ಬಿಸಿ ಬಿಸಿ ಸುದ್ದಿ

ಕೆ.ಕೆ.ಆರ್.ಡಿ.ಬಿ 3 ಸಾವಿರ ಕೋಟಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ದಿಗೋಸ್ಕರ ಕೆ.ಕೆ.ಆರ್.ಡಿ.ಬಿಗೆ ಮೀಸಲಿಟ್ಟಿರುವ ೧೫೦೦ ಕೋಟಿ ರೂ. ಮಾರ್ಚ್ ತಿಂಗಳೊಳಗಾಗಿ ಸಮರ್ಪಕವಾಗಿ ಉಪಯೋಗಿಸಿದರೇ, ಮುಂದಿನ ದಿನಗಳಲ್ಲಿ ಇದಕ್ಕೆ ದುಪ್ಪಟ್ಟು ಅಂದರೆ ’3 ಸಾವಿರ ಕೋಟಿ’ ಹೆಚ್ಚಳವಾಗಿ ಅನುದಾನ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಇಂದು ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಕಲಬುರಗಿಗೆ ಆಗಮಿಸಿದ ಸಿಎಂ ನಗರದ ಐವಾನ್-ಇ-ಶಾಹಿ ಅತಿಥಿ ಗೃಹದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕಲಬುರಗಿ ರೈಲ್ವೆ ವಲಯ ಸ್ಥಾಪನೆ ಮಾಡಿದರೆ ಈ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳು, ಕೈಗಾರಿಕೆಗಳು ಸೇರಿದಂತೆ ಹಲವು ದೊಡ್ಡ ಪ್ರಮಾಣದ ಉದ್ಯಮಗಳು ಪ್ರಗತಿ ಸಾಧಿಸುವುದಕ್ಕೆ ಸಲೀಸಾಗುತ್ತದೆ, ಕಲ್ಯಾಣ ಕರ್ನಾಟಕದಲ್ಲಿ ಕಲಬುರಗಿಗೆ ರೈಲ್ವೆ ವಲಯಕ್ಕೆ ಹೆಚ್ಚಿನ ಮುತುವರ್ಜಿ ವಹಿಸಲಾಗುತ್ತಿದೆಗೀ ಕುರಿತಾಗಿ ಮತ್ತೊಮ್ಮೆ ಕೇಂದ್ರದ ರೈಲ್ವೆ ಸಚಿವರೊಂದಿಗೆ ಮಾತನಾಡಿ ಒತ್ತಾಯಿಸಲಿದ್ದೇನೆಂದು ಸಿಎಂ ಅವರು ತಿಳಿಸಿದರು.

ಬೀದರ್ ಟೂ ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ: ಕಲ್ಯಾಣ ಕರ್ನಾಟಕದಲ್ಲಿ ಉತ್ತಮ ರಸ್ತೆ ನಿರ್ಮಾಣ ಮಾಡಲಿಕ್ಕಾಗಿ ಬೀದರನಿಂದ ಬಳ್ಳಾರಿವರೆಗೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರದ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಟೆಕ್ಸ್ಟೈಲ್, ಫಾರ್ಮಸಿ , ಜ್ಯುವೆಲ್ಲರಿ ಪಾರ್ಕ್ ಸ್ಥಾಪನೆ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೈಗಾರಿಕೆಗಳನ್ನು ಅಭಿವೃದ್ಧಿಪಡಿಸಲು ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ, ಈ ಉದ್ದೇಶದಿಂದಲೇ ಈ ಭಾಗದಲ್ಲಿ ನಿರುದ್ಯೋಗ ತೊಡೆದು ಹಾಕಿ ಸಾಮರ್ಥ್ಯಕ್ಕೆ ತಕ್ಕಂತೆ ಟೆಕ್ಸ್ಟೈಲ್, ಜ್ಯುವೆಲ್ಲರಿ ಸೇರಿದಂತೆ ಫಾರ್ಮಸಿ ಪಾರ್ಕ್ಗಳನ್ನು ಸ್ಥಾಪನೆಗೆ ಸರ್ಕಾರ ಯೋಜನೆ ರೂಪಿಸಿದೆ ಎಂದು ಸಿಎಂ ಬೊಮ್ಮಾಯಿ ಅವರು ಪತ್ರಕರ್ತರೊಂದಿಗೆ ಮಾಹಿತಿ ಹಂಚಿಕೊಂಡರು.

ಅಲ್ಲದೇ ಬಂಡವಾಳ ಹಾಗೂ ಈ ಭಾಗದ ಜನರಿಗೆ ಉದ್ಯೋಗ ನೀಡುವ ಆಧಾರಿತದ ಮೇಲೆ ಸಣ್ಣ ಹಾಗೂ ಬೃಹತ್ ಕೈಗಾರಿಕೆಗಳನ್ನು ಸ್ಥಾಪನೆಗೆ ಅನುಮೋದನೆ ನೀಡಲಾಗುತ್ತದೆ ಎಂದರು. ಪ್ರತ್ಯೇಕ ಸಚಿವಾಲಯಕ್ಕೆ ಚರ್ಚೆ: ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರತ್ಯೇಕ ಸಚಿವಾಲಯ ನೀಡುವ ಕೂಗು ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಂಪುಟದಲ್ಲಿ ಪ್ರತ್ಯೇಕ ಸಚಿವಾಲಯ ಸ್ಥಾಪನೆಯ ಆಗು-ಹೋಗುಗಳ ಹಾಗೂ ಅದರಿಂದಾಗುವ ಮುಂದಿನ ಪರಿಣಾಮಗಳ ಕುರಿತಾಗಿ ಸಮಗ್ರ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದೆಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಉಸ್ತುವಾರಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ತೋಟಗಾರಿಕೆ, ಯೋಜನೆ,ಯಾಕರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಮುನಿರತ್ನ , ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಪ್ರದೇಶ ಮಂಡಳಿಯ ಅಧ್ಯಕ್ಷ ಹಾಗೂ ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ರಾಜಕುಮಾರ ಪಾಟೀಲ್ ತೆಲ್ಕೂರ್, ಬಸವರಾಜ ಮತ್ತಿಮಡು, ಎಂ.ಎಲ್.ಸಿ ಶಶೀಲ್ ಜಿ. ನಮೋಶಿ, ಬಿ. ಜಿ ಪಾಟೀಲ್ , ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ಅಧ್ಯಕ್ಷ ಚಂದು ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

60 mins ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 hour ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 hour ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

18 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

20 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago