ಬಿಸಿ ಬಿಸಿ ಸುದ್ದಿ

ನಮ್ಮ ಕರ್ನಾಟಕ ರಾಜ್ಯ ಪೊಲೀಸ್: ದೇಶದಲ್ಲಿಯೇ ಮಾದರಿ ಇಲಾಖೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ

ಬೆಂಗಳೂರು: ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸುತ್ತಿರುವ ನಮ್ಮ ರಾಜ್ಯದ ಪೊಲೀಸ್ ಇಲಾಖೆ ಇಡೀ ದೇಶಕ್ಕೆ ಮಾದರಿಯಾದ ಇಲಾಖೆಯಾಗಿದೆ ಇದು ನಮ್ಮ ಹೆಮ್ಮೆ ಎಂದು ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಅವರು ತಿಳಿಸಿದರು.

ಇಂದು ನಗರದ ನೃಪತುಂಗ ರಸ್ತೆಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕರ್ನಾಟಕ ರಾಜ್ಯ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶದ ನಂತರ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಕಳೆದ ಎರಡು ವರ್ಷಗಳಿಂದ ಕೋವಿಡ್ -19ರ ಕಾರಣದಿಂದಾಗಿ ಪೊಲೀಸ್ ಸಮಾವೇಶವನ್ನು ನಡೆಸಿರಲಿಲ್ಲ. ನಮ್ಮ ಸರ್ಕಾರ ರಚನೆಯಾದ ಮೇಲೆ ಇಂದು ಈ ಸಮಾವೇಶವನ್ನು ನೆರವೇರಿಸಿರುವುದು ನನಗೆ ಸಂತೋಷ ತಂದಿದೆ ಎಂದು ಹೇಳಿದರು.

ನಾಗರೀಕರ ಜೀವನ ಮತ್ತು ಆಸ್ತಿಗಳನ್ನು ರಕ್ಷಣೆ ಮಾಡುವಂತಹ ಕಠಿಣ ಕೆಲಸಗಳನ್ನು ನಿರ್ವಹಣೆ ಮಾಡುವಲ್ಲಿ ನಮ್ಮ ರಾಜ್ಯ ಪೊಲೀಸ್ ಯಾವಾಗಲೂ ಮಂಚೂಣಿಯಲ್ಲಿರುತ್ತದೆ. ದಕ್ಷತೆ ಪ್ರಾಮಾಣಿಕತೆಯಿಂದ ಹಗಲು ರಾತ್ರಿ ಎನ್ನದೇ ತಮ್ಮ ಜೀವದ ಹಂಗು ತೊರೆದು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿ / ಸಿಬ್ಬಂದಿಗಳು ಯಾವಾಗಲೂ ಸಿದ್ದರಿರುತ್ತಾರೆ.

