ರಟಕಲ್ ಗ್ರಾಮದಲ್ಲಿ ಕೋವಿಡ್ ವ್ಯಾಕ್ಸಿನ್ ಗೆ ಚಾಲನೆ

0
121

ರಟಕಲ್: ಇಂದು ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿ ಕೋವಿಡ್ ಎರಡನೇ ಡೋಸ್ ಕಾರ್ಯಾಕ್ಕೆ ಭಾರತೀಯ ಜನತಾ ಪಕ್ಷದ ಓಬಿಸಿ ತಾಲೂಕ ಅಧ್ಯಕ್ಷರಾದ ಮಲ್ಲು ಎಸ್ ಮರಗುತ್ತಿ  ವ್ಯಾಕ್ಸಿನ್ ಹಾಕಿಸಿಕೊಳ್ಳುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮನೆಮನೆಗೆ ತೆರಳಿ ಎರಡನೇ ಡೋಸ್ ವ್ಯಾಕ್ಸಿನ್ ನೀಡು ಕಾರ್ಯಾ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳಾದ ಜ್ಯೋತಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಹಿರಾ ಸಿಂಗ್ ಚವಾಣ್, ರಟಕಲ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ತೇಜಮ್ಮ ಆಳಂದ್, ಉಪಾಧ್ಯಕ್ಷ ನಾಗರಾಜ್ ಎಚ್, ಸದಸ್ಯ ಜಗದೀಶ್ ಮಾಳಗಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here