ಸುರಪುರ: ದೆಹಲಿಯಲ್ಲಿ ಮಹಿಳಾ ಪೊಲೀಸ್ ಪೇದೆ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ಮತ್ತು ಶಹಾಪುರ ತಾಲೂಕಿನ ಚಟ್ನಳ್ಳಿ ಗ್ರಾಮದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಕಾಮುಕರಿಗೆ ಗಲ್ಲುಶಿಕ್ಷೆಗೆ ನಮ್ಮ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಡಾ:ಡಿ.ಜಿ.ಸಾಗರ ಬಣ ಒತ್ತಾಯಿಸುತ್ತದೆ ಎಂದು ಸಂಘಟನೆ ಜಿಲ್ಲಾ ಸಂಘಟನಾ ಸಂಚಾಲಕ ಶಿವಲಿಂಗ ಹಸನಾಪುರ ಆಕ್ರೋಶ ವ್ಯಕ್ತಪಡಿಸಿದರು.
ದಲಿತ ಸಂಘರ್ಷ ಸಮಿತಿಯಿಂದ ನಗರದ ತಹಸೀಲ್ ಕಚೇರಿ ಮುಂದೆ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ,ದೆಹಲಿಯಲ್ಲಿ ಮಹಿಳಾ ಪೊಲೀಸ್ ಪೇದೆಯ ಮೇಲೆಯೆ ಅತ್ಯಾಚಾರ ನಡೆಸಿ ಕೊಲೆಗೈದ ರಾಕ್ಷರನ್ನು ಗಲ್ಲಿಗೇರಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.ಅಲ್ಲದೆ ಈ ಮುಂಚೆ ಮಹಿಳೆಯರ ಮೇಲೆ ಕಾಮುಕರ ಅಟ್ಟಹಾಸದ ಸುದ್ದಿಗಳನ್ನು ಉತ್ತರ ಪ್ರದೇಶದಂತ ರಾಜ್ಯಗಳಲ್ಲಿ ಕಾಣುತ್ತಿದ್ದೇವು.ಆದರೆ ಈಗ ನಮ್ಮ ಪಕ್ಕದ ತಾಲೂಕಿನ ಚಟ್ನಳ್ಳಿ ಗ್ರಾಮದ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಕಾಮುಕರಿಗೆ ಗಲ್ಲು ಶಿಕ್ಷೆ ನೀಡಬೇಕು.ಮಹಿಳೆ ದೂರು ನೀಡಲೆಂದು ಕಾಯದೆ ಪೊಲೀಸ್ ಇಲಾಖೆ ಸುಮೋಟೊ ಕೇಸ್ ದಾಖಲು ಮಾಡಿಕೊಂಡು ಆರೋಪಿಗಳಿಗೆ ಕಠಿಣ ಶಿಕ್ಷೆಗೆಗುರಿಪಡಿಸುವಂತೆ ಆಗ್ರಹಿಸಿದರು.
ಇದೇ ಸಂದರ್ಭದಲ್ಲಿ ಮುಖಂಡರಾದ ಎಮ್.ಪಟೇಲ್,ದಾವೂದ್ ಇಬ್ರಾಹಿಂ ಪಟೇಲ್,ತಿಪ್ಪಣ್ಣ ಶೆಳ್ಳಗಿ ಸೇರಿದಂತೆ ಅನೇಕರು ಮಾತನಾಡಿದರು.ನಂತರ ರಾಷ್ಟ್ರಪತಿಗಳಿಗೆ ಮತ್ತು ರಾಜ್ಯಪಾಲರಿಗೆ ಬರೆದ ಮನವಿಯನ್ನು ಗ್ರೇಡ-೨ ತಹಸೀಲ್ದಾರ್ ಸೂಫಿಯಾ ಸುಲ್ತಾನರ ಮೂಲಕ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆ ತಾಲೂಕು ಸಂಚಾಲಕ ವೀರಭದ್ರಪ್ಪ ದೊಡ್ಮನಿ,ಶೇಖರ ಮಂಗಳೂರು,ಖಾಜಾ ಅಜ್ಮೀರ್,ಮರಲಿಂಗ ಗುಡಿಮನಿ,ಅಮ್ಜಾದ್ ಹುಸೇನ್,ಅಬೀದ್ ಹುಸೇನ್ ಪಗಡಿ,ಮಹ್ಮದ್ ಮೌಲಾ ಸೌದಾಗರ್,ಅಬ್ದುಲ್ ರೌಫ್,ಸಮೀರ್ ಬಾಬಾ,ಶೇಖ ಅಬ್ಬಾಸ್ ಅಲಿ,ಸಾಧ್ಧಿಕ್ ಉಮ್ರಿ ಮೌಲಾನಾ,ಇಮಾಮಸಾಬ್ ಅರಕೇರಿ,ವಸೀಮ್ ಖಾಜಿ ಸೇರಿದಂತೆ ಅನೇಕರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…