9 ದಿನ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಸ್ಥಾಪನೆಗೆ ಅನುಮತಿಗೆ ಜೈಕರವೇ ಒತ್ತಾಯ

0
9

ಕಲಬುರಗಿ: ದೇಶದಲ್ಲಿ ಗಣೇಶ ಉತ್ಸವಕ್ಕೆ ಸುಮಾರು ೨೦೦ ವರ್ಷಗಳ ಇತಿಹಾಸವಿದ್ದು, ಇದು ಹಿಂದೂ ಧರ್ಮದ ದೊಡ್ಡ ಹಬ್ಬ, ಬ್ರಿಟಿಷರ ವಿರುದ್ಧ ಸಂಘಟನೆಗಾಗಿ ಬಾಲಗಂಗಾಧರ ತಿಲಕ ಅವರು ಸಾರ್ವಜನಿಕವಾಗಿ ಗಣೇಶ ವಿಗ್ರಹ ಪ್ರತಿಷ್ಠಾನೆಗೆ ಚಾಲನೆ ನೀಡಿದ್ದು, ಇದೊಂದು ಸಾರ್ವಜನಿಕ ಹಬ್ಬವಾದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಾದ್ಯಂತ ಸಾರ್ವಜನಿಕವಾಗಿ ಗಣೇಶ ಚತುರ್ಥಿ ಅಂಗವಾಗಿ ಗಣೇಶ ವಿಗ್ರಹ ಪ್ರತಿಷ್ಠಾಪನೆಗೆ ಅವಕಾಶ ಕೊಡಬೇಕೆಂದು ಆಗ್ರಹಿಸಿ ಜೈ ಕನ್ನಡಿಗರ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಸಚೀನ್ ಪರತಾಬಾದ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು ಕಲಬುರಗಿ ಜಿಲ್ಲೆಯಾದ್ಯಂತ ಸಾರ್ವಜನಿಕವಾಗಿ ಶ್ರೀ ಗಣೇಶನ ಮೂರ್ತಿಯನ್ನು ೩, ೫ ಮತ್ತು ೯ ದಿನಗಳ ಕಾಲ ಕೂಡಿಸಿ ನಂತರ ಕೊನೆಯಲ್ಲಿ ಮೂರ್ತಿಯನ್ನು ಮೆರವಣಿಗೆ ಮೂಲಕ ವಿಸರ್ಜನೆಗೆ ಒಯ್ಯುವುದು ರೂಢಿಯಲ್ಲಿದೆ ಈ ಹಿನ್ನೆಲೆಯಲ್ಲಿ ಈ ಹಬ್ಬಕ್ಕೆ ಸರಕಾರ ಹಬ್ಬಕ್ಕೆ ಅಡೆ ತಡೆ ಮಾಡದೇ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

Contact Your\'s Advertisement; 9902492681

ಕಳೆದ ಎರಡು ವರ್ಷಗಳಿಂದ ಮಹಾಮಾರಿ ಭಯಾನಕ ಸೋಂಕು ಕರೋನಾ ದಿಂದಾಗಿ ಗಣೇಶ ಉತ್ಸವಕ್ಕೆ ರಾಜ್ಯ ಸರಕಾರ ಅನುಮತಿ ಕೊಡುತ್ತಿಲ್ಲ. ಆದರೆ ಈಗ ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಗಳು ಅದರಲ್ಲೂ ಕಲಬುರಗಿ ಜಿಲ್ಲೆಯಲ್ಲಿ ದಿನಕ್ಕೆ ಒಂದೇರಡು ಪ್ರಕರಣಗಳು ಹೊಸ ಪ್ರಕರಣಗಳು ಬರುತ್ತಿದ್ದು, ಇದರಿಂದ ಜಿಲ್ಲೆಯಲ್ಲಿ ಕರೋನಾ ಮುಕ್ತವಾದಂತಾಗಿದೆ.  ಅದರಲ್ಲಿಯೂ ಕೂಡ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕರೋನಾ ಸಂಪೂರ್ಣ ಇಳಿಮುಖವಾಗಿದೆ. ಪ್ರಯುಕ್ತ ಕಲಬುರಗಿ ಜಿಲ್ಲೆಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಕೂಡಿಸಲು ಮುಖ್ಯಮಂತ್ರಿಗಳು ಅನುಮತಿ ನೀಡಿ ಸಾರ್ವಜನಿಕರ ಭಾವನೆಗಳಿಗೆ ಸ್ಪಂದಿಸುತ್ತಾರೆ ಎಂದು ಸಚಿನ ಪರತಾಬಾದ ಅವರು ಪತ್ರಿಕಾ ಪ್ರಕಟಣೆ ಮೂಲಕ ವಿನಂತಿಸಿಕೊಂಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here