ಕಲಬುರಗಿ: ಪರಿಶಿಷ್ಠರ ಸಬಲೀಕರಣಕ್ಕಾಗಿ ರಚಿತಗೊಂಡ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಅಂಗೀಕರಿಸಲು ಅಡ್ಡಿಪಡಿಸುತ್ತಿರುವ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ ಇವರಿಗೆ ಸಚಿವ ಸಂಪುಟದಿಂದ ಕೈ ಬಿಟ್ಟು ಸದ್ಯ ನಡೆಯುತ್ತಿರುವ ಅಧಿವೇಶನದಲ್ಲಿ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ವರದಿಯನ್ನು ಅಂಗೀಕರಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಮಾದಿಗ ಸಮಾಜದ ರಾಜ್ಯಾಧ್ಯಕ್ಷ ಮಂಜುನಾಥ ಎಸ್ ಅವರು ನೇತೃತ್ರದಲ್ಲಿ ಜಿಲ್ಲಾಧಿಕಾರಿಗಳ ಕಛೇರಿ ಎದುರುಗಡೆ ಪ್ರಭು ಚವ್ಹಾಣ ಅವರ ಪ್ರತಿಕೃತಿ ದಹನ ಮಾಡಿ ಪ್ರತಿಭಟನೆಯನ್ನು ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.
ಪರಿಶಿಷ್ಠರ ಸಬಲೀಕರಣಕ್ಕಾಗಿ ರಚಿತಗೊಂಡ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಅಂಗೀಕರಿಸಲು ಅಡ್ಡಿಪಡಿಸುತ್ತಿರುವ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ ಅವರಿಗೆ ಸಚಿವ ಸಂಪುಟದಿಂದ ಕೈ ಬಿಟ್ಟು ಸದ್ಯ ನಡೆಯಿತ್ತಿರುವ ಅಧಿವೇಶವನದಲ್ಲಿ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ದಿನಾಂಕ. ೧೭-೦೯-೦೨೦೨೧ ರಂದು ನಡೆಯುವ ಪ್ರಥಮ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ರಾಜ್ಯದ ಮಾದಿಗ ಸಮುದಾಯದ ಬಹುಸಂಖ್ಯಾತರ ಸಮುದಾಯ ಹೊಂದಿರುವುದು ರಾಜ್ಯ ಸರಕಾರದ ಗಮನಕ್ಕೆ ತರಬಯುಸಲು ಮಾದಿಗ ಸಮಾಜವು ಇಚ್ಛಿಸುತ್ತದೆ ಎಂದರು.
ನ್ಯಾಯಮೂರ್ತಿ ಎ.ಜೆ. ಸದಾಶಿವ ಆರೋಗ ವರದಿ ಸಿದ್ಧಪಡಿಸಲು ಸುರ್ಧಿಘವಾಗಿ ಆರು ವರ್ಷ ಎಂಟು ತಿಂಗಳು ಕಾಲ ಸಮೀಕ್ಷೆಯನ್ನು ನಡೆಸಿದ ನ್ಯಾಯಮೂರ್ತಿ ಎ.ಜೆ. ಸದಾಶಿವ ಅವರ ಆಯೋಗವು ಪರಿಶಿಷ್ಠ ಜಾತಿಯಲ್ಲಿ ಜನಸಂಖ್ಯೆ ಆಧಾರದ ಮೇಲೆ ಒಳಮೀಸಲಾತಿ ನೀಡುವುದಕ್ಕೆ ಶಿಫಾರಸ್ಸು ಮಾಡಿದೆ. ಆದರೆ ಇಲ್ಲಿಯವರೆಗೆ ವರದಿಯನ್ನು ಕೇಂದ್ರ ಸರಕಾರಕ್ಕೆ ಅನುಷ್ಠಾನಗೊಳಿಸಲು ವಿಳಂಬಮಾಡುತ್ತಿರುವುದು ದುರದುಷ್ಠಕರವಾದ ಸಂಗತಿಯಾಗಿದೆ.
ಮೂರು ದಶಕದಿಂದ ಬೇಡಿಕೆಯಾದ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಸಚಿವ ಸಂಪುಟದಲ್ಲಿ ಅಂಗೀಕರಿಸಿ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡುವಂತೆ ಮುಖ್ಯ ಮಂತ್ರಿಗಳಿಗೆ ಬೃಹತ್ ಪ್ರತಿಭಟನೆಯ ಮುಖಾಂತರ ಕರ್ನಾಟಕ ರಾಜ್ಯ ಮಾದಿಗ ಸಮಾಜ ಕಲಬುರಗಿ ವಿಭಾಗ ಕಲಬುರಗಿ ವತಿಯಿಂದ ಚಂದ್ರಕಾಂತ ಕೆ. ನಾಟೀಕರ ಅವರ ನೇತೃತ್ವದಲ್ಲಿ ರಾಜ್ಯ ಸರಕಾರಕ್ಕೆ ಒತ್ತಾಯಿಸಲಾಗಿರುತ್ತದೆ.
