ಬಿಸಿ ಬಿಸಿ ಸುದ್ದಿ

ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವುದೇ ನಮ್ಮ ಗುರಿ: ವಿಜಯಕುಮಾರ

ಶಹಾಬಾದ: ಮುಂಬರುವ ತಾಪಂ,ಜಿಪಂ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವುದೇ ಎಲ್ಲಾ ಕಾರ್ಯಕರ್ತರ ಮುಖಂಡರ ಗುರಿಯಾಗಬೇಕೆಂದು ಕಾಂಗ್ರೆಸ್ ಮುಖಂಡ ವಿಜಯಕುಮಾರ ರಾಮಕೃಷ್ಣ ಹೇಳಿದರು.

ಅವರು ಸೋಮವಾರ ನಗರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಲಾದ ಸಭೆಯಲ್ಲಿ ಮಾತನಾಡಿದರು. ಈಗಾಗಲೇ ಶಹಾಬಾದನಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದೆ.ಯಾವಾಗಲೂ ಪಕ್ಷಕ್ಕೆ ಹೆಚ್ಚಿನ ಲೀಡ್ ನೀಡಿರುವ ಪ್ರದೇಶ.ಇಲ್ಲಿನ ಕಾರ್ಯಕರ್ತರು ಕ್ರೀಯಾಶೀಲರಾಗಿದ್ದಾರೆ.ಅಲ್ಲದೇ ನಗರಸಭೆಯ ೨೭ ಸದಸ್ಯರಲ್ಲಿ ೨೨ ಜನ ಸದಸ್ಯರು ಕಾಂಗ್ರೆಸ್ ಪಕ್ಷದಿಂದಲೇ ಗೆಲುವು ಸಾಧಿಸಿ ನಗರಸಭೆಯ ಚುಕ್ಕಾಣಿಯನ್ನು ಪಡೆದುಕೊಂಡಿದೆ.

ಮೊದಲಿನಿಂದಲೂ ಇಲ್ಲಿ ಹೆಚ್ಚಿನ ಮತವನ್ನು ಪಕ್ಷ ಪಡೆದುಕೊಂಡು ಬಂದಿದೆ. ಮುಂಬರುವ ತಾಪಂ,ಜಿಪಂ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದಿಂದ ಯಾರೇ ಅಭ್ಯರ್ಥಿಯಾಗಲಿ, ನಿಮ್ಮ ನಿಮ್ಮ ನಗರಸಭೆಯ ಚುನಾವಣೆಯಲ್ಲಿ ಗೆಲುವು ಸಾಧಿಸಲು ಯಾವ ರೀತಿ ತಂತ್ರ ಅನುಸರಿಸಿದಿರೋ ಅದೇ ರೀತಿ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಜವಾಬ್ದಾರಿ ತಮ್ಮದು ಎಂದು ಹೇಳಿದರು.

ಶಹಾಬಾದ ಬ್ಲಾಕ್ ಕೆಪಿಸಿಸಿ ಉಸ್ತುವಾರಿ ರಾಜಾಮೈನೋದ್ದಿನ್ ಜಮಾದಾರ ಮಾತನಾಡಿ, ಪಕ್ಷವನ್ನು ಬೂತ್ ಮಟ್ಟದಲ್ಲಿ ಬಲಪಡಿಸಬೇಕು. ಪಕ್ಷವನ್ನು ಸಂಘಟನೆ ಮಾಡಲು ಅನೇಕ ರೂರೇಷೆಗಳನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕರ್ತರು ಪಕ್ಷದ ಸಂಘಟನೆ ಮಾಡುವ ಮೂಲಕ ೨೦೨೩ರಲ್ಲಿ ಪಕ್ಷವನ್ನು ಅಧಿಕಾರಕ್ಕೆ ಬರಲು ಪ್ರಯತ್ನಿಸಬೇಕೆಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ, ಉಪಾಧ್ಯಕ್ಷ ವಿಜಯಕುಮಾರ ಮುಟ್ಟತ್ತಿ, ನಗರಸಭೆಯ ಮಾಜಿ ಅಧ್ಯಕ್ಷ ಗಿರೀಶ ಕಂಬಾನೂರ, ಎಪಿಎಮ್‌ಸಿ ಸದಸ್ಯ ವಿಶ್ವರಾಧ್ಯ ಬೀರಾಳ ವೇದಿಕೆಯ ಮೇಲಿದ್ದರು.

ಮೃತ್ಯುಂಜಯ್ ಹಿರೇಮಠ, ಇನಾಯತಖಾನ ಜಮಾದಾರ,ಡಾ.ಅಹ್ಮದ್ ಪಟೇಲ್, ಮಹ್ಮದ್ ಬಾಕ್ರೋದ್ದಿನ್, ರಾಜೇಶ ಯನಗುಂಟಿಕರ್,ಕಿರಣಬಾಬು ಕೋರೆ,ಮೆಹಬೂಬ,ಶ್ರವಣಕುಮಾರ, ಶರಣು ಪಗಲಾಪೂರ,ಸೂರ್ಯಕಾಂತ ಕೋಬಾಳ,ನಾಗೇಂದ್ರ ನಾಟೀಕಾರ,ಮ.ಇಮ್ರಾನ್, ಮುನ್ನಾ ಪಟೇಲ್,ರಾಜು ಮೇಸ್ತ್ರಿ, ಅವಿನಾಶ ಕಂಬಾನೂರ, ನಾಗರಾಜ ಕರಣಿಕ, ಶಿವಕುಮಾರ ನಾಟೀಕಾರ, ರಾಕೇಶ ಸೇರಿದಂತೆ ಅನೇಕರು ಇದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

58 mins ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

59 mins ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 hour ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

18 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

20 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago