ಬಿಸಿ ಬಿಸಿ ಸುದ್ದಿ

ಸ್ವಾಭಿಮಾನದ ಹೋರಾಟವೇ ಈ ನಮ್ಮ ಕಲ್ಯಾಣ ಕರ್ನಾಟಕ

ಕಲ್ಯಾಣ ಕರ್ನಾಟಕ ಉತ್ಸವ ದಿನಾಚಣೆಯು ಕೇವಲ ‘ವಿಮೋಚನಾ’ ದಿನವಾಗದೇ, ಈ ಭಾಗದ ಸ್ವಾಭಿಮಾನದ ಉತ್ಸವವೂ ಆಗಿದೆ. 1947ರ ಆಗಸ್ಟ್‌ 15ರಂದು ಭಾರತಕ್ಕೆ ಸಿಕ್ಕ ಸ್ವಾತಂತ್ರ್ಯವು ಅಹಿಂಸೆಯ ಹೋರಾಟವಾಗಿತ್ತು. ಆದರೆ, ಒಂದು ವರ್ಷದ ಬಳಿಕ; ಅಂದರೆ 1948ರ ಸೆಪ್ಟೆಂಬರ್‌ 17ರಂದು ನಿಜಾಮ ಸಂಸ್ಥಾನವನ್ನು ಒಕ್ಕೂಟ ವ್ಯವಸ್ಥೆಗೆ ಸೇರಿಸಲು ಸಂಘರ್ಷಕ್ಕೆ ಇಳಿಯುವ ಅನಿವಾರ್ಯ ಬಂದಿತ್ತು. ಇದರೊಂದಿಗೆ ಈಗಿನ ಕಲ್ಯಾಣ ಕರ್ನಾಟಕ ಭಾಗ ಕೂಡ ಭಾರತದ ಭಾಗವಾಗಿ ಪರಿಗಣಿಸಲ್ಪಟ್ಟಿತು.

ಸೆಪ್ಟೆಂಬರ್ 17 ಹೈದರಾಬಾದ್ ಕರ್ನಾಟಕ ಜನತೆಗೆ ಮರೆಯಲಾಗದ ದಿನ ನಿಜಾಮರ ಕಪಿ ಮುಷ್ಟಿಯಿಂದ ವಿಮೋಚನಾಗೊಂಡ ಪುಣ್ಯ ದಿನ. ದೇಶಕ್ಕೆ 1947 ಆಗಸ್ಟ್ 15 ರಂದು ಸ್ವತಂತ್ರ ಸಿಕ್ಕರೂ ಕೂಡ ಹೈದ್ರಾಬಾದ್ ಕರ್ನಾಟಕ ಭಾಗ ನಿಜಮಾನ ಕಪಿಮುಷ್ಟಿಯಿಂದ ಬಿಡುಗಡೆ ಗೊಂಡು ಒಂದು ವರ್ಷ ಮೂವತ್ತೇರಡು ದಿನಗಳ ನಂತರ (1948 ಸೆಪ್ಟೆಂಬರ್ 17). ದೇಶಕ್ಕೆ ಸ್ವತಂತ್ರ ಸಿಕ್ಕಿದರು ಹೈದ್ರಾಬಾದ್ ಕರ್ನಾಟಕ ನಿಜಮರ ಹಿಡಿತದಲ್ಲಿತ್ತು ನಮ್ಮ ಈ ಹೈದ್ರಾಬಾದ್ ಕರ್ನಾಟಕ ಪ್ರಾಂತ್ಯವೂ ಹಿಂದುಳಿದ ಪ್ರದೇಶ ಅಂತನೇ ಗುರುತಿಸಿಕೊಂಡಿತ್ತು ಅಭಿವೃದ್ಧಿಯಲ್ಲಿ ಮಾತ್ರ ಅಲ್ಲದೆ ಸ್ವತಂತ್ರ ಪಡೆದುಕೊಳ್ಳುವಲ್ಲಿವು ಹಿಂದೆಯೇ ಉಳಿದಿತ್ತು.

