ಸುರಪುರ: ತಾಲೂಕಿನ ಚಿಂಚೋಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಿಕ್ಷಕರನ್ನು ನೇಮಿಸದಿದ್ದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ಮುಳ್ಳು ಬೇಲಿ ಹಚ್ಚಿ ಪ್ರತಿಭಟನೆ ನಡೆಸಲಾಗುವುದು ಎಂದು ಮಲ್ಲಿಕಾರ್ಜುನ ಕ್ರಾಂತಿ ಎಚ್ಚರಿಸಿದರು.
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣದಿಂದ ನಗರದ ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ,ಚಿಂಚೋಳಿ ಶಾಲೆಯಲ್ಲಿ ಎರಡು ನೂರು ಜನ ವಿದ್ಯಾರ್ಥಿಗಳಿದ್ದು ಕೇವಲ ಇಬ್ಬರು ಶಿಕ್ಷಕರಿದ್ದಾರೆ.ಇದರಿಂದ ಮಕ್ಕಳು ಸರಿಯಾದ ವಿದ್ಯೆ ದೊರೆಯದೆ ಶಿಕ್ಷಣದಿಂದ ವಂಚಿತರಾಗಿದ್ದಾರೆ.ಆದ್ದರಿಂದ ಕೂಡಲೇ ಕ್ಷೇತ್ರಶಿಕ್ಷಣಾಧಿಕಾರಿಗಳು ಚಿಂಚೋಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಇನ್ನುಳಿದ ಏಳು ಜನ ಶಿಕ್ಷಕರನ್ನು ನೇಮಿಸಬೇಕು,ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಮುಳ್ಳು ಬೇಲಿ ಪ್ರತಿಭಟನೆ ನೆಡಯಲಿದೆ ಎಂದು ಎಚ್ಚರಿಸಿದರು.
ನಂತರ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಬರೆದ ಮನವಿಯ್ನ ದೈಹಿಕ ಶಿಕ್ಷಣಾಧಿಕಾರಿಗಳ ಮೂಲಕ ಸಲ್ಲಿಸಿದರು.ಪ್ರತಿಭಟನೆಯಲ್ಲಿ ಮುಖಂಡರಾದ ಅಜೀಜ್ ಸಾಬ್ ಐಕೂರ್,ಮಲ್ಲಿಕಾರ್ಜುನ ಕುರಕುಂದಿ,ಡಾ:ಮಲ್ಲಿಕಾರ್ಜುನ ಆಶನಾಳ,ನಿಂಗಪ್ಪ ಕಟಗಿ ಶಹಾಪುರ,ಮಾನಪ್ಪ ಬಿಜಾಸಪುರ,ಮಹಾದೇವಪ್ಪ ಬಿಜಾಸಪುರ,ಬುದ್ಧಿವಂತ ನಾಗರಾಳ,ಚಂದ್ರಶೇಖರ ಹಸನಾಪುರ,ಜಟ್ಟೆಪ್ಪ ನಾಗರಾಳ,ಮಲ್ಲಿಕಾರ್ಜುನ ಶಾಖಾನವರ್ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…