ಅಪರಾಧ ನಿಯಂತ್ರಣ ಮತ್ತು ಸಾಮಾಜಿಕ ಕಾನೂನು ಸುವ್ಯವಸ್ಥೆಗೆ ನೇರ ಸಂಪರ್ಕವಿದ್ದು, ಅಪರಾಧಗಳು ನಿಯಂತ್ರಣವಾದಲ್ಲಿ ಮಾತ್ರ ಕಾನೂನು ಸುವ್ಯವಸ್ಥೆ ಹತೋಟಿಗೆ ಬರುತ್ತದೆ. ಪೊಲೀಸ್ ಇಲಾಖೆಯಲ್ಲಿ ಇದರ ಸುಧಾರಣೆಗೆ ಸರ್ಕಾರವು ಸಂಪೂರ್ಣ ಬೆಂಬಲ ನೀಡುವುದು.
ಪೊಲೀಸ್ ಇಲಾಖೆಗೆ ಅಗತ್ಯ ನೆರವು ನೀಡುವುದು ಅಲ್ಲದೆ ಮೃತ ಪೊಲೀಸ್ ಸಿಬ್ಬಂದಿಯ ಕುಟುಂಬವನ್ನು ರಕ್ಷಿಸುವುದು ರಾಜ್ಯ ಸರ್ಕಾರದ ಪ್ರಾಥಮಿಕ ಮತ್ತು ಮೂಲಭೂತ ಜವಾಬ್ದಾರಿಯಾಗಿದೆ. ಈ ಸಂಬಂಧ ಪೊಲೀಸ್ ಇಲಾಖೆ ಕೈಗೊಂಡಿರುವ ಕ್ರಮಗಳು ತುಂಬಾ ಶ್ಲಾಘನೀಯವಾಗಿದೆ. ಈ ಪರಂಪರೆ ಮುಂದುವರೆಯಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ರಾಜ್ಯದಲ್ಲಿ ಅಪಾರಾಧ ಪ್ರಕರಣಗಳ ತಡೆಗೆ ಆದಷ್ಟು ಕ್ರಮವಹಿಸಬೇಕು, ಕ್ರಿಮಿನಲ್ ಕೇಸುಗಳನ್ನು ತುರ್ತಾಗಿ ಬಗೆಹರಿಸಬೇಕು, ಅಪರಾಧಿಗಳನ್ನು ಪತ್ತೆ ಹಚ್ಚಿ ಅವರಿಗೆ ಪ್ರಾಮಾಣಿಕವಾಗಿ ಶಿಕ್ಷೆ ಕೊಡಿಸುವುದರೊಂದಿಗೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕು. ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಿ, ಅಪರಾಧಿಗಳಲ್ಲಿ ನಡುಕ ಉಂಟಾಗುವಂತೆ ಕಾರ್ಯನಿರ್ವಹಣೆ ಮಾಡಲು ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಬದಲಾಗುತ್ತಿರುವ ತಾಂತ್ರಿಕ ಅಪರಾಧ ಪ್ರಕರಣಗಳು, ಡ್ರಗ್ಸ್ ಪ್ರಕರಣಗಳು, ನವೀನ ರೀತಿಯ ಜೂಜು ಮತ್ತು ಅಡ್ಡಗಳು ಹಾಗೂ ಹೊಸ ರೀತಿಯ ಕ್ರಿಮಿನಲ್‍ಗಳನ್ನು ಪತ್ತೆ ಹಚ್ಚುವುದು ಮತ್ತು ಶಿಕ್ಷಿಸುವುದು ಇಂದು ಸವಾಲಿನ ಕೆಲಸವಾಗಿದೆ. ಇವೆಲ್ಲಕ್ಕೂ ಹೊಸ ಹೊಸ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು. ಹೊಸ ಉಪಕರಣಗಳನ್ನು ಖರೀದಿ ಮಾಡಲು ಸರ್ಕಾರ ನೆರವು ನೀಡುವುದಾಗಿ ಅಧಿಕಾರಿಗಳಿಗೆ ತಿಳಿಸಲಾಗಿದೆ. ಪೊಲೀಸ್ ಇಲಾಖೆ ಜನಸ್ನೇಹಿ ಇಲಾಖೆಯಾಗಿ ಕಾರ್ಯನಿರ್ವಹಿಸಬೇಕು. ಅಪರಾಧಗಳನ್ನು ಆದಷ್ಟು ಮಟ್ಟ ಹಾಕಿ ಸಾರ್ವಜನಿಕರು ಭಯ ಬೀತಿ ಪಡದೆ ನಿರಾಂತಕವಾಗಿ ಓಡಾಡುವಂತೆ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಇತ್ತೀಚೆಗೆ ಮಾದಕ ವಸ್ತು ಮಾಫಿಯಾವನ್ನು ನಿಯಂತ್ರಣಕ್ಕೆ ತರಲಾಗಿದೆ. ರಾಜ್ಯದಲ್ಲಿ ಇಷ್ಟು ದೊಡ್ಡ ಮೊತ್ತದಲ್ಲಿ ಹಿಂದೆಂದೂ ಡ್ರಗ್ಸ್ ಪತ್ತೆಯಾಗಿರುವುದಿಲ್ಲ. ಇತ್ತೀಚೆಗೆ ಡ್ರಗ್ಸ್ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದನ್ನು ಮಟ್ಟಹಾಕುವಲ್ಲಿ ಇಲಾಖೆ ತುಂಬಾ ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿದೆ.

