ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ ವಸತಿ ನಿಲಯಗಳಲ್ಲಿ ಪ್ರವೇಶ ಪಡೆಯಲು ಅರ್ಜಿ ಆಹ್ವಾನ

0
28

ಕಲಬುರಗಿ: ಪ್ರಸಕ್ತ 2021-22ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕಲಬುರಗಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಕ್ ನಂತರದ ಬಾಲಕ/ಬಾಲಕಿಯರ ವಸತಿ ನಿಲಯಗಳಲ್ಲಿ ಖಾಲಿಯಿರುವ ಸ್ಥಾನಗಳನ್ನು ಭರ್ತಿ ಮಾಡಲು ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಕಲಬುರಗಿ ಜಿಲ್ಲೆಯ ತಾಲ್ಲೂಕುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಸರಕಾರಿ/ಅಂಗೀಕೃತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಶೇ. 75 ರಷ್ಟು ಸ್ಥಾನ ಹಾಗೂ ಸ್ಥಾನಗಳನ್ನು ಇತರೆ ವರ್ಗಗಳ ವಿದ್ಯಾರ್ಥಿಗಳಿಗೆ ಶೇ. 25 ರಷ್ಟು ಸ್ಥಾನ ಮೀಸಲಿಡಲಾಗಿದೆ.

Contact Your\'s Advertisement; 9902492681

ಆಸಕ್ತವುಳ್ಳ ವಿದ್ಯಾರ್ಥಿಗಳು https://dom.karnataka.gov.in/kalaburagi/public ವೈಬ್‍ಸೈಟ್‍ದಿಂದ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿದ ಅವಶ್ಯಕ ದಾಖಲಾತಿಗಳೊಂದಿಗೆ ಆಳಂದ, ಅಫಜಲಪೂರ, ಜೇವರ್ಗಿ, ಸೇಡಂ, ಚಿತ್ತಾಪೂರ, ಚಿಂಚೋಳಿ ತಾಲೂಕಿನಲ್ಲಿನ ಆಯಾ ತಾಲೂಕಾ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಾರ್ಯಾಗಳಲ್ಲಿ 2021ರ ಸೆಪ್ಟೆಂಬರ್ 20ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕಾ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ಕಲಬುರಗಿ ಹಾಗೂ ಅಫಜಲಪೂರ (ಮೊಬೈಲ್ ಸಂಖ್ಯೆ-7899755427), ತಾಲ್ಲೂಕಾ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ಜೇವರ್ಗಿ-(9535775141), ತಾಲ್ಲೂಕಾ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ಆಳಂದ-(8147775722), ತಾಲ್ಲೂಕಾ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ಸೇಡಂ-(7892369798), ತಾಲ್ಲೂಕಾ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ಚಿತ್ತಾಪೂರ-(9741168681) ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯಾಲಯ ಕಲಬುರಗಿ 08472-247260ಗೆ ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here