ಕಲಬುರಗಿ: ಕುಡಿದ ಮತ್ತಿನಲ್ಲಿ ವೇಗವಾಗಿ ಬೈಕ್ ಚಲಾಯಿಸಿದ್ದರಿಂದ ಪರಸ್ಪರ ಬೈಕ್ಗಳು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿರುವ ಘಟನೆ ಕಮಲಾಪೂರ ತಾಲ್ಲೂಕಿನ ಮಟಕಿ ತಾಂಡಾದ ಬಳಿ ನಡೆದಿದೆ.
ಲಾಡಮುಗಳಿ ಗ್ರಾಮದ ನಿವಾಸಿಗಳಾದ ಅಂಬರೇಶ್ ಅಶೋಕ (24), ಅನೀಲ ಮಲ್ಲಯ್ಯ ಗುತ್ತೇದಾರ್ (26) ಹಾಗೂ ಕಲಬುರಗಿ ತಾಲೂಕಿನ ಬೆಲೂರು (ಜೆ) ಗ್ರಾಮದ ನಿವಾಸಿ ನಾಗೇಶ್ ಅಣ್ಣಪ್ಪ ವಡರ್ (24) ಮೃತರು ಎಂದು ಗುರುತಿಸಲಾಗಿದೆ.
ಬೆಲೂರು (ಜೆ) ಗ್ರಾಮದ ನಿವಾಸಿ ನಾಗೇಶ್ ಮುಕುಂದ (30) ಎನ್ನುವ ಯುವಕ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪರಸ್ಪರ ಬೈಕ್ಗಳು ಡಿಕ್ಕಿ ಹೊಡೆದಿವೆ. ಪರಿಣಾಮ, ತಲೆಗೆ ಪೆಟ್ಟಾಗಿ ಮೂವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಕುರಿತು ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…