ಬಿಸಿ ಬಿಸಿ ಸುದ್ದಿ

ಪೂಜ್ಯ ದೊಡ್ಡಪ್ಪ ಅಪ್ಪಾಜಿಯವರ ಪುಣ್ಯತಿಥಿಯ ಅಂಗವಾಗಿ ಗೌರವಯುತ ಶ್ರದ್ಧಾಂಜಲಿ

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶವನ್ನು ಪ್ರಮುಖ ಶಿಕ್ಷಣ ಕೇಂದ್ರವನ್ನಾಗಿ ಪರಿವರ್ತಿಸಲು ಮೊದಲ ಬೀಜಗಳನ್ನು ಬಿತ್ತಿದ ಶರಣಬಸವೇಶ್ವರ ಸಂಸ್ಥಾನದ ೭ನೇ ಪೀಠಾಧಿಪತಿ ಪೂಜ್ಯ ದೊಡ್ಡಪ್ಪ ಅಪ್ಪಾಜಿಯವರಿಗೆ ಶರಣಬಸವ ವಿಶ್ವವಿದ್ಯಾಲಯದಲ್ಲಿ ಅವರ ೩೮ನೇ ಪುಣ್ಯತಿಥಿಯ ಅಂಗವಾಗಿ ಗೌರವಯುತ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಶರಣಬಸವ ವಿಶ್ವವಿದ್ಯಾಲಯದ ಕನ್ನಡ ಮತ್ತು ಸಂಗೀತ ವಿಭಾಗಗಳು ಜಂಟಿಯಾಗಿ ಆಯೋಜಿಸಿದ್ದ ಪುಣ್ಯಸ್ಮರಣೋತ್ಸವ ಸಮಾರಂಭದ ಆಚರಣೆಯಲ್ಲಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಹಾಗೂ ಪೂಜ್ಯ ದೊಡ್ಡಪ್ಪ ಅಪ್ಪಾಜಿಯವರ ಮೊಮ್ಮಗನಲ್ಲೊಬ್ಬರಾದ ಶ್ರೀ ಬಸವರಾಜ ದೇಶಮುಖ ಮಾತನಾಡುತ್ತಾ ಪೂಜ್ಯ ದೊಡ್ಡಪ್ಪ ಅಪ್ಪಾಜಿಯವರ ದೂರ ದೃಷ್ಠಿಯಿಂದ ಇಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘವು ೩೦,೦೦೦ ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ವಿವಿಧ ಕೋರ್ಸ್‌ಗಳನ್ನು ಕಲಿಯುತ್ತಿರುವ ಪ್ರಮುಖ ಶಿಕ್ಷಣ ಸಂಸ್ಥೆಯಾಗಿ ಹೊರ ಹೊಮ್ಮಿದೆ ಎಂದರು.

ಪೂಜ್ಯ ದೊಡ್ಡಪ್ಪ ಅಪ್ಪಾಜಿ ೧೯೩೪ ರಲ್ಲಿ ಮೊದಲ ಕನ್ನಡ ಪ್ರಾಥಮಿಕ ಶಾಲೆಯನ್ನು ಆರಂಭಿಸಲು ನಿರ್ಧರಿಸಿದಾಗ ಶಾಲೆಯಲ್ಲಿ ಪೂಜ್ಯ ದೊಡ್ಡಪ್ಪ ಅಪ್ಪಾಜಿಯವರ ಮಗಳಾದ ಹಾಗೂ ನನ್ನ ತಾಯಿ ಸೇರಿದಂತೆ ೧೦ ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿದ್ದರು, ಮತ್ತು ಇದು ಈ ಪ್ರದೇಶದ ಮಹಿಳೆಯರಿಗೆ ಶೈಕ್ಷಣಿಕ ಸಬಲೀಕರಣಕ್ಕೆ ಪೂರಕವಾಗಿದ್ದು ಇಡೀ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಸರಣಿ ಶಿಕ್ಷಣ ಸಂಸ್ಥೆಗಳ ಸ್ಥಾಪನೆಗೆ ಧ್ವನಿಗೂಡಿಸಿದ್ದಾರೆ.