ಭಾರತ ಸಂವಿಧಾನದ ವಿಧಿ ೩೪೧ (೨) ರ ಪ್ರಕಾರ ತಿದ್ದುಪಡೆ ಮಾಡಿ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗವು ವರದಿಯನ್ನು ಅತೀ ಶೀಘ್ರವಾಗಿ ಸಚಿವ ಸಂಪುಟದಲ್ಲಿ ಅನುಷ್ಠಾನಗೊಳಿಸಿ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಿಕೊಡುವಗೋಸ್ಕರ ಹಾಗೂ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವತದಿ ಅನುಷ್ಠಾನಗೊಳಿಸಲು ವಿರೋಧ ವ್ಯಕ್ತ ಪಡಿಸುತ್ತಿರುವ ಸಚಿವರಾದ ಪ್ರಭು ಚವ್ಹಾಣರವರನ್ನು ಸಚಿವ ಸಂಪುಟದಿಂದ ಕೈಬಿಡುವಂತೆ ಕರ್ನಾಟಕ ರಾಜ್ಯ ಮಾದಿಗ ಸಮಾಜ (ರಿ) ಕಲಬುರಗಿ ವಿಭಾಗ, ಕಲಬುರಗಿ ಮುಖಾಂತರ ಮತ್ತೊಮ್ಮೆ ಒತ್ತಾಯಿಸುತ್ತದೆ ಎಂದರು.
ಒಂದು ವೇಳೆ ಸಚಿವರಾದ ಪ್ರಭು ಚವ್ಹಾಣ ರವರ ಸಚಿವ ಸಂಪುಟ ಸ್ಥಾನಕ್ಕೆ ಕೈಬಿಡದಿದ್ದರೆ ಮುಂದಿನ ದಿನದಲ್ಲಿ ರಾಜ್ಯದಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತಿದೆಂದು ರಾಜ್ಯ ಸರಕಾರಕ್ಕೆ ಎಚ್ಚರಿಕ್ಕೆ ನೀಡುತ್ತೇವೆ.
ಮಾದಿಗ ಸಮಾಜದ ವಿವಿಧ ಬೇಡಿಕೆಗಳಾದ, ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಸಚಿವ ಸಂಪುಟದಲ್ಲಿ ಅಂಗೀಕರಿಸಿ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಲು ಒತ್ತಾಯ. ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ವಿರೋಧ ವ್ಯಕ್ತಪಡಿಸಿರುವ ಸಚಿವ ಪ್ರಭು ಚವ್ಹಾಣರವರನ್ನು ಸಚಿವ ಸಂಪುಟದಿಂದ ಕೈಬಿಡಲು ಒತ್ತಾಯ. ಕೇಂದ್ರ ಸಚಿವರಾದ ಎ.ನಾರಾಯಣ ಸ್ವಾಮಿ ಯವರ ಬಗ್ಗೆ ಅವಹೇಳನೆ ನೀಡಿರುವ ವ್ಯಕ್ಯಿಗಳಿಗೆ ಕಾನೂನು ಪ್ರಕಾರ ಕ್ರಮ ಕೈಗೊಂಡು ಶಿಕ್ಷೆಗೆ ಗುರಿಪಡಿಸಲು ಒತ್ತಾಯ. ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮಕ್ಕೆ ೫೦೦.೦೦ ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಕರ್ನಾಟಕ ಮಾದಿಗ ಸಮಾಜದ ಜಿಲ್ಲಾ ಉಪಾಧ್ಯಕ್ಷ ಕರ್ಣ.ಬಿ. ಕಾಳನೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದಲಿಂಗ ಸಿ. ಕಟ್ಟಿಮನಿ, ಯಡ್ರಾಮಿ ತಾಲೂಕ ಅಧ್ಯಕ್ಷ ಮಾನಪ್ಪ ಪಿ. ಹಂಗರಗಾ, ಅಫಜಲಪೂರ ತಾಲೂಕ ಸಮಾಜದ ಯುವ ಮುಖಂಡ ದೇವೆಂದ್ರ ಕಲಬಂಡಿ, ಚಿಂಚೋಳಿ ತಾಲೂಕ ಅಧ್ಯಕ್ಷ ಮರಲಿಂಗ ಸಾಗರ, ಸೇಡಂ ತಾಲೂಕ ಅಧ್ಯಕ್ಷ ಸಂಬಣ್ಣ ಭೂತಪುರ, ಕಲಬುರಗಿ ತಾಲೂಕ ಅಧ್ಯಕ್ಷ ಅಶೋಕ ಜಗದಾಳೆ, ಕಾಳಗಿ ತಾಲೂಕ ಪ್ರಧಾನ ಕಾರ್ಯದರ್ಶಿ ಶರಣಪ್ಪ ರಟಕಲ್, ಕಲಬುರಗಿ ಗ್ರಾಮೀಣ ಅಧ್ಯಕ್ಷ ಧರ್ಮಣ್ಣ ಬಿ. ಪೂಜಾರಿ ಪಟ್ಟಣ ಸೇರಿದಂತೆ ಇನ್ನಿತರರು ಇದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…