ಬೆಂಗಳೂರು ಸುತ್ತಮುತ್ತಲೂ ಭೂ ವಿವಾದಗಳಿಗೆ ಕೈಹಾಕದೆ, ಪ್ರಾಮಾಣಿಕವಾಗಿ ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು. ಅದೇ ರೀತಿ ಜಿಲ್ಲೆಗಳಲ್ಲಿ ನಡೆಯುತ್ತಿರುವ ಮರಳು ಮಾಫಿಯಾ ದಂದೆಯನ್ನು ನಿಗ್ರಹ ಮಾಡಲು ಕ್ರಮವಹಿಸಲು ತಿಳಿಸಲಾಗಿದೆ

ಹಿರಿಯ ಅಧಿಕಾರಿಗಳಿಂದ ಕಿರಿಯ ಅಧಿಕಾರಿಗಳವರೆಗೂ ರಿಪೋರ್ಟಿಂಗ್ ಸಿಸ್ಟಮ್ ಜಾರಿಯಾಗಬೇಕು. ಇದಕ್ಕಾಗಿ ಪೊಲೀಸ್ ಮಹಾನಿರ್ದೇಶಕರಿಂದ ಹಿಡಿದು ಎಲ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಮ್ಮದೇ ಆದ ಡ್ಯಾಶ್‍ಬೋರ್ಡ್ ರೂಪಿಸಿ ಪ್ರತಿ ನಿತ್ಯ ದಾಖಲಾಗುವ ಪ್ರಕರಣಗಳನ್ನು ಪರಿಶೀಲನೆ ಮಾಡಿ ಬಗೆಹರಿಸಬೇಕು. ದಸ್ತಗಿರಿ ಆಗಿರುವ ಪ್ರಕರಣಗಳ ಸಂಖ್ಯೆ ಮತ್ತು ಇತ್ಯರ್ಥವಾದ ಪ್ರಕರಣಗಳು ಹಾಗೂ ಕ್ರಮ ಕೈಗೊಂಡಿರುವ ಪ್ರಕರಣಗಳನ್ನು ಡ್ಯಾಶ್ ಬೋರ್ಡ್‍ನಲ್ಲಿ  ಹಾಕುವ ವ್ಯವಸ್ಥೆ ಮಾಡಬೇಕು. ಯಾವುದೇ ಹಂತದಲ್ಲಿ ತಪ್ಪುಗಳು ನಡೆಯದಂತೆ ನೋಡಿಕೊಳ್ಳಬೇಕು. ಪೊಲೀಸ್ ಇಲಾಖೆಯಲ್ಲಿ ಮಧ್ಯವರ್ತಿಗಳಿಗೆ  ಅವಕಾಶ ನೀಡಬಾರದು.

ಆರ್ಥಿಕ ಮತ್ತು ಸೈಬರ್ ಕ್ರೈಂ ನಿಯಂತ್ರಣ ಮಾಡಲು ಪ್ರತ್ಯೇಕ ತಾಂತ್ರಿಕ ವಿಭಾಗಗಳನ್ನು ರಚಿಸಲು, ಐಎಸ್‍ಡಿಯ ಬಲವರ್ಧನೆ ಮಾಡಲು ತಿಳಿಸಲಾಗಿದೆ. ಬಂಧೀಖಾನೆ, ಅಗ್ನಿಶಾಮಕದಳದ ಸುಧಾರಣೆಯಾಗುವುದರೊಂದಿಗೆ ಗುಪ್ತಚರ ವಿಭಾಗ ಮತ್ತು ಸಿಓಡಿ ವಿಭಾಗವು ಪುನರ್‍ರಚನೆ ಹಾಗೂ ತಾಂತ್ರಿಕವಾಗಿ ಮೇಲ್ದರ್ಜೆಗೇರಿಸಬೇಕು. ಅಗತ್ಯವಿದ್ದಲ್ಲಿ ಅತ್ಯಾಧುನಿಕ ಉಪಕರಣಗಳ ಖರೀದಿಗೆ ಕ್ರಮವಹಿಸಬೇಕು. ಇದಕ್ಕೆ ಸರ್ಕಾರದಿಂದ ಅಗತ್ಯ ನೀಡಲಾಗುವುದು ಎಂದು ತಿಳಿಸಿದರು.

