ಸುರಪುರ: ಮಹಾನಾಯಕ ಧಾರವಾಹಿ ಪ್ರಸಾರ ಸಂದರ್ಭದಲ್ಲಿ ವಿದ್ಯುತ್ ಕಡಿತ ಮಾಡಬೇಡಿ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಿ.ಜಿ ಸಾಗರ) ಬಣದ ಮುಖಂಡರು ಒತ್ತಾಯಿಸಿದರು.
ನಗರದ ರಂಗಂಪೇಟೆಯಲ್ಲಿನ ಜೆಸ್ಕಾಂ ಕಚೇರಿ ಮುಂದೆ ಬುಧವಾರ ಸಾಂಕೇತಿಕ ಪ್ರತಿಭಟನೆ ನಡೆಸಿ ಮಾತನಾಡಿ,ಝೀ ಕನ್ನಡ ವಾಹಿನಿಯಲ್ಲಿ ದಿನಾಲು ಸಂಜೆ 6 ಗಂಟೆಯಿಂದ 7 ಗಂಟೆಯ ವರೆಗೆ ಡಾ: ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನಾಧಾರಿತ ಮಹಾನಾಯಕ ಧಾರವಾಹಿ ಪ್ರಸಾರವಾಗುತ್ತದೆ.
ಈ ಸಂದರ್ಭದಲ್ಲಿ ಪದೆ ಪದೆ ವಿದ್ಯುತ್ ಕಡಿತ ಮಾಡುತ್ತಿರುವುದರಿಂದ ಜನರಿಗೆ ಬೇಸರವಾಗಿದೆ.ಯಾಕೆಂದರೆ ಡಾ: ಬಾಬಾ ಸಾಹೇಬರ ಜೀವನಾದರ್ಶ ಮುಂದಿನ ಪೀಳಿಗೆಗೆ ಉತ್ತಮವಾದ ಸಂದೇಶವಾಗಿದ್ದು ಎಲ್ಲರು ತುಂಬಾ ಆಸಕ್ತಿಯಿಂದ ಧಾರವಾಹಿ ವೀಕ್ಷಿಸಲು ಕಾಯುತ್ತಿರುತ್ತಾರೆ.
ಆದರೆ ವಿದ್ಯುತ್ ಸಮಸ್ಯೆಯಿಂದ ಜನರಿಗೆ ತೀವ್ರ ನಿರಾಸೆಯಾಗುತ್ತಿದೆ.ಆದ್ದರಿಂದ ನಿತ್ಯವು ಸಂಜೆ 6 ರಿಂದ 7 ಗಂಟೆಯ ವರೆಗೆ ವಿದ್ಯುತ್ ಕಡಿತ ಮಾಡಬೇಡಿ ಎಂದು ಮನವಿ ಮಾಡುತ್ತೇವೆ.ನಮ್ಮ ಮನವಿಯನ್ನು ನಿರ್ಲಕ್ಷಿಸಿದಲ್ಲಿ ನಮ್ಮ ಸಂಘಟನೆಯಿಂದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
ನಂತರ ಜೆಸ್ಕಾಂ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಗೆ ಬರೆದ ಮನವಿಯನ್ನು ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಸಂಘಟನಾ ಸಂಚಾಲಕ ಶಿವಲಿಂಗ ಹಸನಾಪುರ ತಾಲೂಕು ಸಂಚಾಲಕ ವೀರಭದ್ರಪ್ಪ ದೊಡ್ಮನಿ ತಳವಾರಗೇರಾ ಮುಖಂಡರಾದ ತಿಪ್ಪಣ್ಣ ಶೆಳ್ಳಗಿ ರಮೇಶ ಬಡಿಗೇರ ಬಾಚಿಮಟ್ಟಿ ಮರಲಿಂಗ ಹುಣಸಿಹೊಳೆ ಖಾಜಾ ಅಜ್ಮೀರ ಮಾನಪ್ಪ ಶೆಳ್ಳಗಿ ಎಮ್ ಪಟೇಲ್ ಪಾರಪ್ಪ ದೇವತ್ಕಲ್ ಹುಸನಪ್ಪ ತಳವಾರ ಭೀಮರಾಯ ಮಂಗಳೂರ ಮಲ್ಲಪ್ಪ ದೊಡ್ಮನಿ ಇತರರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…