ಬಿಸಿ ಬಿಸಿ ಸುದ್ದಿ

ಹಡಪದ ಸಮಾಜ ಸರ್ವ ಸಮಾಜವನ್ನು ಕಾಳಜಿವಹಿಸುವುದು: ಕಂಬಳೇಶ್ವ ಶ್ರೀಗಳು

ಚಿತ್ತಾಪುರ: ಸಮಾಜದಲ್ಲಿ ಸರ್ವರನ್ನು ಕಾಳಜಿ ವಹಿಸುವ ಹಾಗೂ ಸಮಾನತೆಯಿಂದ ಕಾಣುದು ಸಮಾಜ ಹಡಪದ ಸಮಾಜವಾಗಿದೆ ಎಂದು ಚಿತ್ತಾಪುರ ಕಂಬಳೇಶ್ವರ ಮಠದ ಪೀಠಾಧಿಪತಿ ಷ.ಬ್ರ.ಶ್ರೀ ಸೋಮಶೇಖರ ಶಿವಾಚಾರ್ಯರು ಹೇಳಿದ್ದಾರೆ.

ಶುಕ್ರವಾರ ಪಟ್ಟಣದ ನಿಜ ಶರಣ ಅಂಬಿಗರ ಚೌಡಯ್ಯ ಭವನದಲ್ಲಿ ಹಡಪದ(ಕ್ಷೌರಿಕ) ಸಮಾಜದ ವೃತ್ತಿ ಭಾಂದವರಿಗೆ ಆಹಾರ ಕಿಟ್ ವಿತರಣಾ ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಹಡಪದ ಸಮಾಜವು ತನ್ನ ವೃತ್ತಿಯನ್ನೇ ಆಧಾರವಾಗಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದೆ ಕರೋನಾ ಸಂದರ್ಭದಲ್ಲಿ ಅನೇಕ ವರ್ಗದ ಜನರಿಗೆ ತೊಂದರೆ ಆಗಿದೆ ಅಂತೆಯೇ ಹಡಪದ ಸಮಾಜವು ಕೂಡ ತೀರಾ ಸಂಕಷ್ಟವನ್ನು ಎದುರಿಸಿದೆ.ಕ್ಷೌರವನ್ನು ತಮ್ಮ ಮೂಲ ಕೆಲಸ ಎಂದು ಜೀವನ ಮಾಡುತ್ತಿರುವ ಈ ಸಮಾಜಕ್ಕೆ ಆಹಾರ ಕಿಟ್ ವಿತರಣೆ ಮಾಡುತ್ತಿರುವುದು ಸಂತೋಷದ ಸಂಗತಿ ಎಂದರು.
ಪುರಸಭೆ ಅಧ್ಯಕ್ಷ ಚಂದ್ರಶೇಖರ ಕಾಶಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ಮಾತನಾಡಿದರು.

ಕ್ಷೇತ್ರದ ಶಾಸಕರಾದ ಪ್ರಿಯಾಂಕ್ ಖರ್ಗೆ ಅವರು ಬಡವರ,ದಿನ-ದಲಿತರ ಉದ್ದಾರಕ್ಕೆ ಹೆಗಲುಕೊಟ್ಟು ನಿಂತಿದ್ದಾರೆ. ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಹಾಗೂ ಪ್ರಗತಿಪರ ಕೆಲಸಗಳನ್ನು ಮಾಡುತ್ತಾ ಮತಕ್ಷೇತ್ರದ ಚಿತ್ರಣವನ್ನೇ ಬದಲಾವಣೆ ಮಾಡಿ ಕ್ಷೇತ್ರದ ಜನರ ಮನಸ್ಸಲ್ಲಿ ಮನೆ ಮಾತಾಗಿದ್ದರೆ ಎಂದರು.

ಈ ಸಂದರ್ಭದಲ್ಲಿ ಜಿ.ಪಂ.ಮಾಜಿ ಸದಸ್ಯ ಶಿವರುದ್ರಪ್ಪ ಭೀಣಿ,ತಾ.ಪಂ.ಮಾಜಿ ಅಧ್ಯಕ್ಷ ಜಗಣ್ಣಗೌಡ ಪಾಟೀಲ್ ರಾಮತೀರ್ಥ,ಹಣಮಂತ ಸಂಕನೂರ್, ಹಡಪದ ಸಮಾಜ ಜಿಲ್ಲಾಗೌರವ ಅಧ್ಯಕ್ಷ ಬಸವರಾಜ ಸುಗೂರ,ತಾಲೂಕ ಅಧ್ಯಕ್ಷ ರಮೇಶ ಕೊಲ್ಲೂರ್,ಶೇಖರ್ ದಂಡಗುಂಡ, ಮಲ್ಲಿಕಾರ್ಜುನ, ದೇವು ಸಂಕನೂರ್, ಕಲ್ಯಾಣಿ ಗುಂಡಗುರ್ತಿ, ಶಿವಕುಮಾರ ನಾಲವಾರ ಸೇರಿದಂತೆ ಅನೇಕರು ಇದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

10 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

12 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

19 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

19 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

20 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago