ಕಲಬುರಗಿ : ಕಟ್ಟಡ ಕಾರ್ಮಿಕರ ಯೋಜನೆಗಳು ಫಲಾನುಭವಿಗಳಿಗೆ ಮುಟ್ಟಲು ನೈಜ ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಣೆಯ ಅಭಿಯಾನ ಸ್ಥಳಗಳಲ್ಲಿ ಕ್ಯಾಂಪ್ ಗಳನ್ನು ಹಮ್ಮಿಕೊಂಡು ವಿತರಿಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಎಂದು ಆಗ್ರಹಿಸಿ ನವ ಕಲ್ಯಾಣ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘಟನೆಯು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಅವರಿಗೆ ಬೆಂಗಳೂರಿನಲ್ಲಿ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು.
ಈ ಕುರಿತು ಕಾರ್ಮಿಕ ಸಚಿವರಿಗೆ ಮನವಿ ಮಾಡಿರುವ ಅವರು ಕಟ್ಟಡ ಕಾರ್ಮಿಕರಿಗೆ ಸರಕಾರದ ಯೋಜನೆಗಳು ಕಾಲಮಿತಿಯಲ್ಲಿ ಮತ್ತು ನೈಜ ಫಲಾನುಭವಿಗಳಿಗೆ ಸಿಗುವ ನಿಟ್ಟಿನಲ್ಲಿ ವಿಶೇಷ ಮುತುವರ್ಜಿ ವಹಿಸಬೇಕು. ಮತ್ತು ಕಾರ್ಮಿಕ ಕಛೇರಿಗಳಲ್ಲಿ ಫಲಾನುಭವಿಗಳಿಲ್ಲದೇ ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಣೆಯ ಅಭಿಯಾನ ಆಯಾ ಸ್ಥಳಗಳಲ್ಲಿ ಕ್ಯಾಂಪ್‌ಗಳನ್ನು ಹಮ್ಮಿಕೊಳ್ಳುವುದರ ಮೂಲಕ ವಿತರಿಸಬೇಕು ಎಂದರು.
ಕಾರ್ಮಿಕ ಕಛೇರಿಗಳಲ್ಲಿ ಫಲಾನುಭವಿಗಳಿಲ್ಲದೇ ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿಯ ವಿತರಣೆ ನಿಲ್ಲಿಸಲು ಕ್ರಮಕೈಗೊಳ್ಳಬೇಕು. ಅದರಂತೆ ಈ ಕಾರ್ಯದಲ್ಲಿ ತೊಡಗಿಸಿಕೊಂಡು ಅಧಿಕಾರಿಗಳ ಮೇಲೆ ಶಿಸ್ತಿನ ಕ್ರಮಕೈಗೊಳ್ಳಲಾಗುವುದು. ಕಟ್ಟಡ ಕಾರ್ಮಿಕರ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಕಾರ್ಮಕ ಇಲಾಖೆ ಮತ್ತು ಕಟ್ಟಡ ಕಾರ್ಮಿಕ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆಸಲು ಸಂಬಂಧಪಟ್ಟ ಇಲಾಖೆಗೆ ಆದೇಶಿಸಬೇಕು ಎಂದು ಅವರು ಮನವಿ ಪತ್ರದಲ್ಲಿ ಕಾರ್ಮಿಕ ಸಚಿವರಿಗೆ ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಸಂಸ್ಥಾಪಕ ಅಧ್ಯಕ್ಷ ಭೀಮರಾಯ ಎಂ.ಕಂದಳ್ಳಿ, ಕಾರ್ಯದರ್ಶಿ ಮರೇಪ್ಪ ರತ್ನಡಗಿ ಇದ್ದರು.