1947 ಆಗಸ್ಟ್ 15 ರಂದು ಭಾರತವು ಬ್ರಿಟಿಷರ ಗುಲಾಮಗಿರಿಯಿಂದ ಸ್ವಾತಂತ್ರ ಪಡೆಯಿತು ಆದ್ರೆ ಹೈದ್ರಾಬಾದ್ ನಿಜಾಮ್ ಆಡಳಿತಕ್ಕೆ ಒಳಪಟ್ಟಿದ್ದರಿಂದ ಈಗಿನ ಹೈದರಾಬಾದ್ ಕರ್ನಾಟಕ ಪ್ರದೇಶ ಮತ್ತು ಆಂಧ್ರ ಮಹಾರಾಷ್ಟ್ರದ ಕೆಲ ಪ್ರದೇಶಗಳು 1947 ರ ನಂತರವೂ ಕೂಡ ಸ್ವಾತಂತ್ರ್ಯ ಗೊಂಡಿರಲಿಲ್ಲ ಹೈದರಾಬಾದ್ ರಾಜ್ಯದ ನಿಜಾಮ ಮಿರ್ ಉಸ್ಮಾನ್ ಅಲಿ ಭಾರತದ ಒಕ್ಕೂಟದಲ್ಲಿ ವಿಲೀನವಾಗಲು ಸುತಾರಾಮ ಒಪ್ಪಿರಲಿಲ್ಲ ಹೈದರಾಬಾದ್‌ ಕರ್ನಾಟಕ’ ಪ್ರದೇಶಕ್ಕೆ ‘ಕಲ್ಯಾಣ ಕರ್ನಾಟಕ’ ಎಂದು ರಾಜ್ಯ ಸರ್ಕಾರ ಮರು ನಾಮಕರಣ ಮಾಡಿ ಸೆ.17ಕ್ಕೆ ಒಂದು ವರ್ಷ ವಾಯಿತು.

‘ಹೈದರಾಬಾದ್‌ ಕರ್ನಾಟಕ ವಿಮೋಚನಾ ದಿನ’ವನ್ನು ‘ಕಲ್ಯಾಣ ಕರ್ನಾಟಕ ಉತ್ಸವ’ವನ್ನಾಗಿ ಆಚರಿಸಲಾಗುತ್ತಿದೆ.  ಈ ಉತ್ಸವದ ಹೊಸ್ತಿಲಲ್ಲಿರುವ ಈ ಸಂದರ್ಭದಲ್ಲಿ ಈ ಭಾಗದ ಜನ ಸಮಸ್ಯೆಗಳ ಸಂಕೋಲೆಯಿಂದ ಮುಕ್ತವಾದರೇ?’ ಎಂದು ನಾವು ಪ್ರಶ್ನೆ ಮಾಡಿದರೆ ಅದು ಅಭಿವೃದ್ಧಿಯ ಸುಳಿಗಾಳಿ ಬೀಸುತ್ತಿದೆಯೇ ಎಂಬ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರವೇ ಸಿಗುತ್ತಿಲ್ಲ ಎನ್ನಬಹುದು.

ಬೀದರ್‌ ಮತ್ತು ಅವಿಭಜಿತ ಕಲಬುರ್ಗಿ, ರಾಯಚೂರು ಜಿಲ್ಲೆಗಳು ಹಿಂದೆ ಹೈದರಾಬಾದ್‌ ನಿಜಾಮರ ಆಡಳಿತಕ್ಕೆ ಒಳಪಟ್ಟಿದ್ದವು. ಆಗಸ್ಟ್ 15, 1947 ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ದೊರೆಯಿತು. ಆದರೆ, ಹೈದರಾಬಾದ್‌ ನಿಜಾಮ ತನ್ನ ಸಂಸ್ಥಾವನ್ನು ಸ್ವತಂತ್ರ ಭಾರತದಲ್ಲಿ ವಿಲೀನಗೊಳಿಸಲು ಒಪ್ಪದ ಕಾರಣ ಹೈದರಾಬಾದ್‌ ಕರ್ನಾಟಕದ ಈ ಭಾಗಕ್ಕೆ ಸ್ವಾತಂತ್ರ್ಯ ದೊರೆಯಲೇ ಇಲ್ಲ.

ಅಂದಿನ ಕೇಂದ್ರ ಗೃಹ ಸಚಿವ ಸರ್ದಾರ್‌ ವಲ್ಲಭಭಾಯ್‌ ಪಟೇಲ್‌ ಅವರ ಬಿಗಿ ನಿಲುವಿನಿಂದಾಗಿ ಹೈದರಾಬಾದ್‌ ನಿಜಾಮ ಸಂಸ್ಥಾನ 1948 ಸೆಪ್ಟೆಂಬರ್ 17 ರಂದು ಭಾರತ ಒಕ್ಕೂಟದಲ್ಲಿ ವಿಲೀನವಾಯಿತು. ಈ ಭಾಗಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದು ಸೆ.17ರಂದು. ಹೀಗಾಗಿ ಪ್ರತಿ ವರ್ಷವೂ ಸೆಪ್ಟೆಂಬರ್‌ 17ನ್ನು ಈ ಜಿಲ್ಲೆಗಳಲ್ಲಿ ‘ಹೈದರಾಬಾದ್‌ ಕರ್ನಾಟಕ ವಿಮೋಚನಾ ದಿನ’ ಎಂದು ಆಚರಿಸಲಾಗುತ್ತಿತ್ತು.

ಹೈದರಾಬಾದ್‌ ಕರ್ನಾಟಕದ ಹೆಸರಿನಲ್ಲಿಯೇ ದಾಸ್ಯ ಇದೆ. ಹೀಗಾಗಿ ಶರಣರ ಈ ನಾಡಿಗೆ ‘ಕಲ್ಯಾಣ ಕರ್ನಾಟಕ’ಎಂದು ನಾಮಕರಣ ಮಾಡಬೇಕು ಎಂಬ ಬೇಡಿಕೆ ಇತ್ತು. ಬಿ.ಎಸ್‌.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗುತ್ತಿದ್ದಂತೆಯೇ 2019ರ ಸೆಪ್ಟೆಂಬರ್ 17ರಂದು ಈ ಪ್ರದೇಶಕ್ಕೆ ‘ಕಲ್ಯಾಣ ಕರ್ನಾಟಕ’ ಎಂದು ಹೆಸರಿಟ್ಟರು. ಇದು ಕಲ್ಯಾಣ ಕರ್ನಾಟಕ ಉತ್ಸವದ ಎರಡನೇ ದಿನಾಚರಣೆ.

ಹೈದರಾಬಾದ್‌ ನಿಜಾಮ ಸಂಸ್ಥಾನದ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸಿ, ಈ ಸಂಸ್ಥಾನ ಸ್ವತಂತ್ರ ಭಾರತದ ಒಕ್ಕೂಟದಲ್ಲಿ ವಿಲೀನವಾಗುವಂತೆ ಮಾಡುವಲ್ಲಿ ಸರ್ದಾರ್‌ ವಲ್ಲಭಭಾಯ್‌ ಪಟೇಲ್‌ ಅವರ ಕಾರ್ಯ ಪ್ರಮುಖವಾಗಿತ್ತು. ಹೈದರಾಬಾದ್‌ ಕರ್ನಾಟಕಕ್ಕೆ ವಿಮೋಚನೆ ದೊರಕಿಸಿಕೊಟ್ಟಿದ್ದಕ್ಕಾಗಿ ಕಲಬುರ್ಗಿಯಲ್ಲಿ ಪಟೇಲ್‌ ಅವರ ಪ್ರತಿಮೆ ಸ್ಥಾಪಿಸಲಾಗಿದೆ. ಈ ಕಾರ್ಯಕ್ರಮಕ್ಕೂ ಮುನ್ನ ಪಟೇಲ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸುವುದು ಸಂಪ್ರದಾಯವಾಗಿದೆ.

