ಸುರಪುರ: ನಗರದ ವಿವಿಧ ಶಾಲೆಗಳಿಗೆ ನ್ಯಾಯಾಧೀಶರ ಭೇಟಿ, ಪರಿಶೀಲನೆ

0
16

ಸುರಪುರ: ನಗರದ ವಿವಿಧ ಶಾಲೆಗಳಿಗೆ ಸಿವಿಲ್ ನ್ಯಾಯಾಧೀಶರು ಹಾಗು ಸದಸ್ಯ ಕಾರ್ಯದರ್ಶಿಗಳು ತಾಲೂಕು ಕಾನೂನು ಸೇವಾ ಸಮಿತಿಯ ಚಿದಾನಂದ ಬಡಿಗೇರವರು ಭೇಟಿ ನೀಡಿ ಶಾಲೆಗಳಲ್ಲಿ ಕೋವಿಡ್ ನಿಯಮಗಳ ಪಾಲನೆಯ ಕುರಿತು ಪರಿಶೀಲನೆ ನಡೆಸಿದರು.

ಮೊದಲಿಗೆ ಶ್ರೀ ಶರಣಬಸವೇಶ್ವರ ಹಿರಿಯ ಪ್ರಾಥಮಿಕ ಹಾಗು ಪ್ರೌಢ ಶಾಲೆಗೆ ಭೇಟಿ ನೀಡಿ ಎಲ್ಲಾ ಕೋಣೆಗಳನ್ನು ಪರಿಶೀಲಿಸಿದರು ಜೊತೆಗೆ ಮಕ್ಕಳು ಕೋವಿಡ್ ನಿಯಮಗಳ ಪಾಲನೆಯನ್ನು ವೀಕ್ಷಿಸಿದರು.ನಂತರ ರಂಗಂಪೇಟೆಯ ಸರಕಾರಿ ಹಿರಿಯ ಪ್ರಾಥಮಿಕ ಹಾಗು ಪ್ರೌಢ ಶಾಲೆಗೆ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಎಲ್ಲಾ ಕೋಣೆಗಳನ್ನು ಪರಿಶೀಲಿಸಿದರು ಕೆಲ ಕೋಣೆಗಳಲ್ಲಿನ ಅವ್ಯವಸ್ಥೆಯನ್ನು ಕಂಡು ಶಾಲೆಯ ಮುಖ್ಯಗುರು ಗುರುಲಿಂಗಪ್ಪ ಹಾಗು ಪ್ರಾಂಶುಪಾಲ ಬಸವರಾಜ ಕೊಡೇಕಲ್ ಅವರಿಗೆ ಶಾಲೆಯಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ತಿಳಿಸಿದರು.ಅಲ್ಲದೆ ಮಕ್ಕಳು ಕಡ್ಡಾಯವಾಗಿ ಕೋವಿಡ್ ನಿಯಮಗಳು ಪಾಲಿಸುವಂತೆ ಗಮನವಹಿಸಲು ಸೂಚಿಸಿದರು.

Contact Your\'s Advertisement; 9902492681

ಅಲ್ಲದೆ ಶಾಲೆಯಲ್ಲಿ ಮಕ್ಕಳ ಕಲಿಕೆಗೆ ಉತ್ತಮವಾದ ವಾತಾವರಣ ಮುಖ್ಯವಾಗಿದೆ,ಅವ್ಯವಸ್ಥೆ ಇಲ್ಲದಂತೆ ನೋಡಿಕೊಳ್ಳಲು ತಿಳಿಸಿದರಲ್ಲದೆ,ಶಾಲೆಯಲ್ಲಿನ ಕೆಲ ಅವ್ಯವಸ್ಥೆಯ ಕುರಿತು ಇಲಾಖೆಗೆ ವರದಿ ಸಲ್ಲಿಸುವಂತೆ ಹಾಜರಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವರಡ್ಡಿಗೆ ತಿಳಿಸಿದರು.

ನಂತರ ಸರ್ವೋದಯ ಶಾಲೆಗೂ ಭೇಟಿ ನೀಡಿ ಪರಿಶೀಲನೆ ನಡೆಸಿ ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಧರಿಸುವುದು,ಸ್ಯಾನಿಟೈಜರ್ ಉಪಯೋಗಿಸುವುದು ಮತ್ತು ಸಾಮಾಜಿಕ ಅಂತರ ಕಾಪಾಡುವಂತೆ ಕ್ರಮವಹಿಸಲು ಆದ್ಯತೆ ನೀಡುವಂತೆ ಶಿಕ್ಷಕರಿಗೆ ತಿಳಿಸಿದರು.ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವರಡ್ಡಿ,ಪಿಎಸ್‌ಐ ಕೃಷ್ಣಾ ಸುಬೇದಾರ ಸೇರಿದಂತೆ ಇತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here