ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ಮಾಸ್ಟರ್ ಆಫ್ ಬಿಸಿನೆಸ್ ಅಡ್ಮಿನಿಸ್ಟ್ರೇ?ನ್ (ಎಂ.ಬಿ.ಎ) ವಿಭಾಗದ ಮುಖ್ಯಸ್ಥರೂ ಆಗಿರುವ ಸಹ ಪ್ರಾಧ್ಯಾಪಕ ಪ್ರೊ. ಹರೀಶ ಎಸ್.ಬಿ ಅವರು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ (ಕೆ.ಎಸ್.ಸಿ.ಎಸ್.ಟಿ.) ವತಿಯಿಂದ ಕೊಡಮಾಡುವ ಬೌದ್ಧಿಕ ಆಸ್ತಿ ಹಕ್ಕುಗಳ ಕ್ಷೇತ್ರದಲ್ಲಿ ಪ್ರತಿಷ್ಠಿತ ಸ್ಟಾರ್ಟ್ಅಪ್ ಶ್ರೇಣಿಯ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ರೂ.೫೦,೦೦೦ ನಗದು ಬಹುಮಾನ ಹಾಗೂ ಪ್ರಮಾಣ ಪತ್ರವನ್ನು ಹೊಂದಿರುವ ಈ ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ಪ್ರೊ. ಹರೀಶ ಅವರಿಗೆ ಸೆಪ್ಟೆಂಬರ್ ೦೨ ರಂದು (ಗುರುವಾರ) ಕೆ.ಎಸ್.ಸಿ.ಎಸ್.ಟಿ.ಯ ಕಾರ್ಯಕಾರಿ ಕಾರ್ಯದರ್ಶಿ ಶ್ರೀ ಹೇಮಂತ ಕುಮಾರ್ ಅವರು ನೀಡಿದರು. ಈ ಸಂಧಭsದಲ್ಲಿ ಬೌದ್ಧಿಕ ಆಸ್ತಿ ವಕೀಲರು ಮತ್ತು ಸಲಹೆಗಾರರಾದ ಶ್ರೀ ವಿವೇಕ ಕೂಡ ಹಾಜರಿದ್ದರು.
ಪ್ರಾಧ್ಯಾಪಕ ಹರೀಶ ಅವರ ಈ ಸಾಧನೆಗೆ ವಿಶ್ವವಿದ್ಯಾಲಯದ ಕುಲಾಧಿಪತಿ ಪೂಜ್ಯ ಡಾ.ಶರಣಬಸವಪ್ಪ ಅಪ್ಪಾಜಿ ಹಾಗೂ ಶರಣಬಸವೇಶ್ವರ ವಿದ್ಯಾ ವರ್ಧಕ ಸಂಘದ ಚೇರಪರ್ಸನರಾದ ಮಾತೋಶ್ರೀ ಡಾ.ದಾಕ್ಷಾಯಿಣಿ ಅವ್ವಾಜಿ ಅಭಿನಂದಿಸಿದ್ದಾರೆ. ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ವಿಶ್ವವಿದ್ಯಾಲಯದ ಉಪಕುಲಪತಿ ಡಾ.ನಿರಂಜನ ವಿ.ನಿಷ್ಠಿ, ಕುಲಸಚಿವ ಡಾ.ಅನಿಲಕುಮಾರ ಬಿಡವೆ ಮತ್ತು ವಿಶ್ವವಿದ್ಯಾಲಯದ ಇತರ ಅಧಿಕಾರಿಗಳು ಕೂಡ ಪ್ರೊಫೆಸರ್ ಹರೀಶ್ ಅವರ ಗಮನಾರ್ಹ ಸಾಧನೆಗಾಗಿ ಅಭಿನಂದಿಸಿದ್ದಾರೆ.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…