ಬಿಸಿ ಬಿಸಿ ಸುದ್ದಿ

ಕಾರ್ಮಿಕರ ಬೇಡಿಕೆ ಈಡೇರಿಕೆಗಾಗಿ ಸಚಿವ ಶಿವರಾಮ ಹೆಬ್ಬಾರಗೆ ಮನವಿ

ಕಲಬುರಗಿ : ಕಟ್ಟಡ ಕಾರ್ಮಿಕರ ಯೋಜನೆಗಳು ಫಲಾನುಭವಿಗಳಿಗೆ ಮುಟ್ಟಲು ನೈಜ ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಣೆಯ ಅಭಿಯಾನ ಸ್ಥಳಗಳಲ್ಲಿ ಕ್ಯಾಂಪ್ ಗಳನ್ನು ಹಮ್ಮಿಕೊಂಡು ವಿತರಿಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಎಂದು ಆಗ್ರಹಿಸಿ ನವ ಕಲ್ಯಾಣ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘಟನೆಯು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಅವರಿಗೆ ಬೆಂಗಳೂರಿನಲ್ಲಿ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು.

ಈ ಕುರಿತು ಕಾರ್ಮಿಕ ಸಚಿವರಿಗೆ ಮನವಿ ಮಾಡಿರುವ ಅವರು ಕಟ್ಟಡ ಕಾರ್ಮಿಕರಿಗೆ ಸರಕಾರದ ಯೋಜನೆಗಳು ಕಾಲಮಿತಿಯಲ್ಲಿ ಮತ್ತು ನೈಜ ಫಲಾನುಭವಿಗಳಿಗೆ ಸಿಗುವ ನಿಟ್ಟಿನಲ್ಲಿ ವಿಶೇಷ ಮುತುವರ್ಜಿ ವಹಿಸಬೇಕು. ಮತ್ತು ಕಾರ್ಮಿಕ ಕಛೇರಿಗಳಲ್ಲಿ ಫಲಾನುಭವಿಗಳಿಲ್ಲದೇ ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಣೆಯ ಅಭಿಯಾನ ಆಯಾ ಸ್ಥಳಗಳಲ್ಲಿ ಕ್ಯಾಂಪ್‌ಗಳನ್ನು ಹಮ್ಮಿಕೊಳ್ಳುವುದರ ಮೂಲಕ ವಿತರಿಸಬೇಕು ಎಂದರು.

ಕಾರ್ಮಿಕ ಕಛೇರಿಗಳಲ್ಲಿ ಫಲಾನುಭವಿಗಳಿಲ್ಲದೇ ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿಯ ವಿತರಣೆ ನಿಲ್ಲಿಸಲು ಕ್ರಮಕೈಗೊಳ್ಳಬೇಕು. ಅದರಂತೆ ಈ ಕಾರ್ಯದಲ್ಲಿ ತೊಡಗಿಸಿಕೊಂಡು ಅಧಿಕಾರಿಗಳ ಮೇಲೆ ಶಿಸ್ತಿನ ಕ್ರಮಕೈಗೊಳ್ಳಲಾಗುವುದು. ಕಟ್ಟಡ ಕಾರ್ಮಿಕರ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಕಾರ್ಮಕ ಇಲಾಖೆ ಮತ್ತು ಕಟ್ಟಡ ಕಾರ್ಮಿಕ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆಸಲು ಸಂಬಂಧಪಟ್ಟ ಇಲಾಖೆಗೆ ಆದೇಶಿಸಬೇಕು ಎಂದು ಅವರು ಮನವಿ ಪತ್ರದಲ್ಲಿ ಕಾರ್ಮಿಕ ಸಚಿವರಿಗೆ ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಸಂಸ್ಥಾಪಕ ಅಧ್ಯಕ್ಷ ಭೀಮರಾಯ ಎಂ.ಕಂದಳ್ಳಿ, ಕಾರ್ಯದರ್ಶಿ ಮರೇಪ್ಪ ರತ್ನಡಗಿ ಇದ್ದರು.

emedialine

Recent Posts

KKRDB ಸಭೆ: 5,000 ಕೋಟಿ ರೂ. ಅನುದಾನಕ್ಕೆ ಕ್ರಿಯಾ ಯೋಜನೆ ರೂಪಿಸಲು ಅನುಮೋದನೆ

ಕಲಬುರಗಿ: ಪ್ರಸಕ್ತ 2024-25ನೇ ಸಾಲಿನ ಆಯವ್ಯಯದಲ್ಲಿ ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕ ಪ್ರದೇಶದ‌ ಅಭಿವೃದ್ಧಿಗೆ ಘೋಷಿಸಿರುವ 5,000 ಕೋಟಿ ರೂ.…

10 hours ago

ರೋಗಿಗಳ ಆತ್ಮವಿಶ್ವಾಸ ಹೆಚ್ಚಿಸಲು ರೋಗಿಗಳೊಂದಿಗೆ ವೈದ್ಯರು ಹೆಚ್ಚು ಮಾತಾಡಬೇಕು: ಡಾ. ಫಾರುಕ್ ಮನ್ನೂರ

ಕಲಬುರಗಿ: ರೋಗಿಗಳೊಂದಿಗೆ ವೈದ್ಯರು ಹೆಚ್ಚುಹೊತ್ತು ಮಾತನಾಡಿದಷ್ಟು ಆತ್ಮವಿಶ್ವಾಸ ರೋಗಿಗಳಲ್ಲಿ ಬೆಳೆಯುತ್ತದೆ ಜತೆಗೆ ಕಾಯಿಲೆಯ ಬಗ್ಗೆ ವೈದ್ಯರಿಗೂ ಸ್ಪಷ್ಠತೆ ಸಿಗುತ್ತದೆ. ಇದರಿಂದಾಗಿ…

11 hours ago

ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ಗ್ರಾಜುವೇಷನ್ ಡೇ

ಸುರಪುರ: ನಗರದ ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂಜಿನಿಯರಿಂಗ್, ಎಂಬಿಎ ಮತ್ತು ಎಂ.ಟೆಕ್ ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಗ್ರಾಜುವೇಷನ್ ಡೇ…

11 hours ago

ಮಹಿಳೆಯರು ಅನ್ಯಾಯದ ವಿರುದ್ಧ ನಿಲ್ಲುವುದು ಅವಶ್ಯಕ: ಶೋಭಾ.ಎಸ್

ಶಹಾಬಾದ: ಮಹಿಳೆಯರು ಅನ್ಯಾಯದ ವಿರುದ್ಧ ಹೋರಾಟದ ಜತೆಗೆ ವೈಚಾರಿಕವಾಗಿ ಗಟ್ಟಿಯಾಗಿ ನಿಲ್ಲುವುದು ಬಹಳ ಅವಶ್ಯಕ ಎಂದು ಐಎಂಎಸ್‍ಎಸ್ ರಾಜ್ಯ ಕಾರ್ಯದರ್ಶಿ…

11 hours ago

ಸರಕಾರಿ ಪದವಿಪೂರ್ವ ಕಾಲೇಜಿಗೆ ಮೂಲಸೌಲಭ್ಯ ಒದಗಿಸಬೇಕೆಂದು ಪ್ರತಿಭಟನೆ

ಶಹಾಬಾದ: ನಗರದ ಸರಕಾರಿ ಪದವಿಪೂರ್ವ ಕಾಲೇಜಿಗೆ ಖಾಯಂ ಉಪನ್ಯಾಸಕರನ್ನು ನೇಮಿಸಬೇಕು ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಸೋಮವಾರ ಎಐಡಿಎಸ್‍ಓ…

11 hours ago

ವೈದ್ಯರು, ಪತ್ರಕರ್ತರಿಗಿದು ಸವಾಲಿನ ಸಮಯ: ಪೊಲೀಸ್ ಕಮೀಷರನರ್ ಚೇತನ್ ಆರ್

ಕಲಬುರಗಿ: ಇಂಟರ್ನೆಟ್ ಮತ್ತು ಸಾಮಾಜಿಕ ಮಾಧ್ಯಮಗಳು ಉಚ್ಛ್ರಾಯ ಸ್ಥಿತಿಯಲ್ಲಿರುವ ಇಂದಿನ ದಿನಗಳಲ್ಲಿ ವೈದ್ಯರು ಮತ್ತು ಪತ್ರಕರ್ತರು ಸವಾಲಿನ ಸನ್ನಿವೇಶಗಳನ್ನು ಎದುರಿಸುತ್ತಿದ್ದಾರೆ…

11 hours ago