ಶ್ರೀ ದೇಶಮುಖ ಅವರು, ತಮ್ಮ ಮಾತುಗಳನ್ನು ಮುಂದುವರೆಸಿ ಕಲ್ಯಾಣ ಕರ್ನಾಟಕ ಪ್ರದೇಶದ ಜನರು ಪೂಜ್ಯ ದೊಡ್ಡಪ್ಪ ಅಪ್ಪಾಜಿಯವರನ್ನು ಪೂಜಿಸಿದರು, ಶರಣಬಸವೇಶ್ವರ ಸಂಸ್ಥಾನ ಚಟುವಟಿಕೆಗಳಿಗೆ ಹೊಸ ಮಾರ್ಗದರ್ಶನ ನೀಡುವ ದಾಸೋಹ ಸಂಸ್ಕೃತಿಯನ್ನು ಮುಂದುವರಿಸಿ ನಿರ್ಗತಿಕರಿಗೆ ಉಚಿತ ಆಹಾರವನ್ನು ಒದಗಿಸುವ ಅನ್ನ ದಾಸೋಹ ಮತ್ತು “ಜ್ಞಾನ ದಾಸೋಹ” ವನ್ನು ಆರಂಭಿಸಿದರು. ಅಗತ್ಯವಿರುವ ಜನರಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವುದು ಮುಖ್ಯ ಗುರಿಯಾಗಿಸಿಕೊಂಡಿದ್ದರು. ಜನರು ಅವರನ್ನು ಕಲಬುರಗಿಯ ಎರಡನೇ ಶರಣಬಸವೇಶ್ವರರು ಎಂದು ಪ್ರೀತಿಯಿಂದ ಕರೆಯುತ್ತಿದ್ದರು.

ನಾನು ಪೂಜ್ಯ ದೊಡ್ಡಪ್ಪ ಅಪ್ಪಾಜಿಯ ಸೇವೆ ಮಾಡುವ ಭಾಗ್ಯವನ್ನು ಹೊಂದಿದ್ದೆ ಮತ್ತು ನಾನು ಪೂಜ್ಯ ದೊಡ್ಡಪ್ಪ ಅಪ್ಪಾಜಿಯವರ ಒಬ್ಬ ಕುಟುಂಬದ ವ್ಯಕ್ತಿ ಎಂದು ಹೇಳಲು ಹೆಮ್ಮೆ ಪಡುತ್ತೇನೆ ಮತ್ತು ಅವರು ತಮ್ಮ ಮಕ್ಕಳು ಮತ್ತು ಮೊಮ್ಮಕ್ಕಳ ಮೇಲೆ ಪ್ರೀತಿ ಮತ್ತು ವಾತ್ಸಲ್ಯವನ್ನು ಧಾರೆಯೆರೆಯುತ್ತಿದ್ದರು. “ಪೂಜ್ಯ ದೊಡ್ಡಪ್ಪ ಅಪ್ಪಾಜಿ ಅವರ ಹೃದಯದಲ್ಲಿ ಪ್ರಸ್ತುತ ಪೀಠಾಧಿಪತಿ ಪೂಜ್ಯ ಡಾ ಶರಣಬಸವಪ್ಪ ಅಪ್ಪಾಜಿಯವರಿಗೆ ವಿಶೇ? ಸ್ಥಾನವಿತ್ತು” ಎಂದು ದೇಶಮುಖ ತಿಳಿಸಿದರು.

ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ ಡಾ. ಅನಿಲಕುಮಾರ ಬಿಡವೆ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಪೂಜ್ಯ ದೊಡ್ಡಪ್ಪ ಅಪ್ಪಾಜಿ ಅವರು ಪ್ರಸ್ತುತ ಪೀಠಾಧಿಪತಿ ಶರಣಬಸವೇಶ್ವರ ಸಂಸ್ಥಾನದ ಪೂಜ್ಯ ಡಾ ಶರಣಬಸವಪ್ಪ ಅಪ್ಪಾಜಿಯವರನ್ನು ಉನ್ನತ ವ್ಯಾಸಂಗಕ್ಕಾಗಿ ಧಾರವಾಡಕ್ಕೆ ಕಳುಹಿಸಲು ಹಿಂಜರಿಯುತ್ತಿದ್ದರು ನಂತರ ಹೆಚ್ಚಿನ ವಿಧ್ಯಾಭ್ಯಾಸಕ್ಕಾಗಿ ಧಾರವಾಡಕ್ಕೆ ಕಳುಹಿಸಲು ನಿರ್ಧರಿಸಿದಾಗ ಶರಣಬಸವ ವಿಶ್ವವಿದ್ಯಾಲಯದ ಕನಸು ಮೊಳಕೆ ಒಡೆಯಿತು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಆಗಿನ ಉಪಕುಲಪತಿ ಡಾ ಡಿ.ಸಿ.ಪಾವಟೆ ಅವರ ಪ್ರಕಾರ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಸ್ನಾತಕೋತ್ತರ ಪದವಿ ಪಡೆಯಲು ಡಾ.ಅಪ್ಪಾಜಿ ಪ್ರಯಾಣ ಬೆಳಸಿದಾಗಲೆ, “ಶರಣಬಸವ ವಿಶ್ವವಿದ್ಯಾಲಯದ ಸ್ಥಾಪನೆಗೆ ಮೊದಲ ಬೀಜವನ್ನು ಬಿತ್ತಿದವರು ಪೂಜ್ಯ ದೊಡ್ಡಪ್ಪ ಅಪ್ಪಾಜಿ” ಎಂದು ಹೇಳಿದರು.

ಆಂಗ್ಲ ವಿಭಾಗದ ಡೀನ್ ಪ್ರೊ ಎಸ್ ಜಿ ಡೊಳ್ಳೇಗೌಡರ ಈ ಸಂದರ್ಭದಲ್ಲಿ ಮಾತನಾಡಿದರು. ಪೂಜ್ಯ ದೊಡ್ಡಪ್ಪ ಅಪ್ಪಾಜಿಯವರ ಜೀವನ ಮತ್ತು ಕೊಡುಗೆಯ ಕುರಿತು ಶರಣಬಸವೇಶ್ವರ ಕಲಾ ಕಾಲೇಜಿನಲ್ಲಿ ನಡೆದ ಭಾ?ಣ ಸ್ಪರ್ಧೆಯಲ್ಲಿ ಕ್ರಮವಾಗಿ ಪ್ರಥಮ ಮತ್ತು ತೃತೀಯ ಬಹುಮಾನಗಳನ್ನು ಗೆದ್ದ ಕನ್ನಡ ವಿಭಾಗದ ಮೂರನೇ ಸೆಮಿಸ್ಟರ್ ವಿದ್ಯಾರ್ಥಿನಿಯರಾದ ಭಾಗ್ಯಶ್ರೀ ಮತ್ತು ಸುಹಾಸಿನಿ ಅವರನ್ನು ಸನ್ಮಾನಿಸಲಾಯಿತು. ಕನ್ನಡ ವಿಭಾಗದ ಚೇರಪರ್ಸನ್ ಡಾ. ಸಾರಿಕಾದೇವಿ ಕಾಳಗಿ ಸ್ವಾಗತಿಸಿದರು ಮತ್ತು ಡಾ. ಚಿದಾನಂದ ಚಿಕ್ಕಮಠ ನಿರೂಪಿಸಿದರೆ ಡಾ.ಸುಮಂಗಲಾ ರೆಡ್ಡಿ ವಂದಿಸಿದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

8 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

8 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

8 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago