ಕಲಬುರಗಿ: ಕೇಂದ್ರದ ಮಾಜಿ ಸಚಿವ, ರಾಜ್ಯ ಸಭಾ ಸದಸ್ಯ ಹಾಗೂ ಹಿರಿಯ ರಾಜಕಾರಣಿ ಆಸ್ಕರ್ ಫನಾರ್ಂಡಿಸ್ (80) ಅವರು ಸೋಮವಾರ ನಿಧನ ಹೊಂದಿದ್ದು, ಮಾಜಿ ಸಚಿವ ಹಾಗೂ ನಿಜ ಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರಾದ ಬಾಬುರಾವ್ ಚಿಂಚನಸೂರ ಅವರು ಸಂತಾಪ ಸೂಚಿಸಿದ್ದಾರೆ.
ಫನಾರ್ಂಡಿಸ್ ಅಗಲಿಕೆಯಿಂದ ದೇಶದ ರಾಜಕಾರಣಕ್ಕೆ ಅಪಾರ ನಷ್ಟವುಂಟಾಗಿದೆ ಎಂದು ಕಂಬನಿ ಮಿಡಿದಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾಗೂ ಅವರ ಅಗಲಿಕೆಯ ನೋವನ್ನು ಕುಟುಂಬಕ್ಕೆ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಚಿಂಚನಸೂರ ಅವರು ಕೋರಿದ್ದಾರೆ.