ದಲಿತರ ಅಭಿವೃದ್ಧಿಗೆ ಬಿಜೆಪಿ ಬದ್ಧತೆ: ಕೋಟ ಶ್ರೀನಿವಾಸ ಪೂಜಾರಿ

0
63

ಬೆಂಗಳೂರು: ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಜೊತೆ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಪಕ್ಷದ ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷರು ಮತ್ತು ರಾಜ್ಯ ವಕ್ತಾರರಾದ ಛಲವಾದಿ ನಾರಾಯಣಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಿತು.

Contact Your\'s Advertisement; 9902492681

ದಲಿತ ಸಮುದಾಯದ ಉನ್ನತಿ ಮತ್ತು ಪ್ರಗತಿಗಾಗಿ ಸರಕಾರವು ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ. ಎಸ್‍ಸಿ ಸಮುದಾಯದ ದುಡಿಯುವ ಕೈಗಳಿಗೆ ಉದ್ಯೋಗ ನೀಡಲಾಗುವುದು. ಅವರಿಗೆ ಅನ್ಯಾಯ ತಡೆಯುವ ಕೆಲಸ ಮಾಡುತ್ತೇವೆ ಎಂದು ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದರು.

ಬೇರೆ ಸರಕಾರಗಳು ಅವರ ಜೀವನದಲ್ಲಿ ಬೆಳಕು ಕಾಣುವಂಥ ಕಾರ್ಯಗಳನ್ನು ಮಾಡಿಲ್ಲ. ಸಣ್ಣ ಪುಟ್ಟ ಆಸೆಗಳನ್ನು ಹುಟ್ಟಿಸಿ ಅವರು ಬೆಳೆಯಲು ಅವಕಾಶ ನೀಡಿಲ್ಲ. ಕೇವಲ ಮತಬ್ಯಾಂಕ್ ಆಗಿ ಅವರನ್ನು ಬಳಸಿಕೊಂಡಿದೆ. ಆದರೆ, ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ರಾಜ್ಯ ಸರಕಾರವು ದಲಿತ ಸಮುದಾಯದ ಉನ್ನತಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಿದೆ ಎಂದು ಅವರು ವಿವರಿಸಿದರು.

ದಲಿತರಿಗೆ ಮತ್ತು ಎಸ್‍ಸಿ ಸಮುದಾಯಕ್ಕೆ ಇರುವ ವಿವಿಧ ಯೋಜನೆಗಳ ಮಾಹಿತಿ ನೀಡಿದ ಸಚಿವರು, ಅವುಗಳ ಕುರಿತು ರಾಜ್ಯ ಎಸ್‍ಸಿ ಮೋರ್ಚಾವು ಜನರಿಗೆ ತಿಳಿಸಬೇಕೆಂದು ಮನವಿ ಮಾಡಿದರು. ಸಮಾಜ ಕಲ್ಯಾಣ ಇಲಾಖೆಗೆ ಸಂಬಂಧಿಸಿ ಪರಿಶಿಷ್ಟ ಜಾತಿಯವರಿಗೆ ಕುರಿತ ಸಮಸ್ಯೆಗಳನ್ನು ಅವರು ಆಲಿಸಿದರು.

ಹರಿಯಾಣ ಸರಕಾರದ ಮಾದರಿಯಲ್ಲಿ ನಿರುದ್ಯೋಗ ಭತ್ಯೆ ಕೊಡಬೇಕೆಂದು ಛಲವಾದಿ ನಾರಾಯಣಸ್ವಾಮಿ ಅವರು ವಿನಂತಿಸಿದರು. ಅದರ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಸಚಿವರು ತಿಳಿಸಿದರು.

ದಲಿತ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು 25 ಲಕ್ಷ ರೂಪಾಯಿ ಸಾಲ ನೀಡಬೇಕು. ಜಮೀನು ವಿಚಾರದಲ್ಲಿ ಹೆಚ್ಚು ಧನಸಹಾಯÀ ನೀಡಬೇಕು. ಗಂಗಾ ಕಲ್ಯಾಣ ಯೋಜನೆಗೆ ಒತ್ತು ಕೊಡಬೇಕು. ಮನೆಗಳನ್ನು ನಿರ್ಮಿಸಿ ಕೊಡಬೇಕು ಎಂದು ಛಲವಾದಿ ನಾರಾಯಣಸ್ವಾಮಿ ಅವರು ಮನವಿ ಮಾಡಿದರು. ಈ ಕುರಿತು ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ಸಚಿವರು ಹೇಳಿದರು.

ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸಿದ್ದರಾಜು, ರಾಜ್ಯ ಕಾರ್ಯದರ್ಶಿಗಳಾದ ಜಗದೀಶ ಹಿರೇಮನಿ, ಎಸ್‍ಸಿ ಮೋರ್ಚಾದ ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು, ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here