ವಿಶೇಷ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

0
228

ಕಲಬುರಗಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಬಿ.ಎಡ್. ಮತ್ತು ಡಿ.ಎಡ್ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಜೈನ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ 25,000 ರೂ.ಗಳ ವಿಶೇಷ ಪ್ರೋತ್ಸಾಹಧನ ನೀಡಲಾಗುತ್ತಿದ್ದು, ಇದಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಎಜ್ಯುಕೇಶನ/ ಡಿಪಾರ್ಟ್‍ಮೆಂಟ್ ಆಫ್ ಸ್ಟೇಟ್ ಎಜ್ಯುಕೇಶನಲ್ ರಿಸರ್ಚ್ ಆಂಡ್ ಟ್ರೇನಿಂಗ್‍ದಿಂದ ಮಾನ್ಯತೆ ಪಡೆದ ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ಬಿ.ಎಡ್. ಹಾಗೂ ಡಿ.ಎಡ್ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು https://dom.karnataka.gov.in/kalaburagi/publicದಿಂದ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಖುದ್ದಾಗಿ ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಯಲ್ಲಿ 2021ರ ಅಕ್ಟೋಬರ್ 5ರ ಸಂಜೆ 5 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು.

Contact Your\'s Advertisement; 9902492681

ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಕಟ್ಟಡ ಮೊದಲನೇ ಮಹಡಿಯಲ್ಲಿರುವ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಾರ್ಯಲಯವನ್ನು, ಕಚೇರಿ ದೂರವಾಣಿ ಸಂಖ್ಯೆ 08472-247260 ಹಾಗೂ ಇಲಾಖೆಯ https://dom.karnataka.gov.in/kalaburagi/public ವೆಬ್‍ಸೆಟ್‍ನ್ನು ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here