ಶಹಾಬಾದ: ಸರ್ಕಾರ ರೈತರ ಮಕ್ಕಳಿಗೆ ಶಿ? ವೇತನ ನೀಡುವ ಮುಖ್ಯಮಂತ್ರಿಗಳ ರೈತ ವಿದ್ಯಾ ನಿಧಿ ಯೋಜನೆ ಉದ್ಘಾಟನೆ ಮಾಡಲಾಗಿದ್ದು, ಇನ್ನೂ ಕೆಲವೇ ದಿನಗಳಲ್ಲಿ ಜಾರಿಗೆ ಬರಲಿದ್ದು ಅದರ ಸಂಪೂರ್ಣ ಮಾಹಿತಿ ಪಡೆದುಕೊಂಡು ಸದುಪಯೋಗ ಪಡೆದುಕೊಳ್ಳಬೇಕೆಂದು ಚಿತ್ತಾಪೂರ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕ ಸಂಜೀವಕುಮಾರ ಮಾನಕರ್ ಹೇಳಿದರು.
ಅವರು ನಗರದ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಮುಖ್ಯಮಂತ್ರಿಗಳ ರೈತ ವಿದ್ಯಾ ನಿಧಿ ಯೋಜನೆಯ ಕುರಿತು ಆಯೋಜಿಸಲಾದ ಸಭೆಯಲ್ಲಿ ಮಾತನಾಡಿದರು.
ರೈತರ ಮಕ್ಕಳು ಹೆಚ್ಚಿನ ಹಾಗೂ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ಹೊಸ ಸ್ಕಾಲರ್‌ಶಿಪ್ ಯೋಜನೆ ಜಾರಿಗೆ ತರಲಾಗಿದೆ. ರಾಜ್ಯದ ಯಾವುದೇ ಭಾಗದಲ್ಲಿ ಉಳುಮೆ, ಕೃಷಿ ಮಾಡುವಂತಹ ಜಮೀನನ್ನು ತನ್ನ ಹೆಸರಿನಲ್ಲಿರುವ ವ್ಯಕ್ತಿಯನ್ನು ರೈತ ಎಂದು ಪರಿಗಣಿಸಲಾಗುವುದು. ಅವರು ಕಾನೂನು ಪ್ರಕಾರ ದತ್ತು ಪಡೆದಿರುವ ಮಕ್ಕಳು ಸೇರಿದಂತೆ ಸಂಬಂಧಪಟ್ಟರೈತರ ಮಕ್ಕಳು ಅರ್ಹರು. ಯಾವುದೇ ಮಕ್ಕಳಿಗೆ ಪೋ?ಕರು ಇಲ್ಲದಿದ್ದರೆ ತಮ್ಮ ಹೆಸರಿನಲ್ಲೆ ಜಮೀನು ಹೊಂದಿರಬೇಕು ಎಂದು ಹೇಳಿದರು.
ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಕಾಶಿನಾಥ ದಂಡೋತಿ, ರೈತರ ಮಕ್ಕಳು ಕರ್ನಾಟಕ ರಾಜ್ಯದ ಅನುದಾನದಿಂದ ಪಾವತಿಸುವಂತಹ ಒಂದು ವಿದ್ಯಾರ್ಥಿ ವೇತನಕ್ಕೆ ಮಾತ್ರ ಅರ್ಹರಿರುತ್ತಾರೆ. ಆದಾಗ್ಯೂ ಮೆರಿಟ್, ಅರ್ಹತಾ ಪರೀಕ್ಷೆ, ಶೈಕ್ಷಣಿಕ ಪರೀಕ್ಷೆಗಳಲ್ಲಿ ರ‍್ಯಾಂಕ್ ಇತ್ಯಾದಿಗಳ ಆಧಾರದ ಮೇಲೆ ಪಡೆಯುವ ವಿದ್ಯಾರ್ಥಿವೇತನ, ಪ್ರಶಸ್ತಿ ಹಣಗಳನ್ನು (ರಿವಾರ್ಡ್) ರೈತರ ಮಕ್ಕಳು ಪಡೆದಿದ್ದರೂ ಈ ವಿದ್ಯಾರ್ಥಿವೇತನ ಪಡೆಯಲೂ ಅರ್ಹರಿರುತ್ತಾರೆ. ಶಿಷ್ಯ ವೇತನವು ಶಿಕ್ಷಣದ ಯಾವುದೇ ಕೋರ್ಸ್‌ನ ಸೆಮಿಸ್ಟರ್, ಶೈಕ್ಷಣಿಕ ವ?ಗಳಿಗೆ ಮಾತ್ರ ಸೀಮಿತವಾಗಿರುತ್ತದೆ. ಒಂದು ಸೆಮಿಸ್ಟರ್‌ನಲ್ಲಿ ಫೇಲ್ ಆಗಿ ಮತ್ತೆ ಪುನರಾವರ್ತನೆಯಾಗುವ ಸಮಯದಲ್ಲಿ ವಿದ್ಯಾರ್ಥಿ ವೇತನ ಸಿಗುವುದಿಲ್ಲ. ವಿದ್ಯಾರ್ಥಿ ವೇತನವನ್ನು ಯಾವುದಾದರೂ ಒಂದು ವಿಧದ ಕೋರ್ಸ್‌ಗೆ ಮಾತ್ರ ನೀಡಲಾಗುವುದು. ಆದ್ದರಿಂದ ಮುಖ್ಯಮಂತ್ರಿಗಳ ರೈತ ವಿದ್ಯಾ ನಿಧಿ ಯೋಜನೆಯ ಲಾಭ ಪಡೆದುಕೊಳ್ಳಬೇಕೆಂದು ಹೇಳಿದರು.
ಕೃಷಿ ಅಧಿಕಾರಿ ಶಶಿಕಾಂತ ಭರಣಿ, ಸಕಾಯಕ ಕೃಷಿ ಅಧಿಕಾರಿ ರವೀಂದ್ರಕುಮಾರ ಸೇರಿದಂತೆ ರೈತರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…