ಸುರಪುರ: ತಾಲೂಕಿನ ಕೃಷ್ಣಾಪುರ,ದೇವಿಕೇರಾ,ರತ್ತಾಳ, ದೇವರಗೋನಾಲ,ಮಾಚಗುಂಡಾಳ ಮತ್ತು ಮಾಲಗತ್ತಿ ಶಾಲೆಗಳಿಗೆ ಲೋಕಾಯುಕ್ತ ಪೊಲೀಸ್ ಇನ್ಸ್ಪೇಕ್ಟರ್ ಅರುಣಕುಮಾರ ಭೇಟಿ ನೀಡಿದರು.
ಗುರುವಾರ ಬೆಳಿಗ್ಗೆಯಿಂದ ಎಲ್ಲಾ ಶಾಲೆಗಳಿಗೆ ಭೇಟಿ ನೀಡಿ ಮಾತನಾಡಿದ ಅವರು,ಗೌರವಾನ್ವಿತ ಲೋಕಾಯುಕ್ತರ ಆದೇಶದಂತೆ ಹಾಗು ಲೋಕಾಯುಕ್ತ ಎಸ್ಪಿಯವರಾದ ಎ.ಆರ್.ಕರ್ನೂಲರವರ ಮಾರ್ಗದರ್ಶನದಂತೆ ಇಂದು ತಾಲೂಕಿನ ವಿವಿಧ ಗ್ರಾಮಗಳ ಪ್ರೌಢಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ.ಅಲ್ಲದೆ ಎಲ್ಲಾ ಶಾಲೆಗಳಲ್ಲೂ ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಎಲ್ಲಾ ಶಾಲೆಗಳಲ್ಲಿನ ಸ್ವಚ್ಛತೆ ಪರಿಶೀಲನೆಯನ್ನು ನಡೆಸಿದರು ಮತ್ತು ಅಡುಗೆ ಕೋಣೆಗಳನ್ನು ವೀಕ್ಷಿಸಿದರು.ಈ ಸಂದರ್ಭದಲ್ಲಿ ಲೋಕಾಯುಕ್ತ ಸಿಬ್ಬಂದಿಗಳಾದ ಸುರೇಶ ಮಾಮನಿ, ಹೆಚ್.ಸಿಗಳಾದ ಹಣಮಂತರಾಯ,ನಾಗರಾಜ ಹಾಗು ಪಿ.ಸಿ ಮಲ್ಲಿಕಾರ್ಜುನ ಸೇರಿದಂತೆ ಎಲ್ಲಾ ಶಾಲೆಗಳ ಮುಖ್ಯೋಪಾದ್ಯಾಯರು ಮತ್ತು ಶಿಕ್ಷಕರು ಹಾಜರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…