ಬೆಂಗಳೂರು ನಲ್ಲಿ , ಸೆ.13- ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆಯನ್ನು ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯನ್ನಾಗಿ ಆಚರಿಸುವ ಸರ್ಕಾರದ ನಿರ್ಧಾರವನ್ನು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ವಿರೋಧ ವ್ಯಕ್ತಪಡಿಸಿದ್ದರು ಅದಕ್ಕೆ ಸ್ಪಂದಿಸಿರುವ ರಾಜ್ಯ ಸರ್ಕಾರ ಕೂಡಲೇ ಹೆಸರು ಬದಲಾವಣೆ ಮಾಡಿತು.

ಹೈದರಾಬಾದ್ ಕರ್ನಾಟಕ ಭಾಗಕ್ಕೆ ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡಿರುವ ರಾಜ್ಯ ಸರ್ಕಾರ ಹೈ-ಕಾ ವಿಮೋಚನಾ ದಿನಾಚರಣೆಯನ್ನು ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಎಂದು ಆಚರಿಸಲು ನಿರ್ಧರಿಸಿತ್ತು. ಆದರೆ, ಆ ಭಾಗದ ಜನರ ವಿರೋಧದಿಂದಾಗಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ

ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದು, ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರ್, ಕೊಪ್ಪಳ, ಬಳ್ಳಾರಿ ಜಿಲ್ಲೆಗಳನ್ನು ಒಳಗೊಂಡಂತೆ ಹೈದರಾಬಾದ್ ಕರ್ನಾಟಕ ಪ್ರದೇಶವನ್ನು ಕಲ್ಯಾಣ ಕರ್ನಾಟಕ ಎಂದು ಮರು ನಾಮಕರಣ ಮಾಡಿರುವುದನ್ನು ಸ್ವಾಗತಿಸುತ್ತೇನೆ ಎಂದು ತಿಳಿಸಿದ್ದರು.

1947ರ ಆಗಸ್ಟ್ 15ರಂದು ದೇಶಕ್ಕೆ ಸ್ವಾತಂತ್ರ್ಯ ಸಿಕ್ಕರೂ ಹೈದರಾಬಾದ್ ಕರ್ನಾಟಕ ಭಾಗಕ್ಕೆ ಸ್ವಾತಂತ್ರ್ಯ ಸಿಗದೆ ಹೈದರಾಬಾದ್ ನಿಜಾಮರ ಆಡಳಿತಕ್ಕೆ ಒಳಪಟ್ಟಿತ್ತು. ಅಂದಿನ ಗೃಹ ಸಚಿವರಾಗಿದ್ದ ಸರ್ದಾರ ವಲ್ಲಭಾಭಾಯಿ ಪಟೇಲ್ ಸೈನಿಕ ಕಾರ್ಯಾಚರಣೆ ನಡೆಸಿ ನಿಜಾಮರ ಆಡಳಿತದಿಂದ ಹೈ-ಕಾ ಭಾಗವನ್ನು ಸ್ವತಂತ್ರ ಗೊಳಿಸಿದರು. ಹಾಗಾಗಿ ಸೆಪ್ಟೆಂಬರ್ 17ಅನ್ನು ಹೈದರಾಬಾದ್ ಕರ್ನಾಟಕ ವಿಮೋಚನಾ ದಿನ ಎಂದು ಆಚರಿಸಲಾಗುತ್ತಿದೆ.

ಕಾಶಿಬಾಯಿ. ಗುತ್ತೇದಾರ
emedialine

Recent Posts

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

9 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

9 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

9 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

20 hours ago

ಬಡವರಿಗೆ ಹಣ್ಣು-ಹಂಪಲು ವಿತರಣೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ  ಜೈ ಕನ್ನಡಿಗರ…

20 hours ago