ಬಿಸಿ ಬಿಸಿ ಸುದ್ದಿ

ಅತೃಪ್ತ ಶಾಸಕರು ತಮ್ಮ ಬ್ಯುಸಿನೆಸ್ ಮಾಡಿಕೊಳ್ಳಲು ರಾಜೀನಾಮೆ ತಂತ್ರ ನಡೆಸುತ್ತಿದ್ದಾರೆ: ಸ್ಪಿಕರ್ ರಮೇಶ ಕುಮಾರ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹಲವು ಮಹತ್ತರ ಬೆಳವಣಿಗೆಗಳು ಕೇಳಿ ಬರುತ್ತಿದ್ದು, ರಾಜ್ಯ ಸರಕಾರ ಆಗಬಿಳಬಹುದು ಈಗ ಬಿಳಬಹುದೆಂಬ ಆತಂಕ ರಾಜ್ಯದ ಜನರಲ್ಲಿ ಕಾಡತೊಡಗಿದೆ.

ಆದರೆ ರಾಜ್ಯ ರಾಜಕೀಯದಲ್ಲಿ  ಸುಮಾರು 14 ಮಂದಿ ಶಾಸಕರು ರಜೀನಾಮೆ ನೀಡಲು ಸಜ್ಜಾಗಿದ್ದಾರೆ ಎಂಬ ಮಾತುಗಳು ರಾಜ್ಯ ರಾಜಕಾರಣದಲ್ಲಿ ಜೋರಾಗಿ ಕೇಳಿಸುತ್ತಿದ್ದು, ಈ ಕುರಿತು ಸ್ವೀಕರ್ ರಮೇಶ್ ಕುಮಾರ್ ಪ್ರತಿಕ್ರಿಯಿಸಿ, ಇದೆಲ್ಲಾ ಕೇವಲ ವದಂತಿಗಳು, ಶಾಸಕರು ತಮ್ಮ ಬ್ಯುಸಿನೆಸ್ ಮಾಡಿಕೊಳ್ಳಲು ಇಂತಹ ತಂತ್ರ ನಡೆಸುತ್ತಿದ್ದಾರೆ ಎಂದು ಅತೃಪ್ತ ಶಾಸಕರ ವಿರುದ್ಧ ಹಾಗೂ ಮಾಧ್ಯಮಗಳ ವಿರುದ್ಧ ಆಕ್ರೋಶ ಹೋರಹಾಕಿದರು.

ಶಾಸಕರು ರಾಜೀನಾಮೆ ನೀಡುತ್ತಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಇಲ್ಲಿಯವರೆಗೆ ನನ್ನನ್ನು ಯಾರೂ ಸಂಪರ್ಕ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿ, ಮಾತನಾಡಿದ ಅವರು ಬರುವುದಾದರೆ ಶಾಸಕರು ಬರಲಿ ನಾನು ಇಲ್ಲಿಯೇ ಇರುತ್ತೇನೆ. ಮಾಧ್ಯಮದರು ರಾಜ್ಯದ ಜನರಿಗೆ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ರಾಜೀನಾಮೆ ನೀಡುವ ಶಾಸಕರು ಬರುವುದಾದರೆ ಬರಲಿ ನಾನು ಯಾರಿಗೂ ಕಾಯುತ್ತಾ ಕೂರುವುದಿಲ್ಲ ಎಂದು ಗರಂ ಆದರು.

ರಾಜ್ಯದಲ್ಲಿ ಈ ರೀತಿಯ ಘಟನೆಗಳು ಪ್ರಜಾಪ್ರಭುತ್ವಕ್ಕೆ ಮಾರಕ ಎಂದರು. ಅವರು ಪುಕಾರು ಹಬ್ಬಿಸಿ ಅವರ ಬಿಸಿನೆಸ್ ಮಾಡಿಕೊಳ್ಳುತ್ತಿದ್ದಾರೆ. ಎಲ್ಲದಕ್ಕೂ ಒಂದು ನಿಯಮ ಇದೆ. ಮೂರಲ್ಲ ಮೂವತ್ತು ಮಂದಿ ಬರಲಿ ನಾನೇನು ಬೇಡ ಅಂದಿದ್ದೇನಾ ಇಲ್ಲಿ ತನಕ ಯಾರೂ ನನ್ನನ್ನು ಸಂಪರ್ಕ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

5 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

5 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

5 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

21 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

23 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago