ಕಲಬುರಗಿ: ಜಿಲ್ಲಾ ವ್ಯಾಪ್ತಿಯಲ್ಲಿ ವಿಕಲಚೇತನ ಮಕ್ಕಳಿಗಾಗಿ ಆಪ್ತ ಸಮಾಲೋಚನೆ ಅವಶ್ಯಕತೆ ಇದ್ದಲ್ಲಿ ಉಚಿತ ದೂರವಾಣಿ ಸಂಖ್ಯೆ 14499ಗೆ ಕರೆ ಮಾಡಿ ಮಾರ್ಗದರ್ಶನ ಪಡೆಯಬಹುದಾಗಿದೆ ಎಂದು ಕಲಬುರಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಾದ ಸಾಧಿಕ್ ಹುಸೇನ್ ಖಾನ್ ಅವರು ತಿಳಿಸಿದ್ದಾರೆ.
ಜಿಲ್ಲಾ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧೀನ ಸಂಘ ಸಂಸ್ಥೆಗಳು/ ಸರ್ಕಾರಿ ಸಂಸ್ಥೆಗಳು, ಅನುದಾನಿತ/ಅನುದಾನ ರಹಿತ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಅಗತ್ಯವಿರುವ ಫಲಾನುಭವಿಗಳಿಗೆ ಹಾಗೂ ವಿಕಲಚೇತನರ ಮಕ್ಕಳಿಗಾಗಿ ಆಪ್ತ ಸಮಾಲೋಚನೆಯ ಅವಶ್ಯಕತೆಯಿದ್ದಲ್ಲಿ ಉಚಿತ ದೂರವಾಣಿ ಸಂಖ್ಯೆ 14499ಗೆ ಕರೆ ಮಾಡಿ ಮಾರ್ಗದರ್ಶನ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.