅವರು ಇಂದಿಲ್ಲಿ ಹೇಳಿದರು.

ಪಟ್ಟಣದ ನಗರೇಶ್ವರ ರಾಮಮಂದಿರದಲ್ಲಿ ಕರೆದ ತಾಲೂಕು ಬ್ರಾಹ್ಮಣ ಸಮಾಜದ ಸಭೆಯಲ್ಲಿ ತಮ್ಮನು ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಮೇಲೆ ಸಮಾಜ ಬಾಂಧವರು ನೀಡಿದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಸಮಾಜದ ಹಿಂದಿನ ಅಧ್ಯಕ್ಷರಾಗಿದ್ದ ಹಿರಿಯ ನ್ಯಾಯವಾದಿ ಬಿ.ಎ.ದೇಶಪಾಂಡೆ ಅಧ್ಯಕ್ಷರ ಆಯ್ಕೆ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ತಾಲೂಕಿನಲ್ಲಿ ನಮ್ಮ ಸಮಾಜದ ಭಾಂದವ್ಯರು ಇನ್ನೂ ಬಹಳಷ್ಟು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಬಡತನದಲ್ಲಿ ಇದ್ದಾರೆ, ಕೋಥಳಿಕರ ಅವರು ಪ್ರತಿ ಒಂದು ಹಳ್ಳಿಗೆ ಭೇಟಿ ನೀಡಿ ಬಾಂಧವರ ಸಮಸ್ಯೆ ಅರಿತು ಸಮಾಜವನ್ನು ಮುಂದು ನಡೆಸಿಕೊಂಡು ಹೋಗಬೇಕು ಮತ್ತು ಇನ್ನೂಳಿದ ಪದಾಧಿಕಾರಿಗಳನ್ನು ಅಧ್ಯಕ್ಷರು ನೇಮಕ ಮಾಡಿಕೊಂಡು ಮುನ್ನಡೆಯಬೇಕೆಂದು ಸಲಹೆ ಸೂಚನೆ ನೀಡಿದ್ದಾರೆ.

ಸಮಾಜದ ಮುಖಂಡ ರವೀಂದ್ರ ಕುಲಕರ್ಣಿ, ವಿಜಕುಮಾರ ಚಿಟ್ಟಗೂಪಕರ, ಬಲಬೀಮ ಕುಲಕಣಿ, ವಿಲಾಸ ಪೋತ್ನನಿಸ, ಕಿಶೋರ ದೇಶಪಾಂಡೆ, ಜಯವಂತ ಕುಲಕರ್ಣಿ, ಕಿಶೋರ ಸಂಗೋಳಿಕರ, ರಾಘವೇಂದ್ರ ತಡಕಲ್, ಗೋವಿಂದ ಕುಲಕರ್ಣಿ, ಪ್ರಕಾಶ ಕುಲಕರ್ಣಿ, ರತ್ನಾಕರ ಕುಲಕರ್ಣಿ, ಮೋಹನರಾವ ಕುಲಕರ್ಣಿ, ಸಂದೀಪ ದೇಶಪಾಂಡೆ, ಅವಧೂತ ಕುಲಕರ್ಣಿ, ಸುರೇಶ ಕುಲಕರ್ಣಿ, ಭಗವಾನ ಪೋದ್ದಾರ, ಹಣಮಂತ ಕುಲಕರ್ಣಿ, ಆನಂದ ಕುಲಕರ್ಣಿ, ಶ್ರೀಪಾದ ರಾಜೋಳಕ, ಗೋವರ್ಧನ ಚಿಟ್ಟಗೂಪಕರ, ಶ್ರೀಪಾದ ತಳಿಕೇಡ, ಸುಮಂತ ಜೋಶಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

11 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

22 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

22 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

1 day ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

1 day ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

1 day ago