ಬಿಸಿ ಬಿಸಿ ಸುದ್ದಿ

ಗ್ರಾಮದಲ್ಲಿ ಪೋಷಣೆ ಮಾಸಾಚರಣೆ

ಅಫಜಲಪುರ: ಚಿಣಮಗೇರಾ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಶಿಶು ಅಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ರಾಷ್ಟ್ರೀಯ ಪೋಷಣೆ ಮಾಸಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಖಾಜಾಸಾಬ್ ಹಯ್ಯಾಳ ಕರ್  ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು ವಹಿಸಿದ್ದರು. ಉದ್ಘಾಟಕರಾಗಿ ಅಲ್ಲಿನ ಗ್ರಾಮ ಪಂಚಾಯತ್ ಸದಸ್ಯರಾದ ಶಿವಕುಮಾರ್ ಕರ್ಕಲಿ ಚಾಲನೆಯನ್ನು ನೀಡಿದರು.

ಮುಖ್ಯ ಅತಿಥಿಗಳಾಗಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಬಳೆ ಗೊಬ್ಬುರ ಬಿ ವಹಿಸಿ ಮಾತನಾಡಿ ಪೋಷಣ ಅಭಿಯಾನ ಇದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಮಕ್ಕಳ ಅಪೌಷ್ಟಿಕತೆ ಮಟ್ಟ ಹಾಗೂ ಗರ್ಭಿಣಿ ಬಾಣಂತಿ ಯಲ್ಲಿರುವ ರಕ್ತಹೀನತೆಯನ್ನು ತಡೆಯಲು ಈ ಮಾಸಾಚರಣೆಯ ಉದ್ದೇಶವಾಗಿದೆ ಎಂದು ತಿಳಿಸುತ್ತಾ ಆರೋಗ್ಯ ಇಲಾಖೆಯಿಂದಗರ್ಭಿಣಿ ತಾಯಿ ಮತ್ತು ಮಕ್ಕಳಿಗೆ ಇರುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.

ಅದರಲ್ಲಿ ವಿಶೇಷವಾಗಿ ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಪ್ರತಿ ತಿಂಗಳು ಒಂಬತ್ತು ನೇ ದಿನಾಂಕದಂದು ನಡೆಯುತ್ತಿದ್ದು ಅದರಲ್ಲಿ ವಿಶೇಷವಾಗಿ ಗರ್ಭಿಣಿಗೆ ಉಚಿತ ಪ್ರಯೋಗಾಲಯ ವ್ಯವಸ್ಥೆ ಅಂದರೆ ರಕ್ತಪರೀಕ್ಷೆ ಮೂತ್ರ ಪರೀಕ್ಷೆ ಅಲ್ಲದೆ ಉಚಿತ ಸ್ಕ್ಯಾನಿಂಗ್ ವ್ಯವಸ್ಥೆ ಮಾಡಲಾಗುವುದು. ಇದು ಅಲ್ಲದೆ 7 ಗ್ರಾಮ್ ಗಿಂತ ರಕ್ತ ಕಡಿಮೆ ಇರುವ ಗರ್ಭಿಣಿ ತಾಯಿಂದಿರಿಗೆ ರಕ್ತವನ್ನು ಸಹ ಉಚಿತವಾಗಿ ನೀಡಿ ಅವರನ್ನು ಗಂಡಾಂತರ ಗರ್ಭಿಣಿ ಯಿಂದ ಪಾರುಮಾಡಿ ಸುರಕ್ಷಿತ ಹೆರಿಗೆ ಮಾಡಿಸುವುದಾಗಿದೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಅಲ್ಲದೆ ಮಕ್ಕಳಿಗಾಗಿಯೂ ವಿಶೇಷ ವಾರ್ಡಗಳಿದ್ದು ಅವುಗಳ ಉಪಯೋಗ ಪಡೆಯಲು ಅಲ್ಲದೆ ಅಪೌಷ್ಟಿಕ ಮಕ್ಕಳನ್ನು ಗುರುತಿಸಿ ಅವರಿಗೆ NRC ಕೇಂದ್ರಗಳಿಗೆ ಕಳಿಸುವ ಸೌಲಭ್ಯಗಳಿವೆ ಒಟ್ಟಿನಲ್ಲಿ ಆರೋಗ್ಯವಂತ ತಾಯಿ ಆರೋಗ್ಯವಂತ ಮಗು ಆಗುವಂತೆ ಸರಕಾರ ಸೌಲತ್ತುಗಳ ಬಗ್ಗೆ ಮಾಹಿತಿ ನೀಡಿದರು.ನಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕರಾದ ಮೀನಾಕ್ಷಿ ಪಾಟೀಲ್ ಮಾತನಾಡಿ ತಮಗೆ ಆಹಾರಪದ್ಧತಿಯನ್ನು  ಫ್ರಾತೆಕ್ಷಿ ಕವಾಗಿ  ಇಲ್ಲಿ ಇಡಲಾಗಿದೆ.ಅದನ್ನೇ ತಾವು ಮನೆಯಲ್ಲಿ ರೂಢಿಸಿಕೊಂಡು ರಕ್ತಹೀನತೆಯನ್ನು ಹೋಗಲಾಡಿಸಲು ಸಾಧ್ಯ ಇದಕ್ಕೆ ಪರಿಹಾರ ಸಿಗಬೇಕಾದರೆ ಉತ್ತಮ ಪೌಷ್ಠಿಕ ಆಹಾರ ಸೇವನೆ ಅವಶ್ಯಕವಾಗಿದೆ . ಅದಕ್ಕಾಗಿ ಮೊಳಕೆ ಬರಿಸಿದ ಕಾಳು ಹಸಿ ಸೊಪ್ಪು ತರಕಾರಿಗಳು ಹಣ್ಣುಗಳು ಮೊಟ್ಟೆ ಬಳಸುವುದರಿಂದ ತಮಗೆ ಪೌಷ್ಟಿಕಾಂಶ ದೊರೆಯುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಚಿಣಮಗೇರಾ ಗ್ರಾಮದ ಲಕ್ಷ್ಮಣ ಪವಾರ್, ಬಾಬು ನಾಯ್ಕೋಡಿ ಗ್ರಾಮಸ್ಥರು, ಗರ್ಭಿಣಿ ತಾಯಿಯಂದಿರು, ಬಾಣಂತಿಯರು, ಕಿಶೋರಿಯರು, ವಲಯದ ಎಲ್ಲಾ ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಆರೋಗ್ಯ ಇಲಾಖೆ ಸಿಬ್ಬಂದಿಗಳು , ಅಂಗನವಾಡಿ ಸಹಾಯಕಿಯರು ಭಾಗವಹಿಸಿದ್ದರು.ಕಾರ್ಯಕ್ರಮದ ವಂದನೆಯನ್ನು ಪ್ರಭಾವತಿ ಅಂಗನವಾಡಿ ಕಾರ್ಯಕರ್ತೆ ಅವರಿಂದ ಮುಕ್ತಾಯಗೊಂಡಿತ್ತು.

emedialine

Recent Posts

ಪೂರ್ವ ಪೀಠಿಕೆ ಓದುವ ಮೂಲಕ ಸಂವಿಧಾನ ದಿನ ಆಚರಣೆ

ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…

2 hours ago

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

13 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

24 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

24 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

1 day ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

1 day ago