ಶಹಾಬಾದ: ಅನುದಾನಿತ ಶಾಲಾ ಮಕ್ಕಳಿಗಾಗಿ ಸರ್ಕಾರವು ಉಚಿತ ಕ್ಷೀರಭಾಗ್ಯ, ಪಠ್ಯಪುಸ್ತಕ, ವಿದ್ಯಾರ್ಥಿವೇತನ ಮುಂತಾದ ಸೌಕರ್ಯಗಳ ನೀಡುತ್ತಿದ್ದು ಅದರ ಸಂಪೂರ್ಣ ಬಳಕೆ ಮಾಡಿಕೊಳ್ಳುವ ಮೂಲಕ ಮಕ್ಕಳು ಜ್ಞಾನಿಗಳಾಗಲಿ ಎಂದು ನಗರಸಭೆಯ ಮಾಜಿ ಅಧ್ಯಕ್ಷ ಗಿರೀಶ ಕಂಬಾನೂರ ಹೇಳಿದರು.
ಅವರು ನಗರದ ಶಿವಯೋಗೇಶ್ವರ ಸ್ವಾಮಿ ಪ್ರೌಢಶಾಲೆಯ ಮಕ್ಕಳಿಗೆ ಸರ್ಕಾರದಿಂದ ಒದಗಿಸಿದ ಉಚಿತ ಪಠ್ಯ ಪುಸ್ತಕಗಳನ್ನು ವಿತರಿಸಿ ಮಾತನಾಡಿದರು.
ಸರ್ಕಾರ ಅನೇಕ ಸೌಕರ್ಯಗಳನ್ನು ನೀಡುತ್ತಿದ್ದು ಶಿಕ್ಷಣಕ್ಕಾಗಿ ಪ್ರತಿವ? ಕೋಟ್ಯಾಂತರ ರೂಪಾಯಿಗಳನ್ನು ವ್ಯಯಿಸುತ್ತಿದೆ. ಉತ್ತಮ ಸಮಾಜದ ನಿರ್ಮಾಣಕ್ಕೆ ಶಿಕ್ಷಣವು ಅಗತ್ಯವಾಗಿದ್ದು ವಿದ್ಯಾರ್ಥಿಗಳು ಸರ್ಕಾರದ ಈ ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕಿದೆ. ಶಾಲೆಯ ಶಿಕ್ಷಕರು ಸಹ ಅದನ್ನು ಸರಿಯಾಗಿ ಸದ್ಬಳಕೆ ಮಾಡಿ ಕೊಟ್ಟು ಮಕ್ಕಳ ಕಲಿಕೆಗೆ ತಾವು ಸಹಕಾರಿಗಳಾಗಿ. ಶಾಲಾ ಮಕ್ಕಳಿಗೆ ವಿದ್ಯಾವಂತರನ್ನಾಗಿ ಮಾಡಬೇಕೆಂದು ಸರಕಾರದ ಉದ್ದೇಶವಾಗಿದೆ ಇದರ ಸದುಪಯೋಗ ಪಡೆದು ಕೊಳ್ಳುವ ಮಕ್ಕಳು ಉತ್ತಮವಾಗಿ ಶಿಕ್ಷಣ ಪಡೆದು ಸಮಾಜಕ್ಕೆ ಹಾಗೂ ದೇಶಕ್ಕೆ ಉತ್ತಮ ಪ್ರಜೆಗಳಾಗಿ ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.
ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ತಿಪ್ಪಣ್ಣ ನಾಟೇಕಾರ ಮಾತನಾಡಿ, ಶಿಕ್ಷಕರು ಶ್ರಮವಹಿಸಿ ನಮ್ಮ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಿದರೆ, ಗುರುಗಳೇ ನಮ್ಮ ಪಾಲಿನ ದೇವರು ಎಂಬ ಮಾತಿಗೆ ಅರ್ಥ ಬರುತ್ತದೆ ಎಂದು ಹೇಳಿದರು.
ಮುಖ್ಯಗುರು ಶಿವಯೋಗಿ ಕಟ್ಟಿ, ಗಣೇಶ ಜಾಯಿ, ಮಹೇಂದ್ರ ದೊಡ್ಡಮನಿ, ಸುಧಾಬಾಯಿ ಕುಲಕರ್ಣಿ, ಸುರೇಶ ಕುಲಕರ್ಣಿ ಅನೇಕರು ಇದ್ದರು.