ಸಮಾವೇಶದ ಆರಂಭದಲ್ಲಿ ಮುಖ್ಯಮಂತ್ರಿಗಳು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಪ್ರಕಟಿಸಿರುವ ಕಾಫಿಟೇಬಲ್ ಬುಕ್, ಸೇವೆಯಲ್ಲಿದ್ದಾಗ ಮರಣ ಹೊಂದಿದ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳಿಗೆ ಒದಗಿಸಿರುವ ಪರಿಹಾರದ ಕುರಿತು ಹೊರ ತಂದಿರುವ ಕಿರು ಪುಸ್ತಕ ಬಿಡುಗಡೆ ಮಾಡಿದರು ಹಾಗೂ ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಮುಖ ಗುರುತಿನ ನವೀನ ರೀತಿಯ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಸೇರಿದಂತೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

emedialine

Recent Posts

ಪಠ್ಯಕ್ರಮ ರಚನೆ ಗುಣಾತ್ಮಕ ಅಂಶಗಳಿಂದ ಕೂಡಿರಲಿ

ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…

23 mins ago

ಪತ್ರಕರ್ತ ಸಿದ್ರಾಮ್ ನಾಡಗೇರಿ ಪುತ್ರಿ ಸ್ಪಂದನಾ ಎಸ್. ನಡಗೇರಿಗೆ ಪತ್ರಕರ್ತರ ಸಂಘದಿಂದ ಸನ್ಮಾನ

ಹಾವೇರಿ: SSLC,PUC ಯಲ್ಲಿ 90% ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು,…

37 mins ago

ಸೇವಾ ಮನೋಭಾವದ ಮನಸ್ಸು ಹೆಚ್ಚಾಗಲಿ: ಜ್ಯೋತಿ ಪಾಟೀಲ್

ಕಲಬುರಗಿ: ನೌಕರಿ ಕಾಯಕವಾದರೆ ತೃಪ್ತಿ ಜೀವನ, ವೃತ್ತಿಯಲ್ಲಿ ಸೇವಾ ಮನೋಭಾವ ಹೊಂದಿದರೆ ಆತ್ಮಶುದ್ಧಿಯಾಗಿ ಸಂತೃಪ್ತ ಜೀವನ ನಮ್ಮದಾಗುತ್ತದೆ ಎಂದು ಉಪಳಾಂವ…

42 mins ago

ಕಲಬುರಗಿ: ಕಾರ್ಮಿಕ ಸಚಿವರ ಅಧ್ಯಕ್ಷತೆಯಲ್ಲಿ ಜುಲೈ 5 ರಿಂದ 6 ವರೆಗೆ ಪ್ರಗತಿ ಪರಿಶೀಲನಾ ಸಭೆ

ಕಲಬುರಗಿ: ಕಾರ್ಮಿಕ ಸಚಿವರ ಅಧ್ಯಕ್ಷತೆಯಲ್ಲಿ ಕಲಬುರಗಿ ಮತ್ತು ಬೀದರ್ ಕಂದಾಯ ವಿಭಾಗದ ಜಿಲ್ಲೆಗಳ ಕಾರ್ಮಿಕ ಆಯುಕ್ತಾಲಯ ಹಾಗೂ ಇಲಾಖೆಗೆ ಸಂಬಂಧಿಸಿದ…

2 hours ago

ಪ್ರತಿಭೆಗೆ ಸೂಕ್ತ ಪುರಸ್ಕಾರ ಸಿಕ್ಕಾಗ ಸಾಧನೆ ಸಾಧ್ಯ

ವಾಡಿ: ಪ್ರತಿಯೊಬ್ಬರಿಗೂ ಗುರಿ ಇರಬೇಕು. ಆ ಗುರಿ ಸಾಧನೆಗೆ ಸಮರ್ಥ ಗುರುಗಳು ಬೇಕು ಅಂದಾಗ ಮಾತ್ರ ನಮ್ಮ ಗುರಿ ಈಡೇರಲು…

2 hours ago

ಡಿಸಿಸಿ ಅಧ್ಯಕ್ಷರನ್ನಾಗಿ ಮುಕ್ತಾರ್ ಪಟೇಲ್ ನೇಮಕಕ್ಕೆ ವಸೀಂ ಖಾನ್ ಒತ್ತಾಯ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಕಾಂಗ್ರೆಸ್‌ ಪಕ್ಷದ ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಕಾಂಗ್ರೆಸ್ ಪಕ್ಷದ…

2 hours ago