ಬಿಸಿ ಬಿಸಿ ಸುದ್ದಿ

ಜನರಿಗೆ ಲಸಿಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಪ್ರೇರೇಪಿಸಿ: ಗುರಲಿಂಗಪ್ಪ

ಶಹಾಬಾದ: ನಗರಸಭೆಯ ಎಲ್ಲಾ ಸರ್ವ ಸದಸ್ಯರು ತಮ್ಮ ತಮ್ಮ ವಾರ್ಡಗಳಲ್ಲಿನ ಜನರಿಗೆ ಲಸಿಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಪ್ರೇರೇಪಿಸಿ ಲಸಿಕೆ ತೆಗೆದುಕೊಳ್ಳುವಂತೆ ಮಾಡುವುದು ನಿಮ್ಮ ಕರ್ತವ್ಯ ಎಂದು ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ಹೇಳಿದರು.
ಅವರು ಶುಕ್ರವಾರ ಕೋವಿಡ್ ಲಸಿಕಾ ಅಭಿಯಾನದ ನಿಮಿತ್ತ ನಗರಸಭೆಯ ಸಭಾಂಗಣದಲ್ಲಿ ಆಯೋಜಿಸಲಾದ ಸಭೆಯಲ್ಲಿ ಮಾತನಾಡಿದರು.

ಈಗಾಗಲೇ ಬಹುತೇಖ ಜನರು ಕೋವಿಡ್ ಲಸಿಕೆ ತೆಗೆದುಕೊಂಡಿದ್ದಾರೆ.ಆದರೆ ಕೆಲವು ಜನರು ಅಸಡ್ಡೆ, ನಿರಾಸಕ್ತಿ ತೋರುತ್ತಿರುವುದು ಕಂಡು ಬರುತ್ತಿದೆ. ಕೋವಿಡ್ ಮೂರನೇ ಅಲೆ ಬರುವ ಮುನ್ನವೇ ನಗರದಲ್ಲಿ ಎಲ್ಲರೂ ಲಸಿಕೆ ಪಡೆದರೆ, ಕೋವಿಡ್ ವಿರುದ್ಧ ಹೋರಾಡುವ ರೋಗ ನಿರೋಧಕ ಶಕ್ತಿ ಉಂಟಾಗುತ್ತದೆ.ಆದ್ದರಿಂದ ತಮ್ಮ ತಮ್ಮ ವಾರ್ಡಗಳಲ್ಲಿ ಲಸಿಕೆ ತೆಗೆದುಕೊಳ್ಳದ ಜನರನ್ನು ಗುರುತಿಸಿ, ಲಸಿಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಪ್ರೇರೇಪಿಸಿ ತೆಗೆದುಕೊಳ್ಳುವಂತೆ ಮಾಡುವುದು ಮತ್ತು ಕೋವಿಡ್ ಮುಕ್ತ ವಾರ್ಡ ಆಗಿ ಮಾಡುವುದು ನಿಮ್ಮ ಕರ್ತವ್ಯ.ಈಗಾಗಲೇ ನಗರ ಪ್ರದೇಶಕ್ಕೆ ೪೩೦೦ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ೫೩೦೦ ಸೇರಿದಂತೆ ಒಟ್ಟು ೧೦೦೦೦ ಲಸಿಕೆಯ ಗುರಿಯನ್ನು ನೀಡಲಾಗಿದೆ. ನಗರದ ಪ್ರದೇಶದಲ್ಲಿ ೧೮ ಕೇಂದ್ರಗಳನ್ನು ತೆರೆಯಲಾಗಿದೆ.ಅದನ್ನು ಯಶಸ್ವಿಯಾಗಿ ಮಾಡಲು ಎಲ್ಲರ ಸಹಕಾರ ಮುಖ್ಯ ಎಂದು ಹೇಳಿದರು.

ಡಾ.ಶಂಕರ ರಾಠೋಡ ಮಾತನಾಡಿ, ನಗರಸಭೆಯ ಸದಸ್ಯರು ತಾವು ಲಸಿಕೆ ಪಡೆದುಕೊಂಡಿರದಿದ್ದರೇ ಶುಕ್ರವಾರ ಕೋವಿಡ್ ಲಸಿಕಾ ಅಭಿಯಾನದಲ್ಲಿ ತಾವು ಲಸಿಕೆ ಪಡೆದುಕೊಳ್ಳಬೇಕು.ಸರ್ಕಾರ ಸಾರ್ವಜನಿಕರಿಗೋಸ್ಕರ ಲಸಿಕಾ ಅಭಿಯಾನ ಹಮ್ಮಿಕೊಂಡಿದ್ದು ಇದರ ಸದುಪಯೋಗವಾಗುವ ನಿಟ್ಟಿನಲ್ಲಿ ಎಲ್ಲರೂ ಸಹಕಾರ ನೀಡಬೇಕು.ಕೋವಿಡ್ ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮವಿಲ್ಲ ಎಂಬುದನ್ನು ಜನರಿಗೆ ಮನವರಿಕೆ ಮಾಡಿ. ಅಲ್ಲದೇ ಸಮುದಾಯದಲ್ಲಿ ಕೋವಿಡ್ ಹರಡದಂತೆ ಮಾಡಲು ಕೋವಿಡ್ ಲಸಿಕೆ ಪಡೆಯುವುದು ಅಗತ್ಯವಿದೆ ಎಂದು ಹೇಳಿದರು.

ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ, ಉಪಾಧ್ಯಕ್ಷೆ ಸಲೀಮಾ ಬೇಗಂ, ಉಪತಹಸೀಲ್ದಾರ ಮಲ್ಲಿಕಾರ್ಜುನ ರೆಡ್ಡಿ, ಪರಿಸರ ಅಭಿಯಂತರ ಮುಜಾಮಿಲ್ ಅಲಂ, ಎಇ ಶಾಂತರೆಡ್ಡಿ ದಂಡಗುಲಕರ್, ವ್ಯವಸ್ಥಾಪಕ ಶರಣಗೌಡ ಪಾಟೀಲ, ಕಂದಾಯ ಅಧಿಕಾರಿ ಸುನೀಲಕುಮಾರ ವೀರಶೆಟ್ಟಿ, ಸಮುದಾಯ ಸಂಘಟಕ ಅಧಿಕಾರಿ ರಘುನಾಥ ನರಸಾಳೆ,ಆರೋಗ್ಯ ನಿರೀಕ್ಷಕರಾದ ಶಿವರಾಜಕುಮಾರ, ರಾಜೇಶ, ಶರಣು ಸೇರಿದಂತೆ ಸರ್ವ ಸದಸ್ಯರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

11 mins ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

10 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

10 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

10 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago