ಕಲಬುರಗಿ: ಅಂದಿನ ಹೈದರಾಬಾದ್ ಪ್ರಾಂತ್ಯವನ್ನು ನಿಜಾಮ ಆಳ್ವಿಕೆಯ ನೊಗದಿಂದ ಮುಕ್ತಗೊಳಿಸುವುದನ್ನು ನೆನಪಿಸುವ ೭೪ ನೇ ಕಲ್ಯಾಣ ಕರ್ನಾಟಕ ಉತ್ಸವವನ್ನು ಕಲಬುರಗಿ ನಗರದ ಶರಣಬಸವ ವಿಶ್ವವಿದ್ಯಾಲಯದಲ್ಲಿ ಸಾಂಪ್ರದಾಯಿಕವಾಗಿ ಉತ್ಸಾಹ ಮತ್ತು ಸಂಭ್ರಮದಿಂದ ಆಚರಿಸಲಾಯಿತು.
ವಿಶ್ವವಿದ್ಯಾಲಯದ ಉಪಕುಲಪತಿ ಡಾ.ನಿರಂಜನ್ ವಿ ನಿಷ್ಠಿ ಅವರು ಬ್ರಿಟಿ? ಆಳ್ವಿಕೆಯ ೧೩ ತಿಂಗಳ ನಂತರ ೧೯೪೮ ರಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ವಿಮೋಚನೆಯ (ಕಲ್ಯಾಣ ಕರ್ನಾಟಕ ಉತ್ಸವ) ಸ್ಮರಣಾರ್ಥವಾಗಿ ರಾ?ಧ್ವಜವನ್ನು ಹಾರಿಸಿದರು.
ಈ ಸಂಧರ್ಭದಲ್ಲಿ ಸಮಕುಲಪತಿ ಪ್ರೊ ವಿ ಡಿ ಮೈತ್ರಿ, ಕುಲಸಚಿವ ಡಾ.ಅನೀಲಕುಮಾರ ಬಿಡವೆ, ಕುಲಸಚಿವ (ಮೌಲ್ಯಮಾಪನ) ಡಾ ಲಿಂಗರಾಜ ಶಾಸ್ತ್ರೀ, ಡೀನ್ ಡಾ.ಬಸವರಾಜ ಮಠಪತಿ ಹಾಗೂ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಸಂಭ್ರಮಾಚರಣೆ ನಿಮಿತ್ತ್ಯ ಭಾಗವಹಿಸಿದ ಗಣ್ಯರಿಗೆ ಮತ್ತು ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಲಾಯಿತು. ಅಂದಿನ ಉಪಪ್ರಧಾನಿ ಮತ್ತು ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಭಾವಚಿತ್ರಕ್ಕೆ ಗಣ್ಯರು ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…