ಕಲಬುರಗಿ: ಗುರುಕುಲ ಮಾದರಿಯ ಶಿಕ್ಷಣದಿಂದ ಮಕ್ಕಳಲ್ಲಿ ಸರ್ವತೋಮುಖ ಬೆಳವಣಿಗೆಗೆ ಹಾಗೂ ಸಾಮಾಜಿಕ ಕಳಕಳಿ ಮೂಡುವಂತೆ ಮಾಡಲು ಸಾಧ್ಯ ಎಂದು ನಗರ ಪೆÇಲೀಸ್ ಆಯುಕ್ತ ಡಾ. ವೈ.ಎಸ್. ರವಿಕುಮಾರ ಅವರು ಅಭಿಪ್ರಾಯಪಟ್ಟರು.
ಭಾನುವಾರ ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಗಳ ವತಿಯಿಂದ ನಡೆದ 2021-22ನೇ ಸಾಲಿನ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಜ್ಯೋತಿ ಬೆಳಗಿಸಿ ಡಾ. ಸರ್ವೇಪಲ್ಲಿ ರಾಧಾಕೃಷ್ಣ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.
ಇಂದಿನ ವಿಷಯಧಾರಿತ ಶಿಕ್ಷಣದಿಂದ ಮಕ್ಕಳಲ್ಲಿ ಸಾಮಾಜಿಕ ಕಾಳಜಿ ಕಳೆಗುಂದಿದ್ದು, ಮಕ್ಕಳನ್ನು ತಿದ್ದಿ ಸರಿ ದಾರಿಗೆ ತರುವ ಶಕ್ತಿ ಇರುವುದು ಶಿಕ್ಷಕ ವೃತ್ತಿಯಲ್ಲಿ ಮಾತ್ರ. ಅಂತಹ ವೃತ್ತಿಯಲ್ಲಿರುವ ಎಲ್ಲಾ ಶಿಕ್ಷಕರು ಮಕ್ಕಳಲ್ಲಿನ ಒಳ್ಳೆಯ ಗುಣಗಳನ್ನು ಪೆÇ್ರೀತ್ಸಾಹಿಸಿ ಮಕ್ಕಳಲ್ಲಿ ಸಾಮಾಜಿಕ ಕಾಳಜಿ ಬೆಳೆಯುವಂತೆ ಮಾಡಬೇಕು ಎಂದು ಅವರು ಹೇಳಿದರು.
ಇದೇ ವೇಳೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಶೋಕ ಭಜಂತ್ರಿ ಅವರು ಮಾತನಾಡಿ, ಸಮಾಜದಲ್ಲಿ ಶಿಕ್ಷಕ ಸ್ಥಾನ ಶಾಶ್ವತವಾಗಿ ಉಳಿಯುವಂಥÀ ವೃತ್ತಿಯಾಗಿದೆ. ಇಂದಿಲ್ಲಿ ಅತ್ಯುತ್ತಮ ಸಾಧನೆಗೈದು ಪ್ರಶಸ್ತಿ ಸ್ವೀಕರಿಸುತ್ತಿರುವ ಶಿಕ್ಷಕರ ಜವಾಬ್ದಾರಿ ಇನ್ನು ಮುಂದೆ ಹೆಚ್ಚಾಗಲಿದ್ದು, ಎಲ್ಲರೂ ಇನ್ನೂ ಅನೇಕ ರೀತಿಯ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿ ಎಂದು ಪ್ರಾಸ್ತಾವಿಕವಾಗಿ ನುಡಿದರು.
