ಕಲಬುರಗಿ: ಸೆಪ್ಟೆಂಬರ್ ೧೭ ರಂದು ಕಲ್ಯಾಣ ಕರ್ನಾಟಕ ವಿಮೋಚನ ದಿನಾಚರಣೆಗೆ ಮುಖ್ಯಮಂತ್ರಿಗಳು ಆಗಮಿಸಿ, ಧ್ವಜಾರೋಹಣ ನೇರವೇರಿಸಬೇಕು. ಮತ್ತು ಸೆಪ್ಟೆಂಬರ್ ೧೭ ರಂದು ಕಲ್ಯಾಣ ಕರ್ನಾಟಕ ವಿಮೋಚನ ದಿನಾಚರಣೆ ಅಂಗವಾಗಿ ಸಾರ್ವಜನಿಕ ರಜೆ ಘೋಷಣೆ ಮಾಡಬೇಕು. ಅದರಂತೆ ತೋರಿಸಿದ ಬೇಡಿಕೆಗಳನ್ನು ಈಡೇರಿಸಬೇಕೆಂದು ಮುಖ್ಯಮಂತ್ರಿಗಳಿಗೆ ಮವಿಯನ್ನು ಮಾಡುತ್ತೇವೆ ಎಂದು ಜೈ ಕನ್ನಡಿಗರ ರಕ್ಷಣಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಸಚೀನ್ ಫರತಾಬಾದ ಅವರು ಪತ್ರಿಕಾ ಪ್ರಕಟಣೆ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಯಿತು ಎಂದರು.
ಹೈದ್ರಾಬಾದ ಕರ್ನಾಟಕ ಭಾಗಕ್ಕೆ ೧೧ ತಿಂಗಳ ತಡವಾಗಿ ಸ್ವಾತಂತ್ರ್ಯ ಸಿಕ್ಕಿರುತ್ತದೆ. ಪ್ರಯುಕ್ತ ಸೆಪ್ಟೆಂಬರ್ ೧೭ ರಂದು ಈ ಭಾಗದ ಜನರು ಸ್ವಾತಂತ್ರೋತ್ಸವನ್ನು ಆಚರಣೆ ಮಾಡುತ್ತಾ ಬರುತ್ತಿದ್ದಾರೆ. ಈ ಮುಂಚೆ ಮಾಜಿ ಮುಖ್ಯಮಂತ್ರಿ ಬಿ.ಎಸ್,ಯಡಿಯೂರಪ್ಪ ಅವರು ಹೈದ್ರಾಬಾದ ಕರ್ನಾಟಕಕ್ಕೆ ಕಲ್ಯಾಣ ಕರ್ನಾಟಕ ಎಂದು ಹೊಸದಾಗಿ ನಾಮಕರಣ ಮಾಡಿರುತ್ತಾರೆ., ರಾಜ್ಯ ಸರಕಾರ ಘೋಷಣೆ ಮಾಡಿದ ನಂತರ ಹೈದ್ರಾಬಾದ ಕರ್ನಾಟಕ ಬದಲಾಗಿ ಕಲ್ಯಾಣ ಕರ್ನಾಟಕ ಎಂದು ಕರೆಯಲಾಗುತ್ತಿರುವುದು ಹೆಮ್ಮೆಯನ್ನು ತರುತ್ತಿದೆ ಎಂದು ಸಚೀನ್ ಹೇಳಿದರು.
ಮಾಜಿ ಮುಖ್ಯಮಂತ್ರಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗಾಗಿ ರೂ. ೨೦೦ ಕೋಟಿ ರೂಪಾಯಿಗಳನ್ನು ಅನುದಾನವನ್ನು ನೀಡುತ್ತೇವೆ ಎಂದು ಘೋಷಣೆ ಮಾಡಿದ್ದರು. ಕಲಂ ೩೭೧ (ಜೆ) ಸಲುವಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಆಯುಕ್ತಾಲಯ ನಿರ್ಮಾಣ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್,ಯಡಿಯೂರಪ್ಪ ಘೋಷಣೆ ಮಾಡಿರುತ್ತಾರೆ.
ಇಲ್ಲಿನ ಸಾರ್ವಜನಿಕರು ಬೆಂಗಳೂರಿಗೆ ಹೋಗಿ ಬರಲು ತುಂಬಾ ತೊಂದರೆಯಾಗುತ್ತಿದೆ. ಮತ್ತು ಸಾರ್ವಜನಿಕರ ಹಿತದೃಷ್ಠಿಯಿಂದ ಇಲ್ಲಿಯೇ ಆಯುಕ್ತಾಲಯ ನಿರ್ಮಾಣ ಮಾಡುವುದಾಗಿ ಭರವಸೆಯನ್ನು ನೀಡಿದ್ದರು. ಆದರೆ ಇಲ್ಲಿಯವರೆಗೆ ಈ ಭಾಗಕ್ಕೆ ಆಯುಕ್ತಾಲಯ ನಿರ್ಮಾಣ ಆಗಿರುವುದಿಲ್ಲ. ಆದ್ದರಿಂದ ಹಿಂದಿನ ಮುಖ್ಯಮಂತ್ರಿಗಳ ಘೋಷಣೆಯಂತೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಆಯುಕ್ತಾಲಯ ನಿರ್ಮಾನ ಮಾಡಿ ಇಲ್ಲಿನ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಮುಖ್ಯಮಂತ್ರಿ. ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಸಚಿವರ ಸ್ಥಾನ ನೀಡಿರುವುದಿಲ್ಲ. ಮತ್ತು ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟದಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಸಚಿವರ ಸ್ಥಾನ ತಪ್ಪಿರುತ್ತದೆ. ಆದರೆ ಈಗಲಾದರೂ ಉಳಿದ ನಾಲ್ಕು ಸಚಿವ ಸ್ಥಾನಗಳಲ್ಲಿ ಒಂದು-ಎರಡು ಸಚಿವ ಸ್ಥಾನವನ್ನು ಕಲಬುರಗಿ ಜಿಲ್ಲೆಗೆ ನೀಡಬೇಕೆಂದು ಸಚೀನ್ ಫರತಾಬಾದ ಅವರು ಮನವಿ ಮಾಡಿದರು.
ಕಲಬುರಗಿ ಮಹಾನಗರ ಪಾಲಿಕೆ ಅನುದಾನದಲ್ಲಿ ಸುಮಾರು ೧೦ ಕೋಟಿ, ರೂ. ವೆಚ್ಚದಲ್ಲಿ ಜಗತ್ ವೃತ್ತದಿಂದ ಸರದಾರ ವಲ್ಲಭಭಾಯಿ ಪಟೇಲ್ ವೃತ್ತದ ವರೆಗೆ ರಸ್ತೆ ಕಾಮಗಾರಿ ಮಾಡಲಾಗಿದೆ. ಆದರೆ ಪ್ರಮುಖವಾಗಿ ಈ ರಸ್ತೆಯಲ್ಲಿ ಬರುವ ಜಗತ್ ವೃತ್ತ ಮತ್ತು ಸರದಾರ ವಲ್ಲಭಭಾಯಿ ಪಟೇಲ್ ವೃತ್ತ ಈ ಎರಡು ಪ್ರಮುಖ ವೃತ್ತಗಳು ಅಭಿವೃದ್ದಿ ಮಾಡಿರುವುದಿಲ್ಲ. ಆದರೆ ಈ ಎರಡೂ ವೃತ್ತಗಳು ಅಭಿವೃದ್ದಿಗಾಗಿ ತಲಾ ರೂ. ೫೦ ಲಕ್ಷ ಮೀಸಲಿಡಲಾಗಿದೆ. ಆದರೆ ಈ ಎರಡೂ ವೃತ್ತಗಳಲ್ಲಿ ಯಾವುದೇ ಅಭಿವೃದ್ದಿ ಮಾಡಿರುವುದಿಲ್ಲ. ಆದರೆ ರಸ್ತೆ ಅಭಿವೃದ್ದಿಗಾಗಿ ಹಣ ಕಡಿಮೆ ಬಿದ್ದಿರುತ್ತದೆ ಎಂದು ೫೦+೫೦ ಲಕ್ಷ ಒಟ್ಟು ರೂ. ೧ ಕೋಟಿ ಹಣವನ್ನು ಕೂಡ ರಸ್ತೆ ಅಭಿವೃದ್ದಿಗಾಗಿ ಮತ್ತು ರಸ್ತೆಯ ಮಧ್ಯಭಾಗದಲ್ಲಿ ಡಿವಾಡೈರ್ (ರಸ್ತೆ ವಿಭಾಚಕ) ಮಾಡಲು ಬಳಸಲಾಗಿದೆ ಎಂದು ಹೇಳುತ್ತಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಸುರೇಶ ಹನಗುಡಿ, ಅಂಬು ಮಸ್ಕಿ, ಸತೀಶ ಪರತಾಬಾದ, ಅಕ್ಷಯ, ರವಿ ವಳಕೇರಿ, ರಾಹುಲ್ ಫರತಾಬಾದ, ಸುನೀಲ್ ಚವ್ಹಾಣ ಸೇರಿದಂತೆ ಇನ್ನಿತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…