ಶಹಾಬಾದ: ಅಂಗನವಾಡಿ ನೌಕರರ ಬೇಡಿಕೆಗಳನ್ನು ಕುರಿತು ಸೆಪ್ಟೆಂಬರ್ ೧೩ರಿಂದ ನಡೆಯುವ ರಾಜ್ಯ ಅಧಿವೇಶನದಲ್ಲಿ ಶಾಸಕರು ಧ್ವನಿ ಎತ್ತಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಸ್ಥಳೀಯ ಘಟಕದ ವತಿಯಿಂದ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಿಐಟಿಯು ಚಿತ್ತಾಪೂರ ತಾಲೂಕಾಧ್ಯಕ್ಷ ಶೇಖಮ್ಮ ಕುರಿ ಮಾತನಾಡಿ, ಕೊರೊನಾ ಫ್ರಂಟ್ ಲೈನ್ ವಾರಿಯರ್ಸ ಆಗಿ ಅಂಗನವಾಡಿ ನೌಕರರು ಯಾವುದೇ ರಕ್ಷಣೆಯಿಲ್ಲದೇ ಲಾಕಡೌನ, ಕರ್ಫ್ಯೂ ಸಂದರ್ಭದಲ್ಲಿ ಮನೆಮನೆಗೆ ಔಷಧ, ಆಹಾರ ತಲುಪಿಸುವ ಕಾರ್ಯ ಮಾಡಿದ್ದಾರೆ.ಅಂಗನವಾಡಿ ನೌಕರರ ಕಾರ್ಯವನ್ನು ವಿಶ್ವಬ್ಯಾಂಕಿನ ಭಾರತೀಯ ನಿರ್ದೇಶಕ ಜುನೇದ್ ಅಹ್ಮದ್ ಅವರು ಮೆಚ್ಚಿ ಅಪೌಷ್ಠಿಕ ನಿವಾರಣೆಗೆ ಬೆನ್ನೆಲುಬಾಗಿ ಮಹತ್ತರವಾದ ಕೆಲಸ ಮಾಡಿದ್ದಾರೆ ಎಂದಿದ್ದಾರೆ.ಮಾನವ ಹಕ್ಕುಗಳ ಆಯೋಗ ಇವರಿಗೆ ಕನಿಷ್ಠ ವೇತನ ಖಾತ್ರಿಪಡಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಹ ಮಾಡಿದೆ.
೨೦೨೧-೨೨ ಬಜೆಟನ್ನು ಸೇವಾ ಜೇಷ್ಠತೆ, ಮಿನಿ ಕಾರ್ಯಕರ್ತೆಯರಿಗೆ ಮತ್ತು ಅಂಗನವಾಡಿ ಸಹಾಯಕರಿಗೆ ವೇತನ ಹೆಚ್ಚಳ ಮಾಡಬೇಕು.೨೦೧೫ರಿಂದ ನಿವೃತ್ತರಾದ ೭೧೬೬ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕರಿಗೆ ಇಡಗಂಟು ಕೊಡಲು ೩೩೯.೪೮ ಲಕ್ಷ ರೂ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಶಿಫಾರಸು ಮಾಡಿದರೂ ಇದನ್ನು ಹೆಚ್ಚಿಸದೇ ಸರ್ಕಾರ ಮಹಿಳಾ ವಿರೋಧಿ ನೀತಿ ಅನುಸರಿಸುತ್ತಿದೆ.ಇವೆಲ್ಲ ಸಮಸ್ಯೆಗಳ ಬಗ್ಗೆ ಶಾಸಕ ಬಸವರಾಜ ಮತ್ತಿಮಡು ಅಧಿವೇಶನದಲ್ಲಿ ಚರ್ಚಿಸಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮುಂದಾಗಬೇಕೆಂದು ಒತ್ತಾಯಿಸಿದರು.
ಕಾರ್ಯದರ್ಶಿ ಮಲ್ಲಮ್ಮ, ಧನಲಕ್ಷ್ಮಿ ಭಂಕೂರ, ಮೀನಾಕ್ಷಿ ವಾಡಿ, ಕಮಲಾಬಾಯಿ, ಹೀರಾಬಾಯಿ, ಗಂಗುಬಾಯಿ ಭಂಕೂರ, ದೀಪಿಕಾ ಹೊನಗುಂಟಾ, ಲಾಲಬಿ ಹೊನಗುಂಟಾ ಸೇರಿದಂತೆ ಅನೇಕರು ಇದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…