ಪ್ರಸಕ್ತ 2021-22 ನೇ ಸಾಲಿನಲ್ಲಿ ಒಟ್ಟು 24 ಶಿಕ್ಷಕರು ಜಿಲ್ಲಾ ಮಟ್ಟದ “ಅತ್ಯುತ್ತಮ ಶಿಕ್ಷಕ ಪ್ರಶಸ್ತಿ” ಪಡೆದಿದ್ದು, ಇದರ ಪೈಕಿ ಪ್ರಾಥಮಿಕ ವಿಭಾಗದಲ್ಲಿ 16 ಜನ ಶಿಕ್ಷಕರು ಹಾಗೂ ಪ್ರೌಢಶಾಲಾ ವಿಭಾಗದಲ್ಲಿ 8 ಜನ ಶಿಕ್ಷಕರು ಪ್ರಶಸ್ತಿ ಪಡೆದಿದ್ದಾರೆ. ಅತ್ಯುತ್ತಮ ಸಾಧನೆಗೈದ ಶಿಕ್ಷಕರಿಗೆ ಇದೇ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಡಾ. ದಿಲೀಶ್ ಸಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಾರ್ವಜನಿಕ ಶಿಕ್ಷಣ ಇಲಾಖೆ (ಡಯೆಟ್) ಉಪ ನಿರ್ದೇಶಕಿ ಕಮಲಾ ಕುಲಕರ್ಣಿ, ಕರ್ನಾಟಕ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಹಣಮಂತ ಲೇಂಗಟಿ, ಶಿಕ್ಷಣಾಧಿಕಾರಿಗಳ ಸಂಘದ ಜಿಲ್ಲಾ ಅಧ್ಯಕ್ಷ ಹೆಚ್.ಎಸ್ ದೇಶಮುಖ, ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮರೆಪ್ಪ ಎಂ. ಮಿಣಜಗಿ, ಕರ್ನಾಟಕ ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ವಿಶ್ವನಾಥ ಕಟ್ಟಿಮನಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಮಲ್ಲಯ್ಯ ಗುತ್ತೇದಾರ, ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಜಿಲ್ಲಾ ಅಧ್ಯಕ್ಷ ರಾಜು ದೊಡ್ಡಮನಿ ಹಾಗೂ ನಾರಾಯಣ ದೇಸಾಯಿ ಸೇರಿದಂತೆ ವಿವಿಧ ಸಂಘದ ಪದಾಧಿಕಾರಿಗಳು, ಶಿಕ್ಷಕರು ಮತ್ತಿತರರು ಉಪಸ್ಥಿತರಿದ್ದರು.
ಪ್ರಾಥಮಿಕ ವಿಭಾಗ: ಅಫಜಲಪೂರ ತಾಲೂಕಿನ ತೆಗ್ಗೆಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಲಕ್ಷ್ಮಣ ನಡುವಿನಕೇರಿ, ಅಫಜಲಪುರ ತಾಲೂಕಿನ ಹೈದ್ರಾ ತಾಂಡಾದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಘೋಸಯ್ಯಾ .ಚ.ಹಿರೇಮಠ, ಆಳಂದ ತಾಲೂಕಿನ ಭೂಸನೂರ ಪಂಚಶೀಲ ನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ವಿಜಯಲಕ್ಷ್ಮಿ ಗುತ್ತೇದಾರ, ಆಳಂದ ತಾಲೂಕಿನ ಬೋಳನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ವೀರಣ್ಣಾ ಬೋಳಶೆಟ್ಟಿ, ಚಿಂಚೋಳಿ ತಾಲೂಕಿನ ದೇಗಲಮಡಿ ಸಿದ್ದೇಶ್ವರ ನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಜ್ಯೋತಿ ಲಕ್ಷ್ಮೀ, ಚಿಂಚೋಳಿ ತಾಲೂಕಿನ ಪತ್ತುನಾಯಕ ತಾಂಡಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಶಿವರಾವ ಕೋಟಿ ಹಾಗೂ ಶಹಾಬಾದ ಬಸವೇಶ್ವರ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಪ್ರೇಮಿಳಾ.ಆರ್.ಅಂಬಲಗಿ, ಚಿತ್ತಾಪೂರ ತಾಲೂಕಿನ ಮಳಗಾ(ಕೆ) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಗುಂಡಪ್ಪ, ಜೇವರ್ಗಿ ತಾಲೂಕಿನ ನಾಗರಹಳ್ಳಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ರೂಪಾ ಶ್ರೀಮಂತ ಹೊರಪೇಟಿ, ಜೇವರ್ಗಿ ತಾಲೂಕಿನ ಅಂಕಲಗಾ ತಾಂಡಾದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಬಸವರಾಜ ಎಸ್ ಬಡಿಗೇರ, ಸೇಡಂ ತಾಲೂಕಿನ ಕುರುಕುಂಟಾ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಸಮೀನಾ ನಾಜನೀನ, ಸೇಡಂ ತಾಲೂಕಿನ ಕೋಡ್ಲಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಗುರುನಾಥ ಪಂಚಾಳ, ಕಲಬುರಗಿ ತಾಲೂಕಿನ ಉತ್ತರ ವಲಯದ ಮಹಿಬೂಬನಗರ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ದತ್ತಣ್ಣ ವಿಶ್ವಕರ್ಮ, ಕಲಬುರಗಿ ತಾಲೂಕಿನ ಉತ್ತರ ವಲಯದ ಶಂಕರನಾಯಕ ತಾಂಡಾದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರು ಶಂಕರಲಿಂಗ ಬ. ಹಿಪ್ಪರಗಿ, ಕಲಬುರಗಿ ತಾಲೂಕಿನ ದಕ್ಷಿಣ ವಲಯದ ನದಿಸಿನ್ನೂರ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಮಹ್ಮದ ನಿಜಾಮುದ್ದೀನ ಹಾಗೂ ಕಲಬುರಗಿ ದಕ್ಷಿಣ ವಲಯದ ಪಾಳಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ನಂದಿನಿ ಎಸ್ ಸನಬಾಳ.
ಪ್ರೌಢ ವಿಭಾಗ: ಆಳಂದ ತಾಲೂಕಿನ ಶ್ರೀಚಂದ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ಶ್ರೀಶೈಲ್, ಚಿಂಚೋಳಿ ತಾಲೂಕಿನ ಚಿಮ್ಮನಚೋಡ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ರಾಘವೆಂದ್ರ ರೆಡ್ಡಿ, ಚಿತ್ತಾಪೂರ ತಾಲೂಕಿನ ರಾವೂರ ಶ್ರೀ ಸಚ್ಚಿದಾನಂದ ಪ್ರೌಢಶಾಲೆಯ ಸಹ ಶಿಕ್ಷಕ ಸಿದ್ದಲಿಂಗಪ್ಪ ಜಿ.ಬಾಳಿ, ಚಿತ್ತಾಪೂರ ತಾಲೂಕಿನ ರಾಜಾಪೂರ ಸರ್ಕಾರಿ ಪ್ರೌಢಶಾಲೆಯ ವಿಶೇಷ ಶಿಕ್ಷಕ ರಾಘವೆಂದ್ರ ಹಳಿಪೇಟ, ಕಲಬುರಗಿ ಉತ್ತರ ವಲಯದ ಕಲ್ಲಹಂಗರಗಾ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ಶ್ರೀನಿವಾಸ ಎಂ.ನಾಲವಾರ, ಕಲಬುರಗಿ ತಾಲೂಕಿನ ಉತ್ತರ ವಲಯದ ತಾಜ್‍ಸುಲ್ತಾನಪೂರ ಸರ್ಕಾರಿ ಪ್ರೌಢಶಾಲೆಯ ಸಹಶಿಕ್ಷಕಿ ಜಾಧವ ಶೀತಲ, ಕಲಬುರಗಿ ತಾಲೂಕಿನ ದಕ್ಷಿಣ ವಲಯದ ಹಾಗರಗುಂಡಗಿ ಸರ್ಕಾರಿ ಪ್ರೌಢಶಾಲೆಯ ವೃತ್ತಿ ಶಿಕ್ಷಕ ನಾಗೇಂದ್ರಪ್ಪ ಎಸ್ ಮಂಗಲಗಿ ಹಾಗೂ ಕಲಬುರಗಿ ತಾಲೂಕಿನ ದಕ್ಷಿಣ ವಲಯದ ಹೊನ್ನಕಿರಣಗಿ ಸರ್ಕಾರಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ಶಿವಪುತ್ರಪ್ಪ ವಿ. ವಿಶ್ವಕರ್ಮ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…