ಕಲಬುರಗಿ: ಕಳೆದ ಐದುವರೆ ವರ್ಷಗಳಿಂದ ಆಡಳಿತ ಭಾಷೆ ಕನ್ನಡವನ್ನು ಅಲ್ಪಸಂಖ್ಯಾತರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಕಲಬುರಗಿ ಉತ್ತರ ವಲಯದ ಅಧ್ಯಕ್ಷ ಲಿಂಗರಾಜ ಸಿರಗಾಪೂರ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಉತ್ತರ ವಲಯದ ವತಿಯಿಂದ ಸುಮಾರು 25 ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕನ್ನಡ ಭಾಷೆ ಅಭಿವೃದ್ಧಿ ಹಾಗೂ ಸಾಹಿತ್ಯ, ಸಂಸ್ಕೃತಿ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮಗಳನ್ನು ವಿವಧ ಶಾಲಾ ಕಾಲೇಜುಗಳಲ್ಲಿ ಮಾಡುವ ಮೂಲಕ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗಿದೆ.
ಕನ್ನಡ ಭಾಷೆ ಮತ್ತು ಅಭಿವೃದ್ಧಿ, ಬಹು ಭಾಷಾ ಸಂಸ್ಕ್ರತಿ ಮತ್ತು ಕನ್ನಡ, ಶ್ರೀಮಂತ ಇತಿಹಾಸ ಮೆರೆದ ಕಲಬುರಗಿ, ಕನ್ನಡ ಜಾಗೃತಿ ಅಭಿಯಾನ ಅಷ್ಟೇ ಅಲ್ಲದೆ ಅಲ್ಪಸಂಖ್ಯಾತರಲ್ಲಿ ಕನ್ನಡ ಭಾಷೆ ಜಾಗೃತಿ ಮೂಡಿಸುವ ಸಲುವಾಗಿ ಕನ್ನಡ ಕಲಿಕೆ ಶಿಬಿರ ಏರ್ಪಡಿಸಿ ಕನ್ನಡ ಕಲಿಸಲಾಯಿತು.ಈ ಶಿಬಿರದಲ್ಲಿ ಅನೇಕರು ಆಸಕ್ತಿಯಿಂದ ಭಾಗವಹಿದ್ದು ವಿಶೇಷವಾಗಿತ್ತು.ಇದೇ ರೀತಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು ಎಂದು ತಿಳಿಸಿದರು.
ಐದು ವರ್ಷಗಳ ಅವಧಿಯಲ್ಲಿ ತಮಗೆ ಕನ್ನಡಮುಂದೆಯೂ ಅವಕಾಶ ಸಿಕ್ಕಿದರೆ ಇನ್ನೂ ಅನೇಕ ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.