ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹಲವು ಮಹತ್ತರ ಬೆಳವಣಿಗೆಗಳು ಕೇಳಿ ಬರುತ್ತಿದ್ದು, ರಾಜ್ಯ ಸರಕಾರ ಆಗಬಿಳಬಹುದು ಈಗ ಬಿಳಬಹುದೆಂಬ ಆತಂಕ ರಾಜ್ಯದ ಜನರಲ್ಲಿ ಕಾಡತೊಡಗಿದೆ.
ಆದರೆ ರಾಜ್ಯ ರಾಜಕೀಯದಲ್ಲಿ ಸುಮಾರು 14 ಮಂದಿ ಶಾಸಕರು ರಜೀನಾಮೆ ನೀಡಲು ಸಜ್ಜಾಗಿದ್ದಾರೆ ಎಂಬ ಮಾತುಗಳು ರಾಜ್ಯ ರಾಜಕಾರಣದಲ್ಲಿ ಜೋರಾಗಿ ಕೇಳಿಸುತ್ತಿದ್ದು, ಈ ಕುರಿತು ಸ್ವೀಕರ್ ರಮೇಶ್ ಕುಮಾರ್ ಪ್ರತಿಕ್ರಿಯಿಸಿ, ಇದೆಲ್ಲಾ ಕೇವಲ ವದಂತಿಗಳು, ಶಾಸಕರು ತಮ್ಮ ಬ್ಯುಸಿನೆಸ್ ಮಾಡಿಕೊಳ್ಳಲು ಇಂತಹ ತಂತ್ರ ನಡೆಸುತ್ತಿದ್ದಾರೆ ಎಂದು ಅತೃಪ್ತ ಶಾಸಕರ ವಿರುದ್ಧ ಹಾಗೂ ಮಾಧ್ಯಮಗಳ ವಿರುದ್ಧ ಆಕ್ರೋಶ ಹೋರಹಾಕಿದರು.
ಶಾಸಕರು ರಾಜೀನಾಮೆ ನೀಡುತ್ತಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಇಲ್ಲಿಯವರೆಗೆ ನನ್ನನ್ನು ಯಾರೂ ಸಂಪರ್ಕ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿ, ಮಾತನಾಡಿದ ಅವರು ಬರುವುದಾದರೆ ಶಾಸಕರು ಬರಲಿ ನಾನು ಇಲ್ಲಿಯೇ ಇರುತ್ತೇನೆ. ಮಾಧ್ಯಮದರು ರಾಜ್ಯದ ಜನರಿಗೆ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ರಾಜೀನಾಮೆ ನೀಡುವ ಶಾಸಕರು ಬರುವುದಾದರೆ ಬರಲಿ ನಾನು ಯಾರಿಗೂ ಕಾಯುತ್ತಾ ಕೂರುವುದಿಲ್ಲ ಎಂದು ಗರಂ ಆದರು.
ರಾಜ್ಯದಲ್ಲಿ ಈ ರೀತಿಯ ಘಟನೆಗಳು ಪ್ರಜಾಪ್ರಭುತ್ವಕ್ಕೆ ಮಾರಕ ಎಂದರು. ಅವರು ಪುಕಾರು ಹಬ್ಬಿಸಿ ಅವರ ಬಿಸಿನೆಸ್ ಮಾಡಿಕೊಳ್ಳುತ್ತಿದ್ದಾರೆ. ಎಲ್ಲದಕ್ಕೂ ಒಂದು ನಿಯಮ ಇದೆ. ಮೂರಲ್ಲ ಮೂವತ್ತು ಮಂದಿ ಬರಲಿ ನಾನೇನು ಬೇಡ ಅಂದಿದ್ದೇನಾ ಇಲ್ಲಿ ತನಕ ಯಾರೂ ನನ್ನನ್ನು ಸಂಪರ